Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 33:13 - ಕನ್ನಡ ಸಮಕಾಲಿಕ ಅನುವಾದ

13 ಅದಕ್ಕೆ ಯಾಕೋಬನು ಅವನಿಗೆ, “ಮಕ್ಕಳು ಎಳೆಯ ಪ್ರಾಯದವರಿದ್ದಾರೆ, ಇದಲ್ಲದೆ ಎಳೆಯ ದನಕುರಿಗಳು ನನ್ನ ಬಳಿಯಲ್ಲಿರುವುದು ನನ್ನ ಒಡೆಯನಿಗೆ ತಿಳಿದಿದೆ. ಒಂದು ದಿನ ಹೆಚ್ಚಾಗಿ ಅವುಗಳನ್ನು ನಡೆಸಿದರೆ, ಎಲ್ಲಾ ಮಂದೆಯು ಸತ್ತು ಹೋದಾವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಕ್ಕೆ ಯಾಕೋಬನು, “ನನ್ನ ಮಕ್ಕಳು ಎಳೇ ಪ್ರಾಯದವರು ಇದಲ್ಲದೆ ಎಳೆಯ ದನಕುರಿಗಳು ನನ್ನ ಬಳಿಯಲ್ಲಿರುವುದು ಪ್ರಭುವಿಗೆ ತಿಳಿದಿದೆ. ಒಂದು ದಿನ ಹೆಚ್ಚಾಗಿ ಅವುಗಳನ್ನು ನಡಿಸಿದರೆ ಆಡುಕುರಿಗಳ ಹಿಂಡುಗಳೆಲ್ಲವೂ ಸತ್ತು ಹೋದಾವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದಕ್ಕೆ ಯಕೋಬನು, “ನನ್ನೊಡೆಯರಾದ ನಿಮಗೆ ತಿಳಿದಿರುವಂತೆ ನನ್ನ ಮಕ್ಕಳು ಎಳೆಯ ಪ್ರಾಯದವರು; ಈದಿರುವ ದನಕುರಿಗಳೂ ನನಗಿವೆ; ಒಂದೇ ದಿನ ಹೆಚ್ಚಾಗಿ ದಾರಿ ನಡೆಸಿದೆನಾದರೆ ಆಡುಕುರಿಗಳೆಲ್ಲವೂ ಸತ್ತುಹೋದಾವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದಕ್ಕೆ ಯಾಕೋಬನು - ನನ್ನ ಮಕ್ಕಳು ಎಳೇ ಪ್ರಾಯದವರು; ಅದಲ್ಲದೆ ಈದಿರುವ ದನಕುರಿಗಳು ನನ್ನ ಬಳಿಯಲ್ಲಿರುವದು ಪ್ರಭುವಿಗೆ ತಿಳಿದಿದೆ; ಒಂದೇ ದಿನ ಹೆಚ್ಚಾಗಿ ದಾರಿ ನಡಿಸಿದರೆ ಆಡುಕುರಿಗಳೆಲ್ಲವೂ ಸತ್ತು ಹೋದಾವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ಯಾಕೋಬನು ಅವನಿಗೆ, “ನನ್ನ ಮಕ್ಕಳು ಬಲಹೀನರೆಂದು ನಿನಗೆ ಗೊತ್ತಿದೆ. ನಾನು ನನ್ನ ದನಕುರಿಗಳನ್ನೂ ಅವುಗಳ ಮರಿಗಳನ್ನೂ ಎಚ್ಚರಿಕೆಯಿಂದ ನೋಡಿಕೊಳ್ಳಬೇಕು. ಒಂದೇ ದಿನದಲ್ಲಿ ಬಹುದೂರದವರೆಗೆ ಎಡಬಿಡದೆ ನಡೆಸಿಕೊಂಡು ಹೋದರೆ, ಎಲ್ಲಾ ಪಶುಗಳು ಸತ್ತುಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 33:13
10 ತಿಳಿವುಗಳ ಹೋಲಿಕೆ  

ಅವರು ತಮ್ಮ ಮಂದೆಯನ್ನು ಕುರುಬನಂತೆ ಮೇಯಿಸುವರು. ಕುರಿಮರಿಗಳನ್ನು ಕೂಡಿಸಿ, ಅವುಗಳನ್ನು ತಮ್ಮ ಎದೆಗಪ್ಪಿಕೊಳ್ಳುವರು, ಎಳೆಯ ಮರಿಗಳನ್ನು ಮೆಲ್ಲಗೆ ನಡಿಸುವರು.


ನೀತಿವಂತನು ತನ್ನ ಪ್ರಾಣಿಗಳಿಗೂ ಕಾಳಜಿ ತೋರುವನು; ಆದರೆ ದುಷ್ಟರ ಕರುಣೆಯ ಕಾರ್ಯಗಳು ಕ್ರೂರತನವೇ.


ದಾವೀದನು, “ನನ್ನ ಮಗ ಸೊಲೊಮೋನನು ಎಳೆಯ ಪ್ರಾಯದವನಾಗಿದ್ದಾನೆ. ಯೆಹೋವ ದೇವರಿಗೆ ಕಟ್ಟಬೇಕಾದ ಆಲಯವು ಸಮಸ್ತ ದೇಶಗಳಲ್ಲಿ ಕೀರ್ತಿಯಲ್ಲಿಯೂ, ಸೌಂದರ್ಯದಲ್ಲಿಯೂ ಅಧಿಕ ಘನವುಳ್ಳದ್ದಾಗಿರಬೇಕು. ನಾನು ಅದಕ್ಕೋಸ್ಕರ ಈಗ ಸಿದ್ಧಮಾಡುವೆನು,” ಎಂದು ಹೇಳಿದನು. ಆದ್ದರಿಂದ ದಾವೀದನು ಸಾಯುವುದಕ್ಕಿಂತ ಮುಂಚೆ ಬಹಳವಾಗಿ ಸಿದ್ಧಮಾಡಿದನು.


ತರುವಾಯ ಏಸಾವನು, “ನಾವು ಮುಂದಕ್ಕೆ ಪ್ರಯಾಣವನ್ನು ಬೆಳೆಸೋಣ. ನಾನು ನಿನ್ನ ಮುಂದೆ ಹೋಗುವೆನು,” ಎಂದನು.


ಆದ್ದರಿಂದ ನನ್ನ ಒಡೆಯನೇ, ನೀನು ನಿನ್ನ ಸೇವಕನಿಗಿಂತಲೂ ಮುಂಚೆ ಹೋಗಬಹುದು. ನಾನು ನನ್ನ ಒಡೆಯನ ಬಳಿಗೆ ಸೇಯೀರಿಗೆ ಬರುವವರೆಗೆ, ನನ್ನ ಮುಂದಿರುವ ಮಂದೆಗಳ ನಡಿಗೆಗೂ, ಮಕ್ಕಳ ನಡಿಗೆಗೂ ತಕ್ಕ ಹಾಗೆ ಮೆಲ್ಲಗೆ ನಡೆದು ಬರುವೆನು,” ಎಂದನು.


ಅವರು ಆ ಪ್ರಕಾರವೇ ಎರಡು ಹಾಲು ಕರೆಯುವ ಹಸುಗಳನ್ನು ತೆಗೆದುಕೊಂಡು ಅವುಗಳನ್ನು ಬಂಡಿಗೆ ಕಟ್ಟಿ ಅವುಗಳ ಕರುಗಳನ್ನು ಮನೆಯಲ್ಲಿಟ್ಟು


ತಮ್ಮ ಪ್ರಜೆಯಾದ ಯಾಕೋಬ್ಯರನ್ನೂ ತಮ್ಮ ಬಾಧ್ಯತೆಯಾದ ಇಸ್ರಾಯೇಲರನ್ನೂ ಮೇಯಿಸುವ ಕುರುಬನನ್ನಾಗಿ ದಾವೀದನನ್ನು ನೇಮಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು