ಆದಿಕಾಂಡ 34:21 - ಕನ್ನಡ ಸಮಕಾಲಿಕ ಅನುವಾದ21 “ಈ ಜನರು ನಮ್ಮ ಸಂಗಡ ಸಮಾಧಾನವಾಗಿದ್ದಾರೆ, ಆದ್ದರಿಂದ ಅವರು ದೇಶದಲ್ಲಿ ವಾಸಮಾಡಿ, ಅದರಲ್ಲಿ ವ್ಯಾಪಾರಮಾಡಲಿ. ದೇಶವು ಅವರಿಗಾಗಿ ಸಾಕಷ್ಟು ವಿಸ್ತಾರವಾಗಿದೆ. ಅವರ ಪುತ್ರಿಯರನ್ನು ನಮಗೆ ಹೆಂಡತಿಯರನ್ನಾಗಿ ಮಾಡಿಕೊಳ್ಳೋಣ ಮತ್ತು ನಮ್ಮ ಪುತ್ರಿಯರನ್ನು ಅವರಿಗೆ ಕೊಡೋಣ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 “ಈ ಜನರು ನಮ್ಮ ಸಂಗಡ ಸಮಾಧಾನವಾಗಿದ್ದಾರೆ, ಆದ್ದರಿಂದ ಅವರು ನಮ್ಮ ದೇಶದಲ್ಲೇ ವಾಸ ಮಾಡಿಕೊಂಡು ವ್ಯಾಪಾರ ಮಾಡಲಿ. ಈ ದೇಶವು ಅವರಿಗೂ ನಮಗೂ ಸಾಕಾಗುವಷ್ಟು ವಿಸ್ತಾರವಾಗಿದೆ. ನಾವು ಅವರ ಹೆಣ್ಣುಮಕ್ಕಳನ್ನು ಮದುವೆಮಾಡಿಕೊಳ್ಳೋಣ ನಮ್ಮ ಹೆಣ್ಣುಮಕ್ಕಳನ್ನು ಅವರಿಗೆ ಕೊಡೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 “ಈ ಜನರು ನಮ್ಮೊಡನೆ ಶಾಂತಿಸಮಾಧಾನದಿಂದಿದ್ದಾರೆ; ಇವರು ನಮ್ಮ ನಾಡಿನಲ್ಲೇ ವಾಸಮಾಡಿಕೊಂಡು ವ್ಯಾಪಾರಮಾಡಲಿ; ಈ ನಾಡು ಅವರಿಗೂ ನಮಗೂ ಸಾಕಾಗುವಷ್ಟು ವಿಸ್ತಾರವಾಗಿದೆ. ನಾವು ಅವರ ಹೆಣ್ಣು ಮಕ್ಕಳನ್ನು ಮದುವೆಮಾಡಿಕೊಳ್ಳೋಣ, ನಮ್ಮ ಹೆಣ್ಣು ಮಕ್ಕಳನ್ನು ಅವರಿಗೆ ಕೊಡೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆ ಜನರು ನಮ್ಮೊಡನೆ ಸಮಾಧಾನದಿಂದಿದ್ದಾರೆ; ಅವರು ನಮ್ಮ ದೇಶದಲ್ಲೇ ವಾಸಮಾಡಿಕೊಂಡು ವ್ಯಾಪಾರ ಮಾಡಲಿ; ಈ ದೇಶವು ಅವರಿಗೂ ನಮಗೂ ಸಾಕಾಗುವಷ್ಟು ವಿಸ್ತಾರವಾಗಿದೆಯಷ್ಟೆ; ನಾವು ಅವರ ಹೆಣ್ಣು ಮಕ್ಕಳನ್ನು ಮದುವೆ ಮಾಡಿಕೊಳ್ಳೋಣ, ನಮ್ಮ ಹೆಣ್ಣು ಮಕ್ಕಳನ್ನು ಅವರಿಗೆ ಕೊಡೋಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ಈ ಇಸ್ರೇಲರಿಗೆ ನಮ್ಮ ಸ್ನೇಹಿತರಾಗಿರಲು ಇಷ್ಟ; ಇವರು ನಮ್ಮ ದೇಶದಲ್ಲಿ ವಾಸವಾಗಿದ್ದುಕೊಂಡು ನಮ್ಮೊಂದಿಗೆ ಸಮಾಧಾನದಿಂದಿರುವುದು ನಮಗೂ ಇಷ್ಟ; ನಮ್ಮೆಲ್ಲರಿಗೂ ಬೇಕಾಗುವಷ್ಟು ಭೂಮಿ ನಮ್ಮಲ್ಲಿದೆ. ನಾವು ಅವರ ಸ್ತ್ರೀಯರನ್ನು ಮದುವೆಯಾಗವುದಕ್ಕೂ ನಮ್ಮ ಸ್ತ್ರೀಯರನ್ನು ಅವರಿಗೆ ಮದುವೆ ಮಾಡಿಕೊಡುವುದಕ್ಕೂ ಸಂತೋಷಪಡುತ್ತೇವೆ. ಅಧ್ಯಾಯವನ್ನು ನೋಡಿ |