Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:28 - ಕನ್ನಡ ಸಮಕಾಲಿಕ ಅನುವಾದ

28 ಅದಕ್ಕೆ ಅವನು, “ನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಎನಿಸಿಕೊಳ್ಳದೆ, ಇಸ್ರಾಯೇಲ್ ಎಂದು ನಿನಗೆ ಹೆಸರಾಗುವುದು. ಏಕೆಂದರೆ ನೀನು ದೇವರ ಸಂಗಡವೂ, ಮನುಷ್ಯರ ಸಂಗಡವೂ ಹೋರಾಡಿ ಜಯಿಸಿದ್ದೀ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅವನು ಯಕೋಬನಿಗೆ, “ಇನ್ನು ಮೇಲೆ ನೀನು ಯಕೋಬ ಎನಿಸಿಕೊಳ್ಳುವುದಿಲ್ಲ; ದೇವರ ಸಂಗಡ ಹಾಗು ಮನುಷ್ಯರ ಸಂಗಡ ಹೋರಾಡಿ ಗೆದ್ದವನಾದ್ದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರುಂಟಾಗುವುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವನು ಯಾಕೋಬನಿಗೆ - ಇನ್ನು ಮೇಲೆ ನೀನು ಯಾಕೋಬನೆನ್ನಿಸಿಕೊಳ್ಳುವದಿಲ್ಲ; ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದ್ದರಿಂದ ನಿನಗೆ ಇಸ್ರಾಯೇಲೆಂದು ಹೆಸರುಂಟಾಗುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆಗ ಆ ಪುರುಷನು, “ಇನ್ನು ಮೇಲೆ ನಿನ್ನ ಹೆಸರು ‘ಯಾಕೋಬ’ ಎಂದಿರುವುದಿಲ್ಲ. ಇಂದಿನಿಂದ ನಿನ್ನ ಹೆಸರು ‘ಇಸ್ರೇಲ್’ ಎಂದಾಗುವುದು. ನಾನೇ ನಿನಗೆ ಈ ಹೆಸರನ್ನು ಕೊಟ್ಟಿದ್ದೇನೆ; ಯಾಕೆಂದರೆ ನೀನು ದೇವರೊಡನೆಯೂ ಮನುಷ್ಯರೊಡನೆಯೂ ಹೋರಾಡಿದೆ; ಆದರೂ ನೀನು ಸೋಲಲಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:28
24 ತಿಳಿವುಗಳ ಹೋಲಿಕೆ  

ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ಬಚ್ಚಿಟ್ಟಿರುವ ಮನ್ನಾವನ್ನು ಕೊಡುವೆನು. ಇದಲ್ಲದೆ ಅವರಿಗೆ ಬಿಳಿಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು, ಅದು ಮತ್ತಾರಿಗೂ ತಿಳಿಯದು.


ದೇವರು ಅವನಿಗೆ, “ಈಗ ನಿನಗೆ ಯಾಕೋಬನೆಂದು ಹೆಸರಿರುವುದು. ಆದರೆ ಇನ್ನು ಮೇಲೆ ನೀನು ಯಾಕೋಬನೆಂದು ಕರೆಸಿಕೊಳ್ಳದೆ, ‘ಇಸ್ರಾಯೇಲ್,’ ಎಂದು ಕರೆಸಿಕೊಳ್ಳುವೆ,” ಎಂದು ಹೇಳಿ, ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟರು.


ಇನ್ನು ಮುಂದೆ, ‘ಅಬ್ರಾಮ್’ ಎಂದು ನಿನಗೆ ಹೆಸರಿರುವುದಿಲ್ಲ. ನಿನ್ನ ಹೆಸರು, ‘ಅಬ್ರಹಾಮ’ ಎಂದು ಇರುವುದು. ಏಕೆಂದರೆ ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆಯನ್ನಾಗಿ ಮಾಡಿದ್ದೇನೆ.


ದೇವರು ಅಬ್ರಹಾಮನಿಗೆ, “ನಿನ್ನ ಹೆಂಡತಿ ಸಾರಯಳ ವಿಷಯದಲ್ಲಾದರೋ, ಆಕೆಯನ್ನು ಸಾರಯಳೆಂದು ಕರೆಯಬೇಡ, ಅವಳ ಹೆಸರು, ‘ಸಾರಾ.’


ನಿಮ್ಮ ಹೆಸರನ್ನು ನಾನು ಆಯ್ದುಕೊಂಡವರಿಗೆ ಶಾಪವಾಗಿ ಉಳಿಸುವಿರಿ. ಹೇಗೆಂದರೆ, ಸಾರ್ವಭೌಮ ಯೆಹೋವ ದೇವರು ಅಪನಂಬಿಗಸ್ತರಾದ ನಿಮ್ಮನ್ನು ಕೊಂದುಹಾಕಿ, ತಮ್ಮ ಸೇವಕರಿಗಾದರೋ ಬೇರೆ ಹೆಸರನ್ನು ನೀಡುವರು.


ಮನುಷ್ಯನ ಮಾರ್ಗಗಳು ಯೆಹೋವ ದೇವರನ್ನು ಮೆಚ್ಚಿಸಿದಾಗ, ಅವರು ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನದಲ್ಲಿರುವಂತೆ ಮಾಡುತ್ತಾರೆ.


ಆಗ ಏಸಾವನು ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು, ಅವನನ್ನು ಅಪ್ಪಿಕೊಂಡು, ಅವನ ಕೊರಳಿನ ಮೇಲೆ ಬಿದ್ದು, ಅವನಿಗೆ ಮುದ್ದಿಟ್ಟನು. ಅವರಿಬ್ಬರೂ ಅತ್ತರು.


ಅವನನ್ನು ಯೇಸುವಿನ ಬಳಿಗೆ ಕರೆತಂದನು. “ಮೆಸ್ಸೀಯ” ಎಂದರೆ ಕ್ರಿಸ್ತ ಎಂದು ಅರ್ಥ. ಯೇಸು ಅವನನ್ನು ನೋಡಿ, “ನೀನು ಯೋಹಾನನ ಮಗ ಸೀಮೋನನು. ನಿನ್ನನ್ನು ‘ಕೇಫ’ ಎಂದು ಕರೆಯುವರು,” ಎಂದು ಹೇಳಿದರು. “ಕೇಫ” ಎಂದರೆ ಪೇತ್ರ ಇಲ್ಲವೆ ಬಂಡೆ ಎಂದರ್ಥ.


ಆಗ ಯಾಕೋಬನು, “ಈ ಹೊತ್ತು ನಿನ್ನ ಜೇಷ್ಠ ಪುತ್ರನ ಹಕ್ಕನ್ನು ನನಗೆ ಮಾರು,” ಎಂದನು.


ಈ ದಿವಸದವರೆಗೂ ಅವರು ತಮ್ಮ ಪೂರ್ವದ ಪದ್ಧತಿಯ ಪ್ರಕಾರ ಮಾಡುತ್ತಾರೆ. ಅವರು ಯೆಹೋವ ದೇವರಿಗೆ ಭಯಪಡದೆ, ತಮ್ಮ ಕಟ್ಟಳೆಗಳ ಪ್ರಕಾರವಾಗಿಯೂ, ತಮ್ಮ ನೀತಿಗಳ ಪ್ರಕಾರವಾಗಿಯೂ, ನಿಯಮದ ಪ್ರಕಾರವಾಗಿಯೂ ಯೆಹೋವ ದೇವರು ಇಸ್ರಾಯೇಲೆಂದು ಹೆಸರಿಟ್ಟ ಯಾಕೋಬನ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಯ ಪ್ರಕಾರವಾಗಿಯೂ ಮಾಡದೆ ಇದ್ದಾರೆ.


ಪ್ರವಾದಿಯಾದ ನಾತಾನನ ಮುಖಾಂತರ ಯೆಹೋವ ದೇವರ ನಿಮಿತ್ತ ಅವನಿಗೆ ಯೆದೀದ್ಯ ಎಂದು ಹೆಸರಿಟ್ಟನು.


ಆಗ ಸೌಲನು ದಾವೀದನಿಗೆ, “ನನ್ನ ಮಗನಾದ ದಾವೀದನೇ, ದೇವರು ನಿನ್ನನ್ನು ಆಶೀರ್ವದಿಸಲಿ. ನೀನು ಮಹತ್ಕಾರ್ಯಗಳನ್ನು ಮಾಡುವೆ, ಗೆದ್ದೇ ಗೆಲ್ಲುವೆ,” ಎಂದನು. ಹಾಗೆಯೇ ದಾವೀದನು ತನ್ನ ಮಾರ್ಗವಾಗಿ ಹೋದನು. ಸೌಲನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.


ಆಗ ಯಾಕೋಬನು ಒಬ್ಬನೇ ಉಳಿದಾಗ, ಒಬ್ಬ ಮನುಷ್ಯನು ಉದಯವಾಗುವವರೆಗೆ ಅವನ ಸಂಗಡ ಹೋರಾಡಿದನು.


ಆ ರಾತ್ರಿ ದೇವರು ಸ್ವಪ್ನದಲ್ಲಿ ಅರಾಮಿನವನಾದ ಲಾಬಾನನ ಬಳಿಗೆ ಬಂದು ಅವನಿಗೆ, “ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು,” ಎಂದರು.


ದೇಶವನ್ನು ಸಂಚರಿಸಿ ನೋಡುವುದಕ್ಕಾಗಿ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗ ಹೋಶೇಯನಿಗೆ ಯೆಹೋಶುವ ಎಂದು ಹೆಸರಿಟ್ಟನು.


“ನಿನಗೆ ಇಸ್ರಾಯೇಲನೆಂಬ ಹೆಸರುಂಟಾಗಿರುವುದು,” ಎಂದು ಯೆಹೋವ ದೇವರ ವಾಕ್ಯವು ಬಂದ ಯಾಕೋಬನ ಮಕ್ಕಳ ಗೋತ್ರಗಳ ಲೆಕ್ಕದ ಪ್ರಕಾರ, ಎಲೀಯನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು,


ಅಲ್ಲಿ ಬಲಿಪೀಠವನ್ನು ಕಟ್ಟಿಸಿ ಅದಕ್ಕೆ, ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.


ಆ ಮನುಷ್ಯನು ಅವನಿಗೆ, “ನಿನ್ನ ಹೆಸರು ಏನು?” ಎಂದಾಗ. ಅವನು, “ಯಾಕೋಬ,” ಎಂದನು.


ಅಬ್ರಹಾಮನು ಸಾರಳಿಂದ ಇಸಾಕನನ್ನು ಪಡೆದನು. ಇಸಾಕನಿಗೆ ಇಬ್ಬರು ಮಕ್ಕಳು ಏಸಾವ ಮತ್ತು ಯಾಕೋಬ.


ಈಗಲಾದರೋ ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ, ರೂಪಿಸಿದ ಯೆಹೋವ ದೇವರು ಹೇಳುವುದೇನೆಂದರೆ: “ಹೆದರಬೇಡ, ಏಕೆಂದರೆ ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು