ಆದಿಕಾಂಡ 33:8 - ಕನ್ನಡ ಸಮಕಾಲಿಕ ಅನುವಾದ8 ಆಗ ಏಸಾವನು, “ನಾನು ದಾರಿಯಲ್ಲಿ ಕಂಡ ಪಶುಗಳ ಮಂದೆಗಳೆಲ್ಲಾ ಏತಕ್ಕೆ?” ಎಂದು ಕೇಳಿದನು. ಯಾಕೋಬನು, “ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ದಯೆ ದೊರಕುವುದಕ್ಕೋಸ್ಕರ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಏಸಾವನು, “ನಾನು ದಾರಿಯಲ್ಲಿ ಕಂಡ ಆ ಪಶುಗಳು ಯಾತಕ್ಕೆ?” ಎಂದು ಕೇಳಲು ಯಾಕೋಬನು, “ಸ್ವಾಮಿಯವರ ದಯೆ ನನಗೆ ದೊರಕಬೇಕೆಂದು ನಾನು ತಮಗೆ ಅವುಗಳನ್ನು ಕಳುಹಿಸಿಕೊಟ್ಟೆನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಏಸಾವನು, “ನಾನು ದಾರಿಯಲ್ಲಿ ಕಂಡ ಆ ಪರಿವಾರ ಏತಕ್ಕೆ?” ಎಂದು ಕೇಳಿದನು. ಯಕೋಬನು, “ಒಡೆಯನ ದಯೆ ನನಗೆ ದೊರಕಲೆಂದು ನಾನು ತಮಗೆ ಅದನ್ನು ಕಳಿಸಿಕೊಟ್ಟೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಏಸಾವನು - ನಾನು ದಾರಿಯಲ್ಲಿ ಕಂಡ ಆ ಪಶುಗಳ ಹಿಂಡುಗಳು ಯಾತಕ್ಕೆ ಎಂದು ಕೇಳಲು ಯಾಕೋಬನು - ಸ್ವಾವಿುಯವರ ದಯ ನನಗೆ ದೊರಕಬೇಕೆಂದು ನಾನು ತಮಗೆ ಕಳುಹಿಸಿಕೊಟ್ಟೆನು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಏಸಾವನು, “ನಾನು ಬರುತ್ತಿರುವಾಗ ಕಂಡ ಆ ಜನರೆಲ್ಲಾ ಯಾರು? ಆ ಪಶುಗಳೆಲ್ಲಾ ಯಾತಕ್ಕೆ?” ಎಂದು ಕೇಳಿದನು. ಯಾಕೋಬನು, “ನೀನು ನನ್ನನ್ನು ಸ್ವೀಕರಿಸಿಕೊಳ್ಳಲಿ ಎಂದು ಅವುಗಳನ್ನು ಉಡುಗೊರೆಗಳನ್ನಾಗಿ ಕಳುಹಿಸಿಕೊಟ್ಟೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |