Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:10 - ಕನ್ನಡ ಸಮಕಾಲಿಕ ಅನುವಾದ

10 ನೀವು ನಿಮ್ಮ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ, ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಏಕೆಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ, ನನ್ನ ಕೈಯಲ್ಲಿ ಕೋಲು ಮಾತ್ರವೇ ಇತ್ತು, ಈಗ ನನಗೆ ಎರಡು ಗುಂಪುಗಳಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ನಂಬಿಕೆಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಯೋಗ್ಯನು. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನ್ನ ಬಳಿಯಲ್ಲಿ ಒಂದು ಕೋಲು ಮಾತ್ರವೇ ಇತ್ತು. ಈಗ ಎರಡು ಗುಂಪುಗಳಿಗೆ ಒಡೆಯನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದಾಸನಾದ ನನ್ನ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ನಿಮ್ಮ ವಾಗ್ದಾನವನ್ನು ನೆರವೇರಿಸಿದ್ದೀರಿ. ನಾನು ಅದಕ್ಕೆ ಕೇವಲ ಅಪಾತ್ರನು. ನಾನು ಮೊದಲು ಈ ಜೋರ್ಡನ್ ನದಿಯನ್ನು ದಾಟಿದಾಗ ನನಗಿದ್ದುದು ಒಂದು ಊರುಗೋಲು ಮಾತ್ರ. ಈಗ ಎರಡು ಪರಿವಾರಗಳಿಗೆ ಒಡೆಯನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಪಾತ್ರನಾಗಿದ್ದೇನೆ. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಪಾಳೆಯಗಳಿಗೆ ಒಡೆಯನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀನು ನನಗೆ ತುಂಬ ಕರುಣೆ ತೋರಿದೆ. ನೀನು ನನಗೆ ಅನೇಕ ಒಳ್ಳೆಯ ಕಾರ್ಯಗಳನ್ನು ಮಾಡಿದೆ. ಮೊದಲನೆ ಸಲ ನಾನು ಜೋರ್ಡನ್ ನದಿಯನ್ನು ದಾಟಿ ಪ್ರಯಾಣ ಮಾಡಿದಾಗ, ಕೇವಲ ನನ್ನ ಊರುಗೋಲೇ ಹೊರತು ಬೇರೇನೂ ನನಗಿರಲಿಲ್ಲ. ಆದರೆ ಈಗ ಎರಡು ಗುಂಪುಗಳಿಗೆ ಬೇಕಾದ ವಸ್ತುಗಳನ್ನು ನಾನು ಪಡೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:10
33 ತಿಳಿವುಗಳ ಹೋಲಿಕೆ  

ನಿಮ್ಮ ರಕ್ಷಣೆಯ ಸಹಾಯವನ್ನು ನನಗೆ ಗುರಾಣಿಯನ್ನಾಗಿ ಮಾಡಿದ್ದೀರಿ. ನಿಮ್ಮ ಬಲಗೈ ನನಗೆ ಆಧಾರವಾಗಿದೆ; ನಿಮ್ಮ ಸಹಾಯವು ನನ್ನನ್ನು ಘನವಂತನನ್ನಾಗಿ ಮಾಡಿದೆ.


ಇದಲ್ಲದೆ ಅವನು, “ನನ್ನ ಯಜಮಾನನಾದ ಅಬ್ರಹಾಮನ ದೇವರಾದ ಯೆಹೋವ ದೇವರು ಸ್ತುತಿಹೊಂದಲಿ. ಅವರು ನನ್ನ ಯಜಮಾನನನ್ನು ಕೈಬಿಡದೆ, ತಮ್ಮ ದಯೆಯನ್ನೂ, ನಂಬಿಗಸ್ತಿಕೆಯನ್ನೂ ತೋರಿಸಿದ್ದಾರೆ. ನಾನು ಮಾರ್ಗದಲ್ಲಿರುವಾಗ ಯೆಹೋವ ದೇವರು ನನ್ನನ್ನು ನನ್ನ ಯಜಮಾನನ ಸಹೋದರನ ಮನೆಗೇ ನಡೆಸಿದ್ದಾರೆ,” ಎಂದನು.


ಅನಂತರ ಅರಸನಾದ ದಾವೀದನು ಒಳಗೆ ಪ್ರವೇಶಿಸಿ, ಯೆಹೋವ ದೇವರ ಸನ್ನಿಧಿಯಲ್ಲಿ ಕುಳಿತುಕೊಂಡು, “ಸಾರ್ವಭೌಮ ಯೆಹೋವ ದೇವರೇ, ನನ್ನಂಥವನಿಗೆ ನೀವು ಈ ಪದವಿಯನ್ನು ಅನುಗ್ರಹಿಸಿ, ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು? ನನ್ನ ಕುಟುಂಬ ಎಷ್ಟರದು?


ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರಿ. ಏಕೆಂದರೆ, “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ, ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ!”


ನೀವೇ ನನ್ನನ್ನು ಹೊಗಳಿಕೊಳ್ಳುವಂತೆ ಮಾಡಿ, ನಾನು ಬುದ್ಧಿಹೀನನಾಗಿ ನಡೆಯಲು ಒತ್ತಾಯಿಸಿದ್ದೀರಿ. ನನಗೆ ನಿಮ್ಮಿಂದಲೇ ಹೊಗಳಿಕೆಯು ಬೇಕಾಗಿತ್ತು. ಏಕೆಂದರೆ ನಾನು ಕೇವಲ ಅತ್ಯಲ್ಪನಾದರೂ “ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ” ಕಡಿಮೆ ಅಲ್ಲ.


ಅದೇ ರೀತಿಯಾಗಿ, ನಿಮಗೆ ಆಜ್ಞಾಪಿಸಿದವುಗಳನ್ನೆಲ್ಲಾ ನೀವು ಮಾಡಿದ ಮೇಲೆ, ‘ನಾವು ಅಯೋಗ್ಯರಾದ ಆಳುಗಳಷ್ಟೇ, ನಾವು ಮಾಡಬೇಕಾದ ಕರ್ತವ್ಯವನ್ನೇ ಮಾಡಿದ್ದೇವೆ ಎಂದು ನೀವು ಹೇಳಿರಿ,’ ” ಎಂದು ಹೇಳಿದರು.


ಸೀಮೋನ್ ಪೇತ್ರನು ಇದನ್ನು ಕಂಡಾಗ, ಯೇಸುವಿನ ಮುಂದೆ ಮೊಣಕಾಲೂರಿ, “ಸ್ವಾಮಿ, ನನ್ನನ್ನು ಬಿಟ್ಟು ಹೋಗಿರಿ, ನಾನು ಪಾಪಿ,” ಎಂದನು.


ನೀನು ಪುರಾತನ ಕಾಲದಿಂದಲೂ ನಮ್ಮ ಪಿತೃಗಳಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ, ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.


ಯೆಹೋವ ದೇವರು ನಮಗೆ ಮಾಡಿದ್ದೆಲ್ಲದರ ಪ್ರಕಾರ, ಯೆಹೋವ ದೇವರ ಪ್ರೀತಿ ಕೃಪೆಗಳನ್ನೂ, ಯೆಹೋವ ದೇವರ ಕಾರ್ಯಗಳನ್ನು ಸ್ತೋತ್ರಗಳನ್ನೂ ಜ್ಞಾಪಕಪಡಿಸುವೆನು. ಆತನು ತನ್ನ ಅಂತಃಕರುಣೆಯ ಪ್ರಕಾರವೂ, ತನ್ನ ಕೃಪೆಯ ಮಹಾ ಒಳ್ಳೆಯತನದ ಪ್ರಕಾರವೂ, ಇಸ್ರಾಯೇಲಿನ ಮನೆಯವರಿಗೆ ದೊಡ್ಡ ಉಪಕಾರ ಮಾಡಿದನಲ್ಲಾ.


ಆಗ ನಾನು, “ಅಯ್ಯೋ, ನಾನು ನಾಶವಾದೆನಲ್ಲಾ! ಏಕೆಂದರೆ, ನಾನು ಅಶುದ್ಧ ತುಟಿಯವನು. ನಾನು ಅಶುದ್ಧ ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು. ನನ್ನ ಕಣ್ಣುಗಳು ರಾಜಾಧಿರಾಜರೂ ಸೇನಾಧೀಶ್ವರ ಯೆಹೋವ ದೇವರನ್ನು ಕಂಡವು!” ಎಂದೆನು.


ನೀತಿವಂತರ ಮಾರ್ಗವು ಮುಂಜಾನೆಯ ಸೂರ್ಯನ ಬೆಳಕಿನಂತೆ ಇದ್ದು, ದಿನದ ಪೂರ್ಣ ಬೆಳಕಿನವರೆಗೂ ಪ್ರಕಾಶಿಸಿ ಹೊಳೆಯುತ್ತಾ ಇರುವುದು.


ಪ್ರೀತಿಯೂ ಸತ್ಯತೆಯೂ ಸಂಧಿಸಿಕೊಳ್ಳುತ್ತವೆ. ನೀತಿಯೂ ಸಮಾಧಾನವೂ ಮುದ್ದಿಟ್ಟುಕೊಳ್ಳುತ್ತವೆ.


ಅವರು ಬಲದಿಂದ ಬಲಕ್ಕೆ ಸಾಗಿ, ಚೀಯೋನಿನಲ್ಲಿ ದೇವರ ಮುಂದೆ ಕಾಣಿಸಿಕೊಳ್ಳುತ್ತಾರೆ.


ಆತನು ಎಂದೆಂದಿಗೂ ದೇವರ ಮುಂದೆ ಆಳಿಕೆಮಾಡಲಿ. ಆತನನ್ನು ಕಾಯುವ ಹಾಗೆ ನಿಮ್ಮ ಪ್ರೀತಿ, ಸತ್ಯವನ್ನು ನೇಮಿಸಿರಿ.


ನಾನು ಯೆಹೋವ ದೇವರಿಗೆ, “ನೀವೇ ನನ್ನ ಕರ್ತ; ನಿಮ್ಮನ್ನು ಬಿಟ್ಟು ನನಗಿಲ್ಲ ಒಳಿತು,” ಎಂದು ಹೇಳಿದೆನು.


ನೀವು ಮನುಷ್ಯಪುತ್ರನನ್ನು ದೇವರಿಗಿಂತಲೂ ಸ್ವಲ್ಪ ಕಡಿಮೆ ಮಾಡಿ, ಮಹಿಮೆಯನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿಟ್ಟಿದ್ದೀರಿ.


ಆದರೆ ನೀತಿವಂತನು ತನ್ನ ಮಾರ್ಗದಲ್ಲಿ ಮುಂದುವರಿಯುವನು; ಶುದ್ಧ ಕೈಗಳುಳ್ಳವರು ಬಲದಲ್ಲಿ ಬೆಳೆಯುತ್ತಾ ಇರುವರು.


ನಿನ್ನ ಆರಂಭವು ಅಲ್ಪವಾಗಿದ್ದರೂ, ನಿನ್ನ ಅಂತ್ಯವು ಬಹಳವಾಗಿ ವೃದ್ಧಿ ಹೊಂದುವುದು.


ನಿಮ್ಮ ದೇವರಾದ ಯೆಹೋವ ದೇವರನ್ನು ಜ್ಞಾಪಕಮಾಡಿಕೊಳ್ಳಿರಿ. ಅವರೇ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ತಮ್ಮ ಒಡಂಬಡಿಕೆಯನ್ನು ಸ್ಥಾಪಿಸುವಂತೆ ಇಂದು ನೀವು ಇಷ್ಟು ಆಸ್ತಿಯನ್ನು ಸಂಪಾದಿಸುವ ಸಾಮರ್ಥ್ಯವನ್ನು ನಿಮಗೆ ಕೊಟ್ಟಿದ್ದಾರೆ.


ಆಗ ಯಾಕೋಬನು ಬಹಳವಾಗಿ ಭಯಪಟ್ಟು, ತನ್ನ ಸಂಗಡ ಇದ್ದ ಜನರನ್ನೂ, ಕುರಿಗಳನ್ನೂ, ದನಗಳನ್ನೂ, ಒಂಟೆಗಳನ್ನೂ ಎರಡು ಗುಂಪುಗಳಾಗಿ ವಿಭಾಗಿಸಿದನು.


ಈಗ ನನಗೆ ಎತ್ತು, ಕತ್ತೆ, ಕುರಿಗಳು, ದಾಸದಾಸಿಯರು ಇದ್ದಾರೆ. ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದುವಂತೆ ನಾನು ಈ ಸಂದೇಶವನ್ನು ನನ್ನ ಯಜಮಾನನಾದ ನಿಮಗೆ ತಿಳಿಸುವುದಕ್ಕಾಗಿ ಕಳುಹಿಸಿದ್ದೇನೆ,’ ಎಂದು ಹೇಳಿರಿ,” ಎಂದನು.


ಈ ಪ್ರಕಾರ ಯಾಕೋಬನು ಅತ್ಯಧಿಕವಾಗಿ ಅಭಿವೃದ್ಧಿಯಾದ್ದರಿಂದ, ಬಹು ಕುರಿಗಳೂ ದಾಸದಾಸಿಯರೂ ಒಂಟೆಗಳೂ ಕತ್ತೆಗಳೂ ಅವನಿಗೆ ದೊರೆತವು.


ಇಗೋ, ನಾನು ನಿನ್ನ ಸಂಗಡ ಇದ್ದು, ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಈ ದೇಶಕ್ಕೆ ನಿನ್ನನ್ನು ತಿರುಗಿ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವವರೆಗೆ ನಿನ್ನನ್ನು ಬಿಡುವುದಿಲ್ಲ,” ಎಂದರು.


ಆಗ ಅಬ್ರಹಾಮನು, “ಇಗೋ, ಮಣ್ಣೂ, ಬೂದಿಯೂ ಆಗಿರುವ ನಾನು ಯೆಹೋವ ದೇವರ ಸಂಗಡ ಮಾತನಾಡುವುದಕ್ಕೆ ಧೈರ್ಯಗೊಂಡಿದ್ದೇನೆ.


ದಾವೀದನು ಮಹನಯಿಮಿಗೆ ಬಂದನು. ಇದಲ್ಲದೆ ಅಬ್ಷಾಲೋಮನೂ, ಅವನ ಸಂಗಡ ಇಸ್ರಾಯೇಲ್ ಮನುಷ್ಯರೂ ಯೊರ್ದನನ್ನು ದಾಟಿದರು.


ಆಗ ಅವನು, “ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಯೆಹೋವ ದೇವರೇ, ಈ ಹೊತ್ತು ನನಗೆ ಅನುಕೂಲವನ್ನು ಉಂಟುಮಾಡಿ, ನನ್ನ ಯಜಮಾನನಾದ ಅಬ್ರಹಾಮನಿಗೆ ದಯೆ ತೋರಿಸಿರಿ.


ಇದಲ್ಲದೆ ಯೆಹೋವ ದೇವರು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆ ಅಬ್ರಹಾಮನ ದೇವರೂ, ಇಸಾಕನ ದೇವರೂ ಆದ ಯೆಹೋವ ದೇವರು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.


ಆಗ ಯೆಹೋವ ದೇವರು ಯಾಕೋಬನಿಗೆ, “ನಿನ್ನ ತಂದೆಗಳ ದೇಶಕ್ಕೂ, ನಿನ್ನ ಬಂಧುಗಳ ಬಳಿಗೂ ಹಿಂದಿರುಗಿ ಹೋಗು. ನಾನು ನಿನ್ನ ಸಂಗಡ ಇರುವೆನು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು