Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 34:31 - ಕನ್ನಡ ಸಮಕಾಲಿಕ ಅನುವಾದ

31 ಆದರೆ ಅವರು, “ಅವನು ನಮ್ಮ ತಂಗಿಯನ್ನು ವೇಶ್ಯೆಯಂತೆ ನಡೆಸಬಹುದೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅದಕ್ಕೆ ಅವರು, “ನಮ್ಮ ತಂಗಿಯನ್ನು ವೇಶ್ಯೆಯಂತೆ ಉಪಯೋಗಿಸಿಕೊಂಡಿದ್ದು ಸರಿಯೇ” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅದಕ್ಕೆ ಅವರು, “ಅವನು ಮಾತ್ರ ನಮ್ಮ ತಂಗಿಯನ್ನು ಒಬ್ಬ ಬೀದಿಯ ಸೂಳೆಯಂತೆ ನಡೆಸಿಕೊಳ್ಳಬಹುದೋ?" ಎಂದು ಪ್ರಶ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅವರು - ನಮ್ಮ ತಂಗಿಯನ್ನು ಸೂಳೆಯಂತೆ ನಡಿಸಬಹುದೋ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆದರೆ ದೀನಳ ಅಣ್ಣಂದಿರು, “ನಮ್ಮ ತಂಗಿಯನ್ನು ಆ ಜನರು ಸೂಳೆಯಂತೆ ಉಪಯೋಗಿಸಿಕೊಳ್ಳಲು ನಾವು ಬಿಡಬೇಕೇ? ಇಲ್ಲ, ನಮ್ಮ ತಂಗಿಗೆ ಆ ಜನರು ಮಾಡಿದ್ದು ತಪ್ಪು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 34:31
6 ತಿಳಿವುಗಳ ಹೋಲಿಕೆ  

ಏಕೆಂದರೆ ಮತ್ಸರವು ಪತಿಯ ಕ್ರೋಧವನ್ನು ಉದ್ರೇಕಿಸುವುದು. ಆದ್ದರಿಂದ ಮುಯ್ಯಿ ತೀರಿಸುವಾಗ ಅವನು ಕರುಣೆ ತೋರನು.


ಆಗ ಯಾಕೋಬನ ಮಕ್ಕಳು ಶೆಕೆಮನಿಗೂ, ಅವನ ತಂದೆ ಹಮೋರನಿಗೂ ವಂಚನೆಯ ಉತ್ತರವನ್ನು ಕೊಟ್ಟರು. ಏಕೆಂದರೆ ಅವನು ತಮ್ಮ ತಂಗಿ ದೀನಳನ್ನು ಕೆಡಿಸಿದ್ದನು.


ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದ್ದು, ಅದಕ್ಕೆ ಶಾಪಗ್ರಸ್ತವಾಗಲಿ. ಯಾಕೋಬನ ಕುಟುಂಬದಲ್ಲಿ ಅವರನ್ನು ವಿಭಾಗಿಸಿ ಇಸ್ರಾಯೇಲಿನಲ್ಲಿ ಅವರನ್ನು ಚದರಿಸಿಬಿಡುವೆನು.


ಆಗ ಯಾಕೋಬನು ಸಿಮೆಯೋನನಿಗೂ, ಲೇವಿಗೂ, “ನೀವು ನನ್ನನ್ನು ಈ ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ಅಸಹ್ಯವಾಗುವಂತೆ ಮಾಡಿ, ನನ್ನನ್ನು ಕಳವಳಪಡಿಸಿದಿರಿ. ನಾವು ಸ್ವಲ್ಪ ಜನರು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ದಾಳಿಮಾಡುವರು. ಆಗ ನಾನೂ, ನನ್ನ ಮನೆಯವರೂ ನಾಶವಾಗುವೆವು,” ಎಂದನು.


ದೇವರು ಯಾಕೋಬನಿಗೆ, “ನೀನು ಇಲ್ಲಿಂದ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು, ನಿನ್ನ ಸಹೋದರ ಏಸಾವನ ಎದುರಿನಿಂದ ಓಡಿ ಹೋಗುತ್ತಿದ್ದಾಗ, ನಿನಗೆ ಕಾಣಿಸಿಕೊಂಡ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟು,” ಎಂದರು.


ಅವರು ತಮ್ಮ ಸಹೋದರಿಯನ್ನು ಕೆಡಿಸಿದ್ದರಿಂದ ಯಾಕೋಬನ ಮಕ್ಕಳು ಬಂದು ಆ ಊರನ್ನೇ ಕೊಳ್ಳೆಹೊಡೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು