Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:20 - ಕನ್ನಡ ಸಮಕಾಲಿಕ ಅನುವಾದ

20 ಇದಲ್ಲದೆ, ‘ನಿನ್ನ ದಾಸ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು,’ ” ಎಂದು ಆಜ್ಞಾಪಿಸಿದನು. ಏಕೆಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ಕಾಣುವೆನು. ಅವನು ನನ್ನನ್ನು ಅಂಗೀಕರಿಸುವನೇನೋ ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯಾಕೋಬನು ತನ್ನೊಳಗೆ, “ನನ್ನ ಮುಂದೆ ಹೋಗುವ ಈ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸುವೆನು. ಆಮೇಲೆ ಅವನನ್ನು ಸಂಧಿಸುವಾಗ, ಒಂದು ವೇಳೆ ನನ್ನನ್ನು ಪ್ರೀತಿಯಿಂದ ಸ್ವೀಕರಿಸುವನೇನೋ” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ‘ನಿಮ್ಮ ದಾಸ ಯಕೋಬನು ನಮ್ಮ ಹಿಂದೆ ಬರುತ್ತಿದ್ದಾರೆ,’ ಎನ್ನಿರಿ” ಎಂದು ಆಜ್ಞಾಪಿಸಿದನು. ಯಕೋಬನು ತನ್ನೊಳಗೆ, “ನನಗೆ ಮುಂಚಿತವಾಗಿ ಹೋಗುವ ಈ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸಿದ ಮೇಲೆ ನಾನು ಅವನನ್ನು ಭೇಟಿ ಆಗುತ್ತೇನೆ. ಆಗ ಒಂದು ವೇಳೆ ನನ್ನನ್ನು ಪ್ರೀತಿಯಿಂದ ಅಂಗೀಕರಿಸುವನು,” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇದೇ ರೀತಿಯಾಗಿ ಮಾತಾಡಿ - ನಿಮ್ಮ ಸೇವಕನಾದ ಯಾಕೋಬನೇ ನಮ್ಮ ಹಿಂದೆ ಬರುತ್ತಾನೆ ಅನ್ನಿರಿ ಎಂದು ಅಪ್ಪಣೆಕೊಟ್ಟನು. ಯಾಕೋಬನು ತನ್ನೊಳಗೆ - ನನ್ನ ಮುಂದೆ ಹೋಗುವ ಈ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸಿದ ಮೇಲೆ ಅವನ ಸನ್ನಿಧಿಗೆ ಸೇರುವೆನು; ಒಂದು ವೇಳೆ ನನ್ನನ್ನು ಪ್ರೀತಿಯಿಂದ ಅಂಗೀಕರಿಸುವನು ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೀವು ಅವನಿಗೆ, ‘ಇದು ನಿನಗೆ ಕಳುಹಿಸಿರುವ ಉಡುಗೊರೆ. ಅಲ್ಲದೆ ನಿನ್ನ ಸೇವಕನಾದ ಯಾಕೋಬನು ನಮ್ಮ ಹಿಂದೆ ಬರುತ್ತಿದ್ದಾನೆ’ ಎಂದು ಹೇಳಬೇಕು” ಎಂದು ತಿಳಿಸಿದನು. “ನಾನು ಈ ಜನರನ್ನು ಉಡುಗೊರೆಗಳೊಡನೆ ಮುಂದೆ ಕಳುಹಿಸಿದರೆ, ಒಂದುವೇಳೆ ಏಸಾವನು ನನ್ನನ್ನು ಕ್ಷಮಿಸಿ ನನ್ನನ್ನು ಸ್ವೀಕರಿಸಿಕೊಳ್ಳಬಹುದು” ಎಂಬುದು ಯಾಕೋಬನ ಆಲೋಚನೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:20
14 ತಿಳಿವುಗಳ ಹೋಲಿಕೆ  

ಗುಟ್ಟಾಗಿ ಕೊಡುವ ಬಹುಮಾನವು ಕೋಪವನ್ನು ಅಡಗಿಸುವುದು; ಮಡಿಲಲ್ಲಿ ಇಟ್ಟ ಲಂಚವು ಮಹಾ ಕೋಪವನ್ನು ಆರಿಸುವುದು.


ವಿರೋಧಿಸುವವರ ಮನಸ್ಸನ್ನು ತಾಳ್ಮೆಯಿಂದ ತಿದ್ದುವವನಾಗಿದ್ದರೆ, ದೇವರು ಒಂದು ವೇಳೆ ಅಂಥವರಿಗೆ ಸತ್ಯದ ತಿಳುವಳಿಕೆಗೆ ನಡೆಸುವ ಪಶ್ಚಾತ್ತಾಪವನ್ನು ಕೊಡುವ ನಿರೀಕ್ಷೆ ಇರುವುದು.


ಹೀಗೆ ಮಾಡಿದರೆ, ದೇವರು ಒಂದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ಅನುಕಂಪದಿಂದ ತಮ್ಮ ಉಗ್ರಕೋಪವನ್ನು ತಡೆದು, ನಾವು ನಾಶವಾಗದೆ ಉಳಿಸುವರೇನೋ, ಯಾರು ಬಲ್ಲರು?”


ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ, ಆದರೆ ಜ್ಞಾನಿಯು ಅದನ್ನು ಶಮನಪಡಿಸುವನು.


ಕೋಪಿಷ್ಟನು ವಿವಾದವನ್ನು ಎಬ್ಬಿಸುವನು. ಆದರೆ ತಾಳ್ಮೆಯಿಂದ ಇರುವವನು ಜಗಳವನ್ನು ಶಾಂತಗೊಳಿಸುವನು.


ಅವನು ಯಾವ ಪರಿಹಾರವನ್ನು ಒಪ್ಪುವುದಿಲ್ಲ; ಎಷ್ಟು ದೊಡ್ಡ ಲಂಚ ಕೊಟ್ಟರೂ ಅವನು ಅದನ್ನು ತಿರಸ್ಕರಿಸುವನು.


ಆಗ ಅವನ ಸೇವಕರು ಅವನಿಗೆ, “ಇಸ್ರಾಯೇಲಿನ ಮನೆಯ ಅರಸರು ಕರುಣೆಯುಳ್ಳವರೆಂದು ನಾವು ಕೇಳಿದ್ದೇವೆ. ನಾವು ಗೋಣಿಯನ್ನು ಸೊಂಟಕ್ಕೆ ಕಟ್ಟಿಕೊಂಡು, ಹಗ್ಗಗಳನ್ನು ನಮ್ಮ ತಲೆಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಹೋಗೋಣ. ಒಂದು ವೇಳೆ ಅವನು ನಿನ್ನ ಪ್ರಾಣವನ್ನು ರಕ್ಷಿಸುವನು,” ಎಂದರು.


ಏಕೆಂದರೆ ನಿಮ್ಮೆಲ್ಲರ ನಾಶಕ್ಕೆ ಕಾರಣವಾದ ಈ ಗಡ್ಡೆಗಳ ಹಾಗು ಇಲಿಗಳ ಸ್ವರೂಪಗಳನ್ನು ನೀವು ಮಾಡಿ ಇಸ್ರಾಯೇಲ್ ದೇವರಿಗೆ ಮಹಿಮೆಯನ್ನು ಸಲ್ಲಿಸಬೇಕು. ಆಗ ಒಂದು ವೇಳೆ ಅವರು ನಿಮ್ಮ ಮೇಲೆಯೂ, ನಿಮ್ಮ ದೇವರುಗಳ ಮೇಲೆಯೂ, ನಿಮ್ಮ ಭೂಮಿಯ ಮೇಲೆಯೂ ಇರುವ ತಮ್ಮ ಕೈಯನ್ನು ತೆಗೆದು ಹಗುರಮಾಡುವರು.


ಆಗ ಅವರ ತಂದೆ ಇಸ್ರಾಯೇಲನು ಅವರಿಗೆ, “ಹಾಗಿದ್ದರೆ ನೀವು ಹೀಗೆ ಮಾಡಿರಿ. ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮೊಂದಿಗೆ ಇಟ್ಟುಕೊಂಡು, ಆ ಮನುಷ್ಯನಿಗೆ ಕಾಣಿಕೆ ತೆಗೆದುಕೊಂಡು ಹೋಗಿರಿ. ಅಂದರೆ, ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಆಕ್ರೋಡು ಮತ್ತು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.


ಎರಡನೆಯವನಿಗೂ ಮೂರನೆಯವನಿಗೂ ಮಂದೆಗಳ ಹಿಂದೆ ಹೋಗುವವರೆಲ್ಲರಿಗೂ, “ನೀವು ಏಸಾವನನ್ನು ಕಂಡರೆ ಅವನಿಗೆ ಹಾಗೆಯೇ ಹೇಳಬೇಕು.


ಹೀಗೆ ಆ ಕಾಣಿಕೆಯು ಅವನ ಮುಂದಾಗಿ ಹೊರಟುಹೋಯಿತು. ತಾನಾದರೋ ಆ ರಾತ್ರಿ ಅಲ್ಲಿಯೇ ತಂಗಿದನು.


ಕಾಣಿಕೆಯನ್ನು ಕೊಡುವವನಿಗೆ ಬಾಗಿಲು ತೆರೆಯುತ್ತದೆ; ಅದು ದೊಡ್ಡವರ ಸನ್ನಿಧಾನಕ್ಕೂ ಅವನನ್ನು ಕರೆದುಕೊಂಡು ಹೋಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು