Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:43 - ಕನ್ನಡ ಸಮಕಾಲಿಕ ಅನುವಾದ

43 ಲಾಬಾನನು ಅದಕ್ಕೆ ಉತ್ತರವಾಗಿ ಯಾಕೋಬನಿಗೆ, “ಈ ಪುತ್ರಿಯರು ನನ್ನ ಪುತ್ರಿಯರೇ, ಈ ಮಕ್ಕಳು ನನ್ನ ಮಕ್ಕಳೇ, ಈ ಮಂದೆಯು ನನ್ನ ಮಂದೆಯೇ, ಅಂತು ನೀನು ಕಾಣುವುದೆಲ್ಲಾ ನನ್ನದೇ. ಹಾಗಾದರೆ ನನ್ನ ಪುತ್ರಿಯರಿಗಾಗಲಿ, ಅವರು ಹೆತ್ತ ಮಕ್ಕಳಿಗಾಗಲಿ ನಾನು ಈ ಹೊತ್ತು ಏನು ಮಾಡಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅದಕ್ಕೆ ಲಾಬಾನನು ಯಾಕೋಬನಿಗೆ, “ಈ ಪುತ್ರಿಯರು ನನ್ನ ಪುತ್ರಿಯರಲ್ಲವೇ, ಈ ಮಕ್ಕಳು ನನ್ನ ಮೊಮ್ಮಕ್ಕಳಲ್ಲವೇ, ಈ ಹಿಂಡುಗಳೂ ನನ್ನವೇ, ನಿನ್ನ ಕಣ್ಣು ಮುಂದೆ ಇರುವುದೆಲ್ಲವೂ ನನ್ನದೇ. ಹಾಗಾದರೆ ಈ ನನ್ನ ಪುತ್ರಿಯರಿಗೋಸ್ಕರವೂ, ಇವರು ಹೆತ್ತ ಮಕ್ಕಳಿಗೋಸ್ಕರವೂ ಈಗ ನಾನೇನು ಮಾಡಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಆಗ ಲಾಬಾನನು ಯಕೋಬನಿಗೆ, “ಈ ಮಹಿಳೆಯರು ನನ್ನ ಪುತ್ರಿಯರು, ಈ ಮಕ್ಕಳು ನನ್ನ ಮೊಮ್ಮಕ್ಕಳು, ಈ ಹಿಂಡುಗಳು ನನಗೆ ಸೇರಿದವು; ನಿನ್ನ ಕಣ್ಮುಂದೆ ಇರುವುದೆಲ್ಲವೂ ನನ್ನವೇ. ಇಂತಿರುವಲ್ಲಿ ಈ ನನ್ನ ಪುತ್ರಿಯರಿಗೇ ಆಗಲಿ, ಇವರು ಹೆತ್ತ ಮಕ್ಕಳಿಗೇ ಆಗಲಿ, ನಾನೀಗ ಏನೂ ಹಾನಿ ಮಾಡಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಅದಕ್ಕೆ ಲಾಬಾನನು ಯಾಕೋಬನಿಗೆ - ಈ ಹೆಂಗಸರು ನನ್ನ ಕುಮಾರ್ತೆಗಳಲ್ಲವೇ, ಈ ಮಕ್ಕಳು ನನ್ನ ಮೊಮ್ಮಕ್ಕಳಲ್ಲವೇ, ಈ ಹಿಂಡುಗಳೂ ನನ್ನವೇ, ನಿನ್ನ ಕಣ್ಣಮುಂದೆ ಇರುವದೆಲ್ಲವೂ ನನ್ನದಲ್ಲವೇ. ಆದರೆ ಈ ನನ್ನ ಕುಮಾರ್ತೆಗಳಿಗೋಸ್ಕರವೂ ಇವರು ಹೆತ್ತ ಮಕ್ಕಳಿಗೋಸ್ಕರವೂ ಈಗ ನಾನೇನು ಮಾಡುವೆನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಲಾಬಾನನು ಯಾಕೋಬನಿಗೆ, “ಈ ಸ್ತ್ರೀಯರು ನನ್ನ ಮಕ್ಕಳು. ಅವರ ಮಕ್ಕಳು ನನಗೆ ಸೇರಿದವರು; ಈ ಪಶುಗಳು ನನ್ನವು. ನೀನು ಇಲ್ಲಿ ನೋಡುವ ಪ್ರತಿಯೊಂದೂ ನನಗೆ ಸೇರಿದ್ದು. ಆದರೆ ನನ್ನ ಹೆಣ್ಣುಮಕ್ಕಳನ್ನಾಗಲಿ ಅವರ ಮಕ್ಕಳನ್ನಾಗಲಿ ತೆಗೆದುಕೊಳ್ಳಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:43
3 ತಿಳಿವುಗಳ ಹೋಲಿಕೆ  

ಲಾಬಾನನ ಮಕ್ಕಳು, “ನಮ್ಮ ತಂದೆಗೆ ಇದ್ದವುಗಳನ್ನೆಲ್ಲಾ ಯಾಕೋಬನು ತೆಗೆದುಕೊಂಡು, ನಮ್ಮ ತಂದೆಗಿದ್ದವುಗಳಿಂದ ಈ ಘನತೆಯನ್ನೆಲ್ಲಾ ಪಡೆದಿದ್ದಾನೆ,” ಎಂದು ಹೇಳುವ ಮಾತುಗಳನ್ನು ಯಾಕೋಬನು ಕೇಳಿದನು.


ಮುಂಜಾನೆ ಲಾಬಾನನು ಎದ್ದು ತನ್ನ ಪುತ್ರ ಪುತ್ರಿಯರಿಗೆ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.


ಅವನ ಪುತ್ರಪುತ್ರಿಯರೆಲ್ಲಾ ಅವನನ್ನು ಆದರಿಸಿದರೂ ಅವನು ಆದರಣೆ ಹೊಂದಲೊಲ್ಲದೆ, “ನನ್ನ ಮಗನಿರುವ ಸಮಾಧಿಗೆ ದುಃಖದಿಂದಲೇ ಇಳಿದು ಹೋಗುವೆನು,” ಎಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು