ಆದಿಕಾಂಡ 31:48 - ಕನ್ನಡ ಸಮಕಾಲಿಕ ಅನುವಾದ48 ಆಗ ಲಾಬಾನನು, “ಈ ಕುಪ್ಪೆಯು ಈ ಹೊತ್ತು ನಿನಗೂ ನನಗೂ ಸಾಕ್ಷಿಯಾಗಿದೆ,” ಎಂದನು. ಆದ್ದರಿಂದ ಅದಕ್ಕೆ ಗಲೇದ್ ಎಂದೂ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಆಗ ಲಾಬಾನನು, “ಈ ಹೊತ್ತು ನಿನಗೂ ನನಗೂ ಆದ ಒಡಂಬಡಿಕೆಗೆ ಈ ಗುಡ್ಡೆಯೇ ಸಾಕ್ಷಿ” ಎಂದು ಹೇಳಿದುದರಿಂದ ಅದಕ್ಕೆ ಗಲೇದ್ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ಲಾಬಾನನು ಯಕೋಬನಿಗೆ, “ಈ ದಿನ ನಿನಗೂ ನನಗೂ ಆದ ಒಪ್ಪಂದಕ್ಕೆ ಈ ಕುಪ್ಪೆಯೇ ಸಾಕ್ಷಿ” ಎಂದು ಹೇಳಿದ ಕಾರಣ ಅದಕ್ಕೆ ‘ಗೆಲೇದ್’ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)48 ಈ ಹೊತ್ತು ನಿನಗೂ ನನಗೂ ಆದ ಒಡಂಬಡಿಕೆಗೆ ಈ ಕುಪ್ಪೆಯೇ ಸಾಕ್ಷಿ ಎಂದು ಹೇಳಿದ್ದರಿಂದ ಅದಕ್ಕೆ ಗಲೇದೆಂದು ಹೆಸರಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ಲಾಬಾನನು ಯಾಕೋಬನಿಗೆ, “ಈ ಕಲ್ಲುಗಳ ಕುಪ್ಪೆಯು ನಮ್ಮಿಬ್ಬರಿಗೂ ನಮ್ಮ ಒಪ್ಪಂದವನ್ನು ಜ್ಞಾಪಕಕ್ಕೆ ತರುತ್ತದೆ” ಎಂದು ಹೇಳಿದನು. ಆದಕಾರಣ ಯಾಕೋಬನು ಆ ಸ್ಥಳಕ್ಕೆ ಗಲೀದ್ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿ |
ನಮಗೂ ನಿಮಗೂ ನಮ್ಮ ತರುವಾಯ ನಮ್ಮ ಸಂತತಿಯವರಿಗೂ ಮಧ್ಯದಲ್ಲಿ ಒಂದು ಸಾಕ್ಷಿ ಉಂಟಾಗಿರುವಂತೆಯೂ ನಾವು ಯೆಹೋವ ದೇವರ ಸನ್ನಿಧಿಯಲ್ಲಿ ದಹನಬಲಿ, ಸಮಾಧಾನದ ಬಲಿ ಮುಂತಾದವುಗಳನ್ನು ಅರ್ಪಿಸಿ ಆರಾಧಿಸುವುದಕ್ಕೆ ನಿಮಗೆ ಗುರುತಾಗಿರುವಂತೆಯೂ, ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಯೆಹೋವ ದೇವರಲ್ಲಿ ನಿಮಗೆ ಭಾಗವಿಲ್ಲ,’ ಎಂದು ಹೇಳದೆ ಇರುವಂತೆಯೂ ಸಾಕ್ಷಿಗಾಗಿ ಕಟ್ಟಿದ್ದೇವೆ ಅಷ್ಟೇ.