ಆದಿಕಾಂಡ 35:14 - ಕನ್ನಡ ಸಮಕಾಲಿಕ ಅನುವಾದ14 ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ, ಆ ಸ್ಥಳದಲ್ಲಿ ಸ್ತಂಭವನ್ನು ಅಂದರೆ ಕಲ್ಲಿನ ಸ್ತಂಭವನ್ನು ನಿಲ್ಲಿಸಿ, ಪಾನಾರ್ಪಣೆ ಮಾಡಿ, ಅದರ ಮೇಲೆ ಎಣ್ಣೆಯನ್ನು ಹೊಯ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ ಸ್ಥಳದಲ್ಲಿ ಕಲ್ಲಿನ ಸ್ತಂಭವನ್ನು ನಿಲ್ಲಿಸಿ ಅದರ ಮೇಲೆ ಪಾನಕಾಭಿಷೇಕಮಾಡಿ ಎಣ್ಣೆಯನ್ನು ಹೊಯ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಯಕೋಬನು ತನ್ನೊಡನೆ ದೇವರು ಮಾತನಾಡಿದ ಆ ಸ್ಥಳದಲ್ಲಿ ಕಲ್ಲಿನ ಸ್ತಂಭವೊಂದನ್ನು ನಿಲ್ಲಿಸಿ, ಅದರ ಮೇಲೆ ಪಾನಕಾ ಅಭಿಷೇಕಮಾಡಿ, ಎಣ್ಣೆಹೊಯ್ದು ಅಭ್ಯಂಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯಾಕೋಬನು ತನ್ನ ಸಂಗಡ ದೇವರು ಮಾತಾಡಿದ ಸ್ಥಳದಲ್ಲಿ ಕಲ್ಲಿನ ಕಂಬವನ್ನು ನಿಲ್ಲಿಸಿ ಅದರ ಮೇಲೆ ಪಾನಕಾಭಿಷೇಕಮಾಡಿ ಎಣ್ಣೇ ಹೊಯಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14-15 ಯಾಕೋಬನು ಈ ಸ್ಥಳದಲ್ಲಿ ಜ್ಞಾಪಕಾರ್ಥವಾಗಿ ಒಂದು ಸ್ಮಾರಕಕಲ್ಲನ್ನು ನಿಲ್ಲಿಸಿ ಅದರ ಮೇಲೆ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಸುರಿದನು. ಇದು ಒಂದು ವಿಶೇಷವಾದ ಸ್ಥಳ. ಯಾಕೆಂದರೆ ಅಲ್ಲಿ ದೇವರು ಯಾಕೋಬನೊಂದಿಗೆ ಮಾತಾಡಿದನು. ಯಾಕೋಬನು ಆ ಸ್ಥಳಕ್ಕೆ “ಬೇತೇಲ್” ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿ |