ಆದಿಕಾಂಡ 31:41 - ಕನ್ನಡ ಸಮಕಾಲಿಕ ಅನುವಾದ41 ನಿನ್ನ ಇಬ್ಬರು ಪುತ್ರಿಯರಿಗಾಗಿ ಹದಿನಾಲ್ಕು ವರ್ಷ, ನಿನ್ನ ಮಂದೆಗಳಿಗೋಸ್ಕರ ಆರು ವರ್ಷ, ಈ ಪ್ರಕಾರ ಇಪ್ಪತ್ತು ವರ್ಷ ನಿನ್ನ ಮನೆಯಲ್ಲಿದ್ದು, ನಿನ್ನ ಸೇವೆ ಮಾಡಿದೆನು. ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಇಪ್ಪತ್ತು ವರ್ಷ ನಿನ್ನ ಮನೆಯಲ್ಲಿದ್ದೆನು. ನಿನ್ನ ಇಬ್ಬರು ಹೆಣ್ಣು ಮಕ್ಕಳಿಗೋಸ್ಕರ ಹದಿನಾಲ್ಕು ವರ್ಷವೂ ನಿನ್ನ ಆಡು ಕುರಿಗಳಿಗೋಸ್ಕರ ಆರು ವರ್ಷವೂ ಸೇವೆಮಾಡಿದೆನು. ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಇಂಥ ಪರಿಸ್ಥಿತಿಯಲ್ಲೂ ಇಪ್ಪತ್ತು ವರ್ಷ ನಿಮ್ಮ ಮನೆಯಲ್ಲಿದ್ದು ನಿಮ್ಮಿಬ್ಬರ ಹೆಣ್ಣು ಮಕ್ಕಳಿಗಾಗಿ ಹದಿನಾಲ್ಕು ವರ್ಷ ಹಾಗೂ ನಿಮ್ಮ ಆಡುಕುರಿಗಳಿಗಾಗಿ ಆರು ವರ್ಷ ದುಡಿದಿದ್ದೇನೆ. ಹೀಗಿದ್ದರೂ ಹತ್ತು ಸಾರಿ ನೀವು ನನ್ನ ಸಂಬಳವನ್ನು ಬದಲಾಯಿಸಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಇಪ್ಪತ್ತು ವರುಷ ನಿನ್ನ ಮನೆಯಲ್ಲಿದ್ದೆನು; ನಿನ್ನಿಬ್ಬರ ಹೆಣ್ಣುಮಕ್ಕಳಿಗಾಗಿ ಹದಿನಾಲ್ಕು ವರುಷವೂ ನಿನ್ನ ಆಡುಕುರಿಗಳಿಗಾಗಿ ಆರು ವರುಷವೂ ಸೇವೆ ಮಾಡಿದೆನು. ನೀನು ಹತ್ತು ಸಾರಿ ನನ್ನ ಸಂಬಳವನ್ನು ಬದಲಾಯಿಸಿದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ನಾನು ಇಪ್ಪತ್ತು ವರ್ಷ ನಿನಗೆ ಗುಲಾಮನಂತೆ ಸೇವೆ ಮಾಡಿದೆನು. ಮೊದಲ ಹದಿನಾಲ್ಕು ವರ್ಷಗಳಲ್ಲಿ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನು ಪಡೆದುಕೊಳ್ಳುವುದಕ್ಕಾಗಿ ದುಡಿದೆನು. ಕಡೆಯ ಆರು ವರ್ಷಗಳಲ್ಲಿ ನಿನ್ನ ಪಶುಗಳನ್ನು ಪಡೆದುಕೊಳ್ಳುವುದಕ್ಕಾಗಿ ದುಡಿದೆನು. ಆ ಅವಧಿಯಲ್ಲಿ ನೀನು ನನ್ನ ಸಂಬಳವನ್ನು ಹತ್ತು ಸಲ ಬದಲಾಯಿಸಿದೆ. ಅಧ್ಯಾಯವನ್ನು ನೋಡಿ |