Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:55 - ಕನ್ನಡ ಸಮಕಾಲಿಕ ಅನುವಾದ

55 ಮುಂಜಾನೆ ಲಾಬಾನನು ಎದ್ದು ತನ್ನ ಪುತ್ರ ಪುತ್ರಿಯರಿಗೆ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಮುಂಜಾನೆ ಲಾಬಾನನು ಎದ್ದು ತನ್ನ ಹೆಣ್ಣು ಮಕ್ಕಳಿಗೂ, ಮೊಮ್ಮಕ್ಕಳಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿ ತನ್ನ ಮನೆಗೆ ಹಿಂತಿರುಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

55 ಬೆಳಿಗ್ಗೆ ಲಾಬಾನನು ಎದ್ದು, ತನ್ನ ಪುತ್ರಿಯರಿಗೂ ಮೊಮ್ಮಕ್ಕಳಿಗೂ ಮುದ್ದಿಟ್ಟು, ಆಶೀರ್ವದಿಸಿ, ತನ್ನ ಊರಿಗೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ಬೆಳಿಗ್ಗೆ ಲಾಬಾನನು ಎದ್ದು ತನ್ನ ಹೆಣ್ಣುಮಕ್ಕಳಿಗೂ ಮೊಮ್ಮಕ್ಕಳಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿ ತನ್ನ ಊರಿಗೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ಮರುದಿನ ಮುಂಜಾನೆ ಲಾಬಾನನು ತನ್ನ ಮೊಮ್ಮಕ್ಕಳಿಗೂ ಹೆಣ್ಣುಮಕ್ಕಳಿಗೂ ಮುದ್ದಿಟ್ಟು ಆಶೀರ್ವದಿಸಿ ತನ್ನ ಮನೆಗೆ ಹಿಂತಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:55
18 ತಿಳಿವುಗಳ ಹೋಲಿಕೆ  

ಆದರೆ ನೀನು ನನ್ನ ಮೊಮ್ಮಕ್ಕಳಿಗೂ, ನನ್ನ ಹೆಣ್ಣು ಮಕ್ಕಳಿಗೂ ಮುದ್ದು ಕೊಡುವುದಕ್ಕೂ ಬಿಡಲಿಲ್ಲ. ನೀನು ಮಾಡಿದ್ದು ಬುದ್ಧಿಹೀನ ಕೆಲಸವೇ ಸರಿ.


ರಾಹೇಲಳು ಯೋಸೇಫನನ್ನು ಹೆತ್ತಾಗ ಯಾಕೋಬನು ಲಾಬಾನನಿಗೆ, “ನಾನು ನನ್ನ ಸ್ಥಳಕ್ಕೂ ಸ್ವದೇಶಕ್ಕೂ ಹೋಗುವಂತೆ ನನ್ನನ್ನು ಕಳುಹಿಸಿಕೊಡು.


ಯೆಹೋವ ದೇವರು ಅಬ್ರಹಾಮನ ಸಂಗಡ ಮಾತನಾಡುವುದನ್ನು ಮುಗಿಸಿದ ಕೂಡಲೆ ಹೊರಟು ಹೋದರು. ಅಬ್ರಹಾಮನು ತನ್ನ ಮನೆಗೆ ಹಿಂದಿರುಗಿದನು.


ಮನುಷ್ಯನ ಮಾರ್ಗಗಳು ಯೆಹೋವ ದೇವರನ್ನು ಮೆಚ್ಚಿಸಿದಾಗ, ಅವರು ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನದಲ್ಲಿರುವಂತೆ ಮಾಡುತ್ತಾರೆ.


ಮನುಷ್ಯರ ವಿರುದ್ಧ ನಿಮ್ಮ ಕೋಪವು ನಿಮಗೆ ಘನವನ್ನು ತರುವುದು. ಉಳಿದಿರುವವರು ಕೋಪಕ್ಕೆ ತುತ್ತಾಗುವುದಿಲ್ಲ.


ಆಗ ಅವರು ತಿರುಗಿ ಗಟ್ಟಿಯಾದ ಸ್ವರದಿಂದ ಅತ್ತರು. ಒರ್ಫಾ ತನ್ನ ಅತ್ತೆಯನ್ನು ಮುದ್ದಿಟ್ಟು ಹೊರಟು ಹೋದಳು; ಆದರೆ ರೂತಳು ಅತ್ತೆಯನ್ನು ಅಂಟಿಕೊಂಡಳು.


ಏಕೆಂದರೆ ಯೆಹೋವ ದೇವರು ತಮ್ಮ ಜನರಿಗೆ ನ್ಯಾಯತೀರಿಸುವರು. ದೇವರು ತಮ್ಮ ಸೇವಕರ ಬಲ ಹೋಯಿತೆಂದೂ, ಗುಲಾಮರಾಗಲಿ, ಸ್ವತಂತ್ರರಾಗಲಿ ಉಳಿಯಲಿಲ್ಲವೆಂದೂ ನೋಡಿದಾಗ, ತಮ್ಮ ಸೇವಕರಿಗೋಸ್ಕರ ಕರುಣಿಸುವರು.


ಆದರೂ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸಲಿಲ್ಲ. ನಿಮ್ಮ ದೇವರಾದ ಯೆಹೋವ ದೇವರು ಅವನಿಂದ ಶಾಪವನ್ನು ನುಡಿಸದೆ, ಆಶೀರ್ವಾದವನ್ನೇ ಹೇಳಿಸಿದರು.


ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ತಿರುಗಿಹೋದನು. ಬಾಲಾಕನು ಸಹ ತನ್ನ ಮಾರ್ಗವಾಗಿ ಹೋದನು.


ಆಗ ಬಾಲಾಕನು ಬಿಳಾಮನಿಗೆ, “ಇದೇನು ನೀನು ನನಗೆ ಮಾಡಿದ್ದು? ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಯಿಸಿದೆನು, ನೀನು ಅವರನ್ನು ಶಪಿಸದೆ ಸಂಪೂರ್ಣವಾಗಿ ಆಶೀರ್ವದಿಸಿದೆ,” ಎಂದನು.


ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಯೆಹೋವ ದೇವರು ಎದುರಿಸದವನನ್ನು ನಾನು ಹೇಗೆ ಎದುರಿಸಲಿ?


ಯೆಹೋವ ದೇವರು ಬಿಳಾಮನ ಬಾಯಲ್ಲಿ ತನ್ನ ಮಾತನ್ನು ಇಟ್ಟು ಅವನಿಗೆ, “ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ, ನಾನು ಹೇಳಿದ್ದನ್ನು ತಿಳಿಸು,” ಎಂದರು.


ಆಗ ಏಸಾವನು ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು, ಅವನನ್ನು ಅಪ್ಪಿಕೊಂಡು, ಅವನ ಕೊರಳಿನ ಮೇಲೆ ಬಿದ್ದು, ಅವನಿಗೆ ಮುದ್ದಿಟ್ಟನು. ಅವರಿಬ್ಬರೂ ಅತ್ತರು.


ಲಾಬಾನನು ಅದಕ್ಕೆ ಉತ್ತರವಾಗಿ ಯಾಕೋಬನಿಗೆ, “ಈ ಪುತ್ರಿಯರು ನನ್ನ ಪುತ್ರಿಯರೇ, ಈ ಮಕ್ಕಳು ನನ್ನ ಮಕ್ಕಳೇ, ಈ ಮಂದೆಯು ನನ್ನ ಮಂದೆಯೇ, ಅಂತು ನೀನು ಕಾಣುವುದೆಲ್ಲಾ ನನ್ನದೇ. ಹಾಗಾದರೆ ನನ್ನ ಪುತ್ರಿಯರಿಗಾಗಲಿ, ಅವರು ಹೆತ್ತ ಮಕ್ಕಳಿಗಾಗಲಿ ನಾನು ಈ ಹೊತ್ತು ಏನು ಮಾಡಲಿ?


ಇಸಾಕನು ಯಾಕೋಬನನ್ನು ಕರೆದು ಆಶೀರ್ವದಿಸಿ ಆಜ್ಞಾಪಿಸಿದ್ದೇನೆಂದರೆ, “ಕಾನಾನ್ಯರ ಸ್ತ್ರೀಯರನ್ನು ನೀನು ಮದುವೆಯಾಗಬಾರದು.


ಇದಲ್ಲದೆ ಅವರು ರೆಬೆಕ್ಕಳನ್ನು ಹೀಗೆಂದು ಆಶೀರ್ವದಿಸಿದರು: “ನಮ್ಮ ಸಹೋದರಿಯೇ, ನೀನು ಸಹಸ್ರ ಸಹಸ್ರ ಮಕ್ಕಳಿಗೆ ತಾಯಿಯಾಗು. ನಿನ್ನ ಸಂತಾನದವರು ತಮ್ಮ ವೈರಿಗಳ ಪ್ರದೇಶಗಳನ್ನು ಸ್ವಾಧೀನಮಾಡಿಕೊಳ್ಳಲಿ.”


ಜನರೆಲ್ಲರೂ ಯೊರ್ದನನ್ನು ದಾಟಿದರು. ಅರಸನು ದಾಟಿ ಬಂದಾಗ, ಬರ್ಜಿಲ್ಲೈಯನ್ನು ಮುದ್ದಿಟ್ಟು ಅವನನ್ನು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಸ್ಥಳಕ್ಕೆ ಹಿಂದಿರುಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು