ಆದಿಕಾಂಡ 32:6 - ಕನ್ನಡ ಸಮಕಾಲಿಕ ಅನುವಾದ6 ಆಗ ದೂತರು ಯಾಕೋಬನ ಬಳಿಗೆ ಹಿಂದಿರುಗಿ ಬಂದು, “ನಾವು ನಿನ್ನ ಸಹೋದರ ಏಸಾವನ ಬಳಿಗೆ ಹೋಗಿ ಬಂದಿದ್ದೇವೆ; ಅವನು ನಾನೂರು ಮಂದಿಯನ್ನು ಕರೆದುಕೊಂಡು ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಿದ್ದಾನೆ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ತರುವಾಯ ಆ ಸೇವಕರು ಯಾಕೋಬನ ಬಳಿಗೆ ಹಿಂತಿರುಗಿ ಬಂದು, “ನಾವು ನಿನ್ನ ಅಣ್ಣನಾದ ಏಸಾವನ ಹತ್ತಿರಕ್ಕೆ ಹೋಗಿ ಬಂದಿದ್ದೇವೆ, ಅವನು ನಾನೂರು ಜನರ ಸಮೇತ ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ” ಎಂದು ಹೇಳಿದಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆ ಆಳುಗಳು ಹೋಗಿ ಯಕೋಬನ ಬಳಿಗೆ ಹಿಂದಿರುಗಿ ಬಂದು, “ನಾವು ನಿಮ್ಮ ಅಣ್ಣ ಏಸಾವನ ಬಳಿಗೆ ಹೋಗಿದ್ದೆವು. ಅವರು ನಾನೂರು ಜನರ ಸಮೇತ ನಿಮ್ಮನ್ನು ಎದುರುಗೊಳ್ಳಲು ಬರುತ್ತಿದ್ದಾರೆ,” ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ತರುವಾಯ ಆ ದೂತರು ಯಾಕೋಬನ ಬಳಿಗೆ ತಿರಿಗಿ ಬಂದು - ನಾವು ನಿನ್ನ ಅಣ್ಣನಾದ ಏಸಾವನ ಹತ್ತಿರಕ್ಕೆ ಹೋಗಿ ಬಂದಿದ್ದೇವೆ, ಅವನು ನಾನೂರು ಜನರ ಸಮೇತ ನಿನ್ನನ್ನು ಎದುರುಗೊಳ್ಳುವದಕ್ಕೆ ಬರುತ್ತಾನೆಂದು ಹೇಳಿದಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಸಂದೇಶಕರು ಯಾಕೋಬನ ಬಳಿಗೆ ಹಿಂತಿರುಗಿ ಬಂದು, “ನಾವು ನಿನ್ನ ಅಣ್ಣನಾದ ಏಸಾವನ ಬಳಿಗೆ ಹೋದೆವು. ಅವನು ನಿನ್ನನ್ನು ಭೇಟಿಯಾಗಲು ಬರುತ್ತಿದ್ದಾನೆ. ಅವನೊಡನೆ ನಾನೂರು ಮಂದಿ ಗಂಡಸರಿದ್ದಾರೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |