ಆದಿಕಾಂಡ 31:7 - ಕನ್ನಡ ಸಮಕಾಲಿಕ ಅನುವಾದ7 ಆದರೆ ನಿಮ್ಮ ತಂದೆಯು ನನಗೆ ವಂಚನೆಮಾಡಿ, ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದನು. ಆದಾಗ್ಯೂ ದೇವರು ಅವನಿಂದ ನನಗೆ ಕೇಡು ಮಾಡಗೊಡಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದರೆ ನಿಮ್ಮ ತಂದೆಯು ನನ್ನನ್ನು ವಂಚಿಸಿ ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದನು, ನನಗೆ ಕೇಡುಮಾಡುವುದಕ್ಕೆ ದೇವರು ಅವನಿಗೆ ಅವಕಾಶಕೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಿಮ್ಮ ತಂದೆಯಾದರೋ ನನಗೆ ಮೋಸಮಾಡಿ ಹತ್ತು ಸಾರಿ ನನ್ನ ಸಂಬಳವನ್ನು ಬದಲಾಯಿಸಿದ್ದಾರೆ. ಅವರಿಂದ ನನಗೆ ಕೇಡಾಗದಂತೆ ದೇವರೇ ನೋಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವನು ಚಪಲಚಿತ್ತನಾಗಿ ಹತ್ತುಸಾರಿ ನನ್ನ ಸಂಬಳವನ್ನು ಬದಲಾಯಿಸಿ ವಂಚಿಸಿದರೂ ನನಗೆ ಕೇಡುಮಾಡುವದಕ್ಕೆ ದೇವರು ಅವನಿಗೆ ಅವಕಾಶಕೊಡಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದರೆ ನಿಮ್ಮ ತಂದೆ ನನಗೆ ಮೋಸ ಮಾಡಿದನು. ನಿಮ್ಮ ತಂದೆ ನನ್ನ ಸಂಬಳವನ್ನು ಹತ್ತು ಸಲ ಬದಲಾಯಿಸಿದನು. ಆದರೆ ಆ ಸಮಯದಲ್ಲೆಲ್ಲ ದೇವರು ನನ್ನನ್ನು ಲಾಬಾನನ ಎಲ್ಲಾ ಮೋಸಗಳಿಂದ ಕಾಪಾಡಿದನು. ಅಧ್ಯಾಯವನ್ನು ನೋಡಿ |