Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 33:5 - ಕನ್ನಡ ಸಮಕಾಲಿಕ ಅನುವಾದ

5 ಆಗ ಏಸಾವನು ತನ್ನ ದೃಷ್ಟಿ ಹರಿಸಿ, ಆ ಸ್ತ್ರೀಯರನ್ನೂ, ಮಕ್ಕಳನ್ನೂ ನೋಡಿ, “ನಿನ್ನ ಜೊತೆಯಲ್ಲಿರುವ ಇವರು ಯಾರು?” ಎಂದು ಕೇಳಿದನು. ಅದಕ್ಕವನು, “ದೇವರು ನಿನ್ನ ದಾಸನಿಗೆ ಕೃಪೆಯಿಂದ ಕೊಟ್ಟ ಮಕ್ಕಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ತರುವಾಯ ಏಸಾವನು ಕಣ್ಣೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ಕಂಡು, “ನಿನ್ನ ಜೊತೆಯಲ್ಲಿರುವ ಜನರು ಯಾರು?” ಎಂದು ಕೇಳಲು ಯಾಕೋಬನು ಅವನಿಗೆ, “ದೇವರು ನಿನ್ನ ಸೇವಕನಿಗೆ ಕೃಪೆಯಿಂದ ಅನುಗ್ರಹಿಸಿಕೊಟ್ಟ ಮಕ್ಕಳೇ ಇವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವರಿಬ್ಬರ ಕಣ್ಣಲ್ಲೂ ನೀರು ಹರಿಯಿತು. ಬಳಿಕ ಏಸಾವನು ಕಣ್ಣೆತ್ತಿ ಆ ಮಹಿಳೆಯರನ್ನೂ ಮಕ್ಕಳನ್ನೂ ನೋಡಿ, “ನಿನ್ನ ಜೊತೆಯಲ್ಲಿರುವ ಇವರು ಯಾರು?” ಎಂದು ವಿಚಾರಿಸಿದನು. ಯಕೋಬನು, “ದೇವರು ನಿಮ್ಮ ದಾಸನಾದ ನನಗೆ ಅನುಗ್ರಹಿಸಿದ ಮಕ್ಕಳು ಇವರೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ತರುವಾಯ ಏಸಾವನು ಕಣ್ಣೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ಕಂಡು - ನಿನ್ನ ಜೊತೆಯಲ್ಲಿರುವ ಇವರು ಯಾರೆಂದು ಕೇಳಲು ಯಾಕೋಬನು ಅವನಿಗೆ - ದೇವರು ನಿನ್ನ ಸೇವಕನಿಗೆ ಅನುಗ್ರಹಿಸಿಕೊಟ್ಟ ಮಕ್ಕಳೇ ಇವರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಏಸಾವನು ಸ್ತ್ರೀಯರನ್ನು ಮತ್ತು ಮಕ್ಕಳನ್ನು ಕಣ್ಣೆತ್ತಿ ನೋಡಿ, “ನಿನ್ನೊಡನೆ ಇರುವ ಈ ಜನರು ಯಾರು?” ಎಂದು ಕೇಳಿದನು. ಯಾಕೋಬನು, “ದೇವರು ನನಗೆ ಕೊಟ್ಟ ಮಕ್ಕಳೇ ಇವರು. ದೇವರು ನನಗೆ ಒಳ್ಳೆಯವನಾಗಿದ್ದನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 33:5
9 ತಿಳಿವುಗಳ ಹೋಲಿಕೆ  

ಮಕ್ಕಳು ಯೆಹೋವ ದೇವರು ಕೊಟ್ಟ ಸೊತ್ತು. ಗರ್ಭಫಲವು ದೇವರ ಬಹುಮಾನ.


ಇಗೋ, ನಾನೂ ಯೆಹೋವ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರ ಯೆಹೋವ ದೇವರಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ.


ಅದಕ್ಕೆ ಯೋಸೇಫನು ತನ್ನ ತಂದೆಗೆ, “ದೇವರು ಈ ಸ್ಥಳದಲ್ಲಿ ನನಗೆ ಕೊಟ್ಟ ನನ್ನ ಪುತ್ರರು,” ಎಂದನು. ಆಗ ಇಸ್ರಾಯೇಲನು, “ಅವರನ್ನು ನನ್ನ ಬಳಿಗೆ ಕರೆದುಕೊಂಡು ಬಾ. ನಾನು ಅವರನ್ನು ಆಶೀರ್ವದಿಸುತ್ತೇನೆ,” ಎಂದನು.


ಎಂದೂ ಪುನಃ, “ನಾನು ದೇವರ ಮೇಲೆ ಭರವಸೆ ಇಡುವೆನು.” ಎಂದೂ ಪುನಃ, “ಇಗೋ ನಾನೂ, ದೇವರು ನನಗೆ ದಯಪಾಲಿಸಿರುವ ಮಕ್ಕಳೂ ನನಗಿದ್ದಾರೆ.” ಎಂದು ಹೇಳಿದ್ದಾರೆ.


ಯೆಹೋವ ದೇವರು ನನಗೆ ಅನೇಕ ಪುತ್ರರನ್ನು ಕೊಟ್ಟಿರುವಾಗ, ನನ್ನ ಸಮಸ್ತ ಪುತ್ರರಲ್ಲಿ ಇಸ್ರಾಯೇಲಿನ ಮೇಲಿಗಾಗಿ, ಯೆಹೋವ ದೇವರ ರಾಜ್ಯದ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದಕ್ಕೆ ನನ್ನ ಮಗ ಸೊಲೊಮೋನನನ್ನು ಆದುಕೊಂಡರು.


ನಾನು ಯೆಹೋವ ದೇವರಿಗೆ ವಿಜ್ಞಾಪನೆ ಮಾಡಿದ್ದನ್ನು ಅವರು ನನಗೆ ಕೊಟ್ಟರು.


ಬೋವಜನು ರೂತಳನ್ನು ಮದುವೆಯಾದನು. ಅವಳು ಅವನಿಗೆ ಹೆಂಡತಿಯಾದಳು. ಅವನು ಅವಳೊಂದಿಗೆ ಬಾಳಿದಾಗ, ರೂತಳು ಯೆಹೋವ ದೇವರ ಅನುಗ್ರಹದಿಂದ ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆತ್ತಳು.


ಅದಕ್ಕೆ ಯಾಕೋಬನು ರಾಹೇಲಳ ಮೇಲೆ ಕೋಪಿಸಿಕೊಂಡು, “ನಿನಗೆ ಗರ್ಭ ಫಲವನ್ನು ಕೊಡುವ ದೇವರ ಸ್ಥಾನದಲ್ಲಿ ನಾನಿದ್ದೇನೋ?” ಎಂದನು.


ಆಗ ದಾಸಿಯರೂ, ಅವರ ಮಕ್ಕಳೂ ಹತ್ತಿರ ಬಂದು ಅವನಿಗೆ ಅಡ್ಡಬಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು