Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:22 - ಕನ್ನಡ ಸಮಕಾಲಿಕ ಅನುವಾದ

22 ಆ ರಾತ್ರಿಯಲ್ಲಿ ಯಾಕೋಬನು ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ, ತನ್ನ ಇಬ್ಬರು ದಾಸಿಯರನ್ನೂ, ತನ್ನ ಹನ್ನೊಂದು ಮಂದಿ ಪುತ್ರರನ್ನೂ ಕರೆದುಕೊಂಡು ಯಬ್ಬೋಕ್ ಎಂಬ ಹೊಳೆಯ ದಂಡೆಯನ್ನು ದಾಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆ ರಾತ್ರಿ ಅವನು ತನ್ನ ಇಬ್ಬರು ಹೆಂಡತಿಯರನ್ನು, ಇಬ್ಬರು ದಾಸಿಯರನ್ನು ಹಾಗೂ ಹನ್ನೊಂದು ಮಂದಿ ಮಕ್ಕಳನ್ನು ಕರೆದುಕೊಂಡು ಯಬ್ಬೋಕ್ ಹೊಳೆಯನ್ನು ದಾಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆ ರಾತ್ರಿ ಯಕೋಬನು ತನ್ನ ಇಬ್ಬರು ಹೆಂಡತಿಯರನ್ನೂ ಇಬ್ಬರು ದಾಸಿಯರನ್ನೂ ಹನ್ನೊಂದು ಮಂದಿ ಮಕ್ಕಳನ್ನೂ ಕರೆದುಕೊಂಡು ‘ಯಬ್ಬೋಕ್’ ಹೊಳೆಯನ್ನು ದಾಟುವ ಸ್ಥಳದಲ್ಲಿ ದಾಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆ ರಾತ್ರಿ ಅವನು ತನ್ನ ಇಬ್ಬರು ಹೆಂಡರನ್ನೂ ಇಬ್ಬರು ದಾಸಿಯರನ್ನೂ ಹನ್ನೊಂದು ಮಂದಿ ಮಕ್ಕಳನ್ನೂ ಕರೆದುಕೊಂಡು ಯಬ್ಬೋಕ್ ಹೊಳೆಯನ್ನು ದಾಟುವ ಸ್ಥಳದಲ್ಲಿ ದಾಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆ ರಾತ್ರಿ, ಯಾಕೋಬನು ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ ತನ್ನ ಇಬ್ಬರು ದಾಸಿಯರನ್ನೂ ತನ್ನ ಹನ್ನೊಂದು ಮಂದಿ ಗಂಡುಮಕ್ಕಳನ್ನೂ ಕರೆದುಕೊಂಡು ಹೊರಟು ಯಬ್ಬೋಕ್ ಹೊಳೆಯನ್ನು ದಾಟತಕ್ಕ ಸ್ಥಳಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:22
10 ತಿಳಿವುಗಳ ಹೋಲಿಕೆ  

ಗಿಲ್ಯಾದ್ ಮೊದಲುಗೊಂಡು ಅರ್ನೋನ್ ತಗ್ಗಿನವರೆಗೂ ಯಬ್ಬೋಕ್ ಹೊಳೆಯವರೆಗೂ ಇರುವ ಪ್ರದೇಶವನ್ನು ರೂಬೇನ್ಯರಿಗೂ ಗಾದ್ಯರಿಗೂ ಕೊಟ್ಟೆನು. ಅರ್ನೋನ್ ತಗ್ಗಿನ ಮಧ್ಯಭಾಗವೇ ಅವರ ಮೇರೆ. ಅವರಿಗೂ ಅಮ್ಮೋನಿಯರಿಗೂ ನಡುವೆ ಇರುವ ಯಬ್ಬೋಕ್ ಹೊಳೆಯು ಅವರ ಮೇರೆ.


ಅಮ್ಮೋನಿಯರ ದೇಶದ ಯಬ್ಬೋಕ್ ನದಿಯ ಬಳಿಯಲ್ಲಿರುವ ಸ್ಥಳವನ್ನೂ ಪರ್ವತ ಪಟ್ಟಣವನ್ನೂ ನಮ್ಮ ದೇವರಾದ ಯೆಹೋವ ದೇವರು ನಮಗೆ ಬೇಡವೆಂದ ಕಾರಣ, ಆ ಸ್ಥಳಗಳನ್ನು ನೀವು ಅತಿಕ್ರಮಿಸಲಿಲ್ಲ.


ಯಾವನಾದರೂ ಸ್ವಂತದವರನ್ನು ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆದವನೂ ಅವಿಶ್ವಾಸಿಗಿಂತ ನೀಚನೂ ಆಗಿದ್ದಾನೆ.


ಅವರಲ್ಲಿ ಮೊದಲನೆಯವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನ್ ಎಂಬವನು. ಅವನು ಅರ್ನೋನ್ ಕಣಿವೆಯ ಮಧ್ಯಭಾಗದ ದಾರಿಯ ಬಳಿಯಲ್ಲಿ ಇರುವ ಅರೋಯೇರ್ ನಗರದಿಂದ, ಅರ್ಧ ಗಿಲ್ಯಾದಿನಿಂದಲೂ ಅಮ್ಮೋನಿಯರ ಮೇರೆಯಾದ ಯಬ್ಬೋಕ್ ನದಿಯವರೆಗೆ ಆಳುತ್ತಿದ್ದನು.


ಆದರೆ ರಾಹೇಲಳು ಸತ್ತುಹೋದಳು. ಅವಳು ಪ್ರಾಣಬಿಡುವಾಗ, ಮಗನಿಗೆ ಬೆನೋನಿ ಎಂದು ಹೆಸರಿಟ್ಟಳು, ಆದರೆ ಅವನ ತಂದೆ ಅವನಿಗೆ ಬೆನ್ಯಾಮೀನ್ ಎಂದು ಹೆಸರಿಟ್ಟನು.


ತರುವಾಯ ಯಾಕೋಬನು ಲಾಬಾನನಿಗೆ, “ನನ್ನ ಸೇವಾ ದಿನಗಳು ಪೂರ್ತಿಯಾದವು. ನಾನು ನನ್ನ ಹೆಂಡತಿಯೊಂದಿಗೆ ಬಾಳುವಂತೆ ಆಕೆಯನ್ನು ನನಗೆ ಕೊಡು,” ಎಂದನು.


ಹೀಗೆ ಆ ಕಾಣಿಕೆಯು ಅವನ ಮುಂದಾಗಿ ಹೊರಟುಹೋಯಿತು. ತಾನಾದರೋ ಆ ರಾತ್ರಿ ಅಲ್ಲಿಯೇ ತಂಗಿದನು.


ಅವನು ಅವರನ್ನು ಕರೆದುಕೊಂಡು ಹೊಳೆ ದಂಡೆಯನ್ನು ದಾಟಿಸಿದ್ದಲ್ಲದೆ ತನಗಿದ್ದದ್ದನ್ನೆಲ್ಲಾ ದಾಟಿಸಿದನು.


ಅಮ್ಮೋನಿಯ ಅರಸನು ಯೆಫ್ತಾಹನ ದೂತರಿಗೆ, “ಇಸ್ರಾಯೇಲರು ಈಜಿಪ್ಟಿನಿಂದ ಬರುವಾಗ, ಅರ್ನೋನಿನಿಂದ ಯಬ್ಬೋಕಿನವರೆಗೂ ಮತ್ತು ಯೊರ್ದನಿನವರೆಗೂ ಇರುವ ನನ್ನ ದೇಶವನ್ನು ತೆಗೆದುಕೊಂಡರು. ಆದ್ದರಿಂದ ಈಗ ಅದನ್ನು ನನಗೆ ಸಮಾಧಾನವಾಗಿ ತಿರುಗಿಕೊಡು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು