ಆದಿಕಾಂಡ 32:7 - ಕನ್ನಡ ಸಮಕಾಲಿಕ ಅನುವಾದ7 ಆಗ ಯಾಕೋಬನು ಬಹಳವಾಗಿ ಭಯಪಟ್ಟು, ತನ್ನ ಸಂಗಡ ಇದ್ದ ಜನರನ್ನೂ, ಕುರಿಗಳನ್ನೂ, ದನಗಳನ್ನೂ, ಒಂಟೆಗಳನ್ನೂ ಎರಡು ಗುಂಪುಗಳಾಗಿ ವಿಭಾಗಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯಾಕೋಬನಿಗೆ ಬಹು ಭಯವೂ ಕಳವಳವೂ ಉಂಟಾದವು. ಅವನು ತನ್ನೊಂದಿಗಿದ್ದ ಜನರನ್ನು, ಕುರಿದನಗಳನ್ನು ಹಾಗೂ ಒಂಟೆಗಳನ್ನು ಎರಡು ಗುಂಪುಗಳಾಗಿ ವಿಭಾಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಗ ಯಕೋಬನು ಬಹಳ ದಿಗಿಲುಗೊಂಡನು, ಕಳವಳಗೊಂಡನು; ತನ್ನ ಜನರನ್ನೂ ಕುರಿ, ದನ, ಒಂಟೆಗಳನ್ನೂ ಎರಡು ಪರಿವಾರಗಳಾಗಿ ವಿಂಗಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯಾಕೋಬನಿಗೆ ಬಹು ಭಯವೂ ಕಳವಳವೂ ಉಂಟಾದವು. ಅವನು ತನ್ನೊಂದಿಗಿದ್ದ ಜನರನ್ನೂ ಕುರಿ ದನ ಒಂಟೆಗಳನ್ನೂ ಎರಡು ಪಾಳೆಯ ಮಾಡಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯಾಕೋಬನಿಗೆ ಭಯವಾಯಿತು. ಅವನು ತನ್ನೊಡನೆ ಇದ್ದ ಜನರನ್ನು ಎರಡು ಗುಂಪುಗಳನ್ನಾಗಿ ವಿಂಗಡಿಸಿದನು. ಅವನು ಎಲ್ಲಾ ಆಡುಕುರಿಗಳನ್ನೂ ದನಕರುಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳನ್ನಾಗಿ ವಿಂಗಡಿಸಿದನು. ಅಧ್ಯಾಯವನ್ನು ನೋಡಿ |