Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 33:17 - ಕನ್ನಡ ಸಮಕಾಲಿಕ ಅನುವಾದ

17 ಯಾಕೋಬನು ಪ್ರಯಾಣಮಾಡಿ, ಸುಕ್ಕೋತಿಗೆ ಹೋಗಿ, ಮನೆಯನ್ನು ಕಟ್ಟಿಸಿಕೊಂಡನು. ಇದಲ್ಲದೆ ತನ್ನ ಪಶುಗಳಿಗೆ ಹಟ್ಟಿಗಳನ್ನು ಮಾಡಿಸಿದನು. ಆದ್ದರಿಂದ ಆ ಸ್ಥಳಕ್ಕೆ ಸುಕ್ಕೋತ್ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯಾಕೋಬನು ಪ್ರಯಾಣಮಾಡಿ ಸುಕ್ಕೋತಿಗೆ ಬಂದನು. ಅಲ್ಲಿ ತನಗೋಸ್ಕರ ಮನೆಯನ್ನೂ ದನಗಳಿಗೆ ಆಶ್ರಯವನ್ನೂ ಮಾಡಿಸಿದನು. ಆದುದರಿಂದ ಆ ಸ್ಥಳಕ್ಕೆ “ಸುಕ್ಕೋತ್” ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇತ್ತ ಯಕೋಬನು ಪ್ರಯಾಣ ಬೆಳೆಸುತ್ತಾ ಸುಕ್ಕೋತಿಗೆ ಬಂದನು. ಅಲ್ಲಿ ತನಗೋಸ್ಕರ ಮನೆಯನ್ನೂ ಮಂದೆಗಳಿಗೋಸ್ಕರ ಕೊಟ್ಟಿಗೆಗಳನ್ನೂ ಕಟ್ಟಿಸಿದನು. ಈ ಕಾರಣ ಆ ಸ್ಥಳಕ್ಕೆ ‘ಸುಕ್ಕೋತ್’ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯಾಕೋಬನು ಪ್ರಯಾಣ ಮಾಡಿ ಸುಕ್ಕೋತಿಗೆ ಬಂದನು. ಅಲ್ಲಿ ತನಗೋಸ್ಕರ ಮನೆಯನ್ನೂ ದನಗಳಿಗೆ ಚಪ್ಪರಗಳನ್ನೂ ಮಾಡಿಸಿದನು; ಆದದರಿಂದ ಆ ಸ್ಥಳಕ್ಕೆ ಸುಕ್ಕೋತ್ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಯಾಕೋಬನು ಸುಕ್ಕೋತಿಗೆ ಹೋದನು. ಆ ಸ್ಥಳದಲ್ಲಿ ಅವನು ತನಗಾಗಿ ಒಂದು ಮನೆಯನ್ನೂ ತನ್ನ ದನಕುರಿಗಳಿಗಾಗಿ ಚಿಕ್ಕ ಕೊಟ್ಟಿಗೆಗಳನ್ನೂ ಕಟ್ಟಿಸಿದನು. ಆದ್ದರಿಂದ ಆ ಸ್ಥಳಕ್ಕೆ “ಸುಕ್ಕೋತ್” ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 33:17
10 ತಿಳಿವುಗಳ ಹೋಲಿಕೆ  

ದೇವರು ತಮ್ಮ ಪರಿಶುದ್ಧ ಸ್ಥಳದಿಂದ ಹೀಗೆ ನುಡಿದಿದ್ದಾರೆ: “ನಾನು ಜಯದಿಂದ ಶೆಕೆಮ್ ಪ್ರದೇಶವನ್ನು ಹಂಚುವೆನು. ಸುಕ್ಕೋತಿನ ತಗ್ಗನ್ನು ಅಳತೆ ಮಾಡುವೆನು.


ಅವನು ಸುಕ್ಕೋತನವರಿಗೆ, “ದಯಮಾಡಿ ನನ್ನ ಕೂಡ ಇರುವ ಜನರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ. ಏಕೆಂದರೆ ಅವರು ದಣಿದಿದ್ದಾರೆ. ನಾನು ಮಿದ್ಯಾನ್ಯರ ಅರಸುಗಳಾದ ಜೆಬಹನನ್ನೂ, ಚಲ್ಮುನ್ನನನ್ನೂ ಹಿಂದಟ್ಟುತ್ತೇನೆ,” ಎಂದನು.


ತಗ್ಗಿನಲ್ಲಿರುವ ಬೇತ್‌ಹಾರಾಮ್, ಬೇತ್ ನಿಮ್ರಾ, ಸುಕ್ಕೋತ್, ಚಾಪೋನ್ ಎಂಬ ಪಟ್ಟಣಗಳು ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನ್ ನದಿ ತೀರವಾಗಿ ಕಿನ್ನೆರೆತ್ ಸಮುದ್ರದ ಪರ್ಯಂತರಕ್ಕೂ ಇರುವ ದೇಶವು ಅವರ ಮೇರೆಗೆ ಒಳಗಾದವು.


ಪಟ್ಟಣದ ಹಿರಿಯರನ್ನು ಮತ್ತು ಸುಕ್ಕೋತಿನವರನ್ನು ಹಿಡಿದು, ಮರುಭೂಮಿಯ ಮುಳ್ಳು ಹಾಗು ಕಾರೆಗಿಡದ ಮುಳ್ಳುಗಳಿಂದ ದಂಡಿಸಿ ಅವರಿಗೆ ಪಾಠ ಕಲಿಸಿದನು.


ಅಲ್ಲಿಂದ ಪೆನೀಯೇಲಿಗೆ ಹೋಗಿ, ಆ ಊರಿನವರ ಸಂಗಡ ಆ ಪ್ರಕಾರವೇ ಮಾತನಾಡಿದನು. ಅವರು ಸುಕ್ಕೋತಿನ ಮನುಷ್ಯರು ಉತ್ತರ ಕೊಟ್ಟ ಹಾಗೆಯೇ ಉತ್ತರಕೊಟ್ಟರು.


ಯೊರ್ದನಿಗೆ ಸೇರಿದ ಬಯಲಾದ ಸುಕ್ಕೋತಿಗೂ, ಚಾರೆತಾನಿಗೂ ನಡುವೆ ಇರುವ ಜೇಡಿಮಣ್ಣಿನ ಅಚ್ಚುಗಳಲ್ಲಿ ಅರಸನು ಅವುಗಳನ್ನು ಎರಕ ಹೊಯ್ಯಿಸಿದನು.


ಸುಕ್ಕೋತಿನ ಮನುಷ್ಯರಲ್ಲಿ ಒಬ್ಬ ಯೌವನಸ್ಥನನ್ನು ಹಿಡಿದು ಅವನನ್ನು ಕೇಳಿದಾಗ ಅವನು, ಸುಕ್ಕೋತಿನ ಪ್ರಧಾನರೂ, ಹಿರಿಯರೂ ಆದ ಎಪ್ಪತ್ತೇಳು ಜನರ ಹೆಸರನ್ನು ಅವನು ಬರೆದನು.


ಹೀಗೆ ಅವರು ಸುಕ್ಕೋತಿನಿಂದ ಪ್ರಯಾಣಮಾಡಿ, ಏತಾಮಿನ ಮರುಭೂಮಿಯ ಅಂಚಿನಲ್ಲಿ ಇಳಿದುಕೊಂಡರು.


ಆಗ ಇಸ್ರಾಯೇಲರಲ್ಲಿ ಮಕ್ಕಳಲ್ಲದೆ ಗಂಡಸರು ಮಾತ್ರ ಆರು ಲಕ್ಷ ಜನರು ಕಾಲುನಡಿಗೆಯಾಗಿ ರಮ್ಸೇಸನ್ನು ಬಿಟ್ಟು ಸುಕ್ಕೋತಿಗೆ ಪ್ರಯಾಣಮಾಡಿದರು.


ಹೀಗೆ ಏಸಾವನು ಆ ದಿನವೇ ತನ್ನ ಮಾರ್ಗವಾಗಿ ಸೇಯೀರಿಗೆ ಹಿಂದಿರುಗಿ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು