Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:30 - ಕನ್ನಡ ಸಮಕಾಲಿಕ ಅನುವಾದ

30 ಆಗ ಯಾಕೋಬನು, “ನಾನು ದೇವರನ್ನು ಮುಖಾಮುಖಿಯಾಗಿ ನೋಡಿದರೂ, ನನ್ನ ಪ್ರಾಣ ಉಳಿಯಿತು,” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆಗ ಯಾಕೋಬನು, “ನಾನು ದೇವರನ್ನು ಪ್ರತ್ಯಕ್ಷವಾಗಿ ನೋಡಿದೆನಲ್ಲಾ; ಆದರೂ ನನ್ನ ಪ್ರಾಣ ಉಳಿದಿದೆ” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಯಕೋಬನು, “ನಾನು ದೇವರನ್ನು ಮುಖಾಮುಖಿಯಾಗಿ ಕಂಡಿದ್ದರೂ ಪ್ರಾಣಸಹಿತ ಉಳಿದಿದ್ದೇನಲ್ಲಾ!” ಎಂದುಕೊಂಡು ಆ ಸ್ಥಳಕ್ಕೆ ‘ಪೆನೀಯೇಲ್’ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯಾಕೋಬನು - ನಾನು ದೇವರನ್ನೇ ಪ್ರತ್ಯಕ್ಷವಾಗಿ ನೋಡಿದ್ದೇನಲ್ಲಾ; ಆದರೂ ನನ್ನ ಪ್ರಾಣ ಉಳಿದದೆ ಅಂದುಕೊಂಡು ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆದ್ದರಿಂದ ಯಾಕೋಬನು, “ಈ ಸ್ಥಳದಲ್ಲಿ ನಾನು ದೇವರನ್ನು ಮುಖಾಮುಖಿಯಾಗಿ ನೋಡಿದರೂ ನನ್ನ ಜೀವ ಉಳಿಯಿತು” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:30
28 ತಿಳಿವುಗಳ ಹೋಲಿಕೆ  

ನಾನು ಗೂಢವಾಗಿ ಅಲ್ಲ ಸ್ಪಷ್ಟವಾಗಿ, ಮುಖಾಮುಖಿಯಾಗಿ ಅಂದರೆ, ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. ಅವನು ಯೆಹೋವ ದೇವರ ರೂಪವನ್ನು ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?”


ಆಮೇಲೆ ಆಕೆಯು ತನ್ನ ಸಂಗಡ ಮಾತನಾಡಿದ ಯೆಹೋವ ದೇವರಿಗೆ, “ನೀವು ನನ್ನನ್ನು ನೋಡುವ ದೇವರು,” ಎಂದು ಹೆಸರಿಟ್ಟಳು. ಏಕೆಂದರೆ, “ನನ್ನನ್ನು ನೋಡುವ ದೇವರನ್ನು ನಾನು ಇಲ್ಲಿ ನೋಡಿದೆ,” ಎಂದುಕೊಂಡಳು.


ಆಗ ನಾನು, “ಅಯ್ಯೋ, ನಾನು ನಾಶವಾದೆನಲ್ಲಾ! ಏಕೆಂದರೆ, ನಾನು ಅಶುದ್ಧ ತುಟಿಯವನು. ನಾನು ಅಶುದ್ಧ ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು. ನನ್ನ ಕಣ್ಣುಗಳು ರಾಜಾಧಿರಾಜರೂ ಸೇನಾಧೀಶ್ವರ ಯೆಹೋವ ದೇವರನ್ನು ಕಂಡವು!” ಎಂದೆನು.


“ಇಗೋ, ನಮ್ಮ ದೇವರಾದ ಯೆಹೋವ ದೇವರು ತಮ್ಮ ಮಹಿಮೆಯನ್ನೂ, ತಮ್ಮ ಘನವನ್ನೂ ನಮಗೆ ತೋರಿಸಿದ್ದಾರೆ. ಅವರ ಸ್ವರವನ್ನು ಬೆಂಕಿಯೊಳಗಿಂದ ಕೇಳಿದ್ದೇವೆ. ದೇವರು ಮನುಷ್ಯರ ಸಂಗಡ ಮಾತನಾಡಿದ ಮೇಲೂ, ಅವರು ಬದುಕುತ್ತಾರೆಂದು ಈ ಹೊತ್ತು ನೋಡಿದ್ದೇವೆ.


ದೇವರನ್ನು ಯಾರೂ ಎಂದೂ ಕಂಡಿಲ್ಲ; ತಂದೆ ದೇವರ ಹೃದಯಕ್ಕೆ ಹತ್ತಿರವಾಗಿರುವ ಏಕೈಕ ಪುತ್ರ ಆಗಿರುವವರೂ ಸ್ವತಃ ದೇವರೂ ಆಗಿರುವವರೂ ತಂದೆಯನ್ನು ಪ್ರಕಟಪಡಿಸಿದ್ದಾರೆ.


ನಂಬಿಕೆಯಿಂದಲೇ ಮೋಶೆ ಅರಸನ ಕೋಪಕ್ಕೆ ಭಯಪಡದೆ ಈಜಿಪ್ಟನ್ನು ಬಿಟ್ಟುಹೋದನು. ಏಕೆಂದರೆ ಅವನು ಕಣ್ಣಿಗೆ ಕಾಣದ ದೇವರನ್ನು ಕಣ್ಣಾರೆ ಕಾಣುತ್ತಿರುವನೋ ಎನ್ನುವಷ್ಟು ದೃಢಚಿತ್ತನಾಗಿದ್ದನು.


ಆದರೆ ಈಗ ನಮಗೆ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಕೃಪೆ ಪ್ರಕಟವಾಯಿತು. ಕ್ರಿಸ್ತ ಯೇಸು ಮರಣವನ್ನು ನಾಶಮಾಡಿ, ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವವನ್ನೂ ಪ್ರಕಾಶಗೊಳಿಸಿದರು.


ನಮ್ಮ ಕರ್ತ ಯೇಸುಕ್ರಿಸ್ತರ ದೇವರೂ ಮಹಿಮೆಯ ತಂದೆಯಾದವರನ್ನು ನೀವು ಪೂರ್ಣವಾಗಿ ತಿಳಿದುಕೊಳ್ಳುವಂತೆ ಜ್ಞಾನದ ಮತ್ತು ಪ್ರಕಟಣೆಯ ಆತ್ಮವನ್ನು ನಿಮಗೆ ಅನುಗ್ರಹಿಸಲಿ ಎಂದು ನಿಮಗಾಗಿ ಯಾವಾಗಲೂ ಪ್ರಾರ್ಥನೆ ಮಾಡುವವನಾಗಿದ್ದೇನೆ.


ಆಗ ಯೆಹೋವ ದೇವರು, “ನನ್ನ ಪ್ರಸನ್ನತೆಯು ನಿನ್ನ ಸಂಗಡ ಹೋಗುವುದು. ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು,” ಎಂದರು.


ಕ್ರಿಸ್ತ ಯೇಸು ಅದೃಶ್ಯರಾದ ದೇವರ ಸ್ವರೂಪವೂ ಸರ್ವಸೃಷ್ಟಿಗು ಜ್ಯೇಷ್ಠ ಪುತ್ರರೂ ಆಗಿದ್ದಾರೆ.


ಕ್ರಿಸ್ತ ಯೇಸುವಿನ ಕೃಪೆಯಲ್ಲಿ ನಿಮ್ಮನ್ನು ಕರೆದ ದೇವರನ್ನು ನೀವು ಇಷ್ಟು ಬೇಗನೆ ಬಿಟ್ಟು ಬೇರೆ ಸುವಾರ್ತೆಯ ಕಡೆಗೆ ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದು ಆಜ್ಞಾಪಿಸಿದ ದೇವರು ತಾವೇ, ತಮ್ಮ ಪ್ರಕಾಶವನ್ನು ನಮ್ಮ ಹೃದಯದ ಮೇಲೆ ಬೆಳಗಿಸಿದ್ದಾರೆ. ಹೀಗೆ ಕ್ರಿಸ್ತ ಯೇಸುವಿನ ಮುಖದಲ್ಲಿ ಪ್ರತಿಬಿಂಬಿಸುತ್ತಿರುವ ದೇವರ ಮಹಿಮೆಯ ತಿಳುವಳಿಕೆಯನ್ನು ನಮ್ಮಲ್ಲಿ ಉದಯಿಸುವಂತಾಗಿದೆ.


ಹಾಗೆಯೇ, ನಾವು ಮುಸುಕಿಲ್ಲದ ನಮ್ಮ ಮುಖದಲ್ಲಿ ಕರ್ತದೇವರ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಹೀಗೆ ನಾವು ಮಹಿಮೆಯಿಂದ ಅಧಿಕ ಮಹಿಮೆಗೆ ಸಾಗಿ ಅವರ ಸಾರೂಪ್ಯಕ್ಕೆ ಅನುಸಾರವಾಗಿ ನಾವು ರೂಪಾಂತರವಾಗುತ್ತಿದ್ದೇವೆ. ಈ ರೂಪಾಂತರವು ದೇವರಾತ್ಮನಾಗಿರುವ ಕರ್ತನಿಂದಲೇ.


ಯಾರೊಬ್ಬಾಮನು ಎಫ್ರಾಯೀಮನ ಬೆಟ್ಟದಲ್ಲಿ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ, ಅದರಲ್ಲಿ ವಾಸಿಸಿದನು. ಅಲ್ಲಿಂದ ಹೊರಟುಹೋಗಿ ಪೆನೀಯೇಲ್ ಪಟ್ಟಣವನ್ನು ಭದ್ರಪಡಿಸಿದನು.


ಪೆನೀಯೇಲಿನ ಗೋಪುರವನ್ನು ಕೆಡವಿ, ಆ ಪಟ್ಟಣದ ಮನುಷ್ಯರನ್ನು ಕೊಂದುಹಾಕಿದನು.


ಅಲ್ಲಿಂದ ಪೆನೀಯೇಲಿಗೆ ಹೋಗಿ, ಆ ಊರಿನವರ ಸಂಗಡ ಆ ಪ್ರಕಾರವೇ ಮಾತನಾಡಿದನು. ಅವರು ಸುಕ್ಕೋತಿನ ಮನುಷ್ಯರು ಉತ್ತರ ಕೊಟ್ಟ ಹಾಗೆಯೇ ಉತ್ತರಕೊಟ್ಟರು.


ಯೆಹೋವ ದೇವರ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದ ಮೋಶೆಯಂಥ ಪ್ರವಾದಿ ಇಸ್ರಾಯೇಲರಲ್ಲಿ ಮತ್ತೆ ಹುಟ್ಟಲೇ ಇಲ್ಲ.


ಇದಲ್ಲದೆ ಅವನು ಆ ಸ್ಥಳಕ್ಕೆ, ಬೇತೇಲ್, ಎಂದು ಹೆಸರಿಟ್ಟನು. ಅದಕ್ಕಿಂತ ಮೊದಲು ಆ ಸ್ಥಳಕ್ಕೆ, ಲೂಜ್ ಎಂದು ಹೆಸರಿತ್ತು.


ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ಆಗ ಮುಖಾಮುಖಿಯಾಗಿ ನೋಡುವೆವು. ಈಗ ಸ್ವಲ್ಪ ಮಾತ್ರ ನನಗೆ ತಿಳಿದಿದೆ. ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ, ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.


ಇದಾದ ಮೇಲೆ ಯೆಹೋಶುವನು ಯೆರಿಕೋವಿನ ಬಳಿಯಲ್ಲಿ ಇದ್ದಾಗ, ಒಮ್ಮೆ ಕಣ್ಣೆತ್ತಿ ನೋಡಿದನು. ಆಗ ಒಬ್ಬ ಮನುಷ್ಯನು ಅವನಿಗೆದುರಾಗಿ ನಿಂತಿದ್ದನು. ಆತನ ಕೈಯಲ್ಲಿ ಹಿರಿದ ಖಡ್ಗ ಇರುವುದನ್ನು ಕಂಡನು. ಯೆಹೋಶುವನು ಆತನ ಬಳಿಗೆ ಹೋಗಿ ಆತನಿಗೆ, “ನೀವು ನಮ್ಮವರೋ ಅಥವಾ ಶತ್ರು ಕಡೆಯವರೋ?” ಎಂದು ಕೇಳಿದನು.


ಯಾಕೋಬನು ಪದ್ದನ್ ಅರಾಮಿನಿಂದ ಬಂದಾಗ, ದೇವರು ಅವನಿಗೆ ಇನ್ನೊಂದು ಸಾರಿ ಪ್ರತ್ಯಕ್ಷನಾಗಿ, ಅವನನ್ನು ಆಶೀರ್ವದಿಸಿದರು.


ಏಕೆಂದರೆ ಅವನು ಯೆಹೋವ ದೇವರ ದೂತನೆಂದು ಮಾನೋಹನು ಅರಿಯದೆ ಇದ್ದನು. ಮಾನೋಹನು ಯೆಹೋವ ದೇವರ ದೂತನಿಗೆ, “ನೀನು ಹೇಳಿದ ಮಾತುಗಳು ನೆರವೇರುವಾಗ, ನಾವು ನಿನ್ನನ್ನು ಘನಪಡಿಸುವ ಹಾಗೆ ನಿನ್ನ ಹೆಸರೇನು?” ಎಂದನು.


ಆದರೆ ಯೆಹೋವ ದೇವರ ದೂತನು ಅವನಿಗೆ, “ನನ್ನ ಹೆಸರು ಏನೆಂದು ನೀನು ಕೇಳುವುದೇನು? ಆ ಹೆಸರು ಆಶ್ಚರ್ಯಕರವಾದದ್ದು,” ಎಂದನು.


ಯುದ್ಧವೀರರ ಪ್ರತಿ ಯುದ್ಧವು ಗಲಿಬಿಲಿಯ ಗದ್ದಲದಿಂದ ರಕ್ತದಲ್ಲಿ ಹೊರಳಾಡಿಸಿದ ವಸ್ತ್ರಗಳು ಆಗಿರುತ್ತವೆ. ಆದರೆ ಇವು ಬೆಂಕಿಗೆ ಆಹುತಿಯಾಗುತ್ತವೆ. ಅದು ಬೆಂಕಿಗೆ ಇಂಧನವಾಗಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು