ಆದಿಕಾಂಡ 32:18 - ಕನ್ನಡ ಸಮಕಾಲಿಕ ಅನುವಾದ18 ನೀನು ಅವನಿಗೆ, ‘ಇವು ನಿನ್ನ ದಾಸನಾದ ಯಾಕೋಬನವುಗಳೇ, ಇದು ನನ್ನ ಯಜಮಾನನಾದ ಏಸಾವನಿಗೆ ಕಳುಹಿಸಲಾದ ಕಾಣಿಕೆ, ಅವನೂ ನಮ್ಮ ಹಿಂದೆ ಇದ್ದಾನೆ,’ ಎಂದು ಅವನಿಗೆ ಹೇಳಬೇಕು,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಗ ನೀನು, “ಇವು ನಿಮ್ಮ ಸೇವಕನಾದ ಯಾಕೋಬನದು. ತನ್ನ ಪ್ರಭುಗಳಾದ ನಿಮಗೆ ಇವುಗಳನ್ನು ಕಾಣಿಕೆಯಾಗಿ ಕಳುಹಿಸಿಕೊಟ್ಟಿದ್ದಾನೆ. ಅವನೂ ನಮ್ಮ ಹಿಂದೆ ಬರುತ್ತಿದ್ದಾನೆ” ಎಂದು ಉತ್ತರಕೊಡಬೇಕು ಎಂಬುದಾಗಿ ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ‘ಇವು ನಿಮ್ಮ ದಾಸ ಯಕೋಬನವು; ಒಡೆಯರಾದ ನಿಮಗೆ ಇವುಗಳನ್ನು ಕಾಣಿಕೆಯಾಗಿ ಕಳಿಸಿಕೊಟ್ಟಿದ್ದಾರೆ; ಅವರೂ ನಮ್ಮ ಹಿಂದೆ ಬರುತ್ತಿದ್ದಾರೆ’ ಎಂದು ಉತ್ತರಕೊಡಬೇಕು,” ಎಂಬುದಾಗಿ ಅಪ್ಪಣೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನೀನು - ಇವು ನಿಮ್ಮ ಸೇವಕನಾದ ಯಾಕೋಬನವು; ತನ್ನ ಪ್ರಭುಗಳಾದ ನಿಮಗೆ ಇವುಗಳನ್ನು ಕಾಣಿಕೆಯಾಗಿ ಕಳುಹಿಸಿಕೊಟ್ಟಿದ್ದಾನೆ; ತಾನೂ ನಮ್ಮ ಹಿಂದೆ ಬರುತ್ತಾನೆ ಎಂದು ಉತ್ತರಕೊಡಬೇಕು ಎಂಬದಾಗಿ ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆಗ ನೀನು, ‘ಪಶುಗಳು ನಿನ್ನ ಸೇವಕನಾದ ಯಾಕೋಬನವು. ನನ್ನ ಒಡೆಯನಾದ ಏಸಾವನೇ, ಯಾಕೋಬನು ಇವುಗಳನ್ನು ನಿನಗೆ ಉಡುಗೊರೆಯಾಗಿ ಕಳುಹಿಸಿದ್ದಾನೆ. ಅಲ್ಲದೆ ಅವನು ಸಹ ನಮ್ಮ ಹಿಂದೆ ಬರುತ್ತಿದ್ದಾನೆ’ ಎಂದು ತಿಳಿಸಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |