Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 35:23 - ಕನ್ನಡ ಸಮಕಾಲಿಕ ಅನುವಾದ

23 ಅವರಲ್ಲಿ ಲೇಯಳ ಪುತ್ರರು: ಯಾಕೋಬನ ಚೊಚ್ಚಲ ಮಗ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್ ಮತ್ತು ಜೆಬುಲೂನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯಾಕೋಬನಿಗೆ ಲೇಯಳಲ್ಲಿ ಹುಟ್ಟಿದವರು ಯಾರೆಂದರೆ: ಯಾಕೋಬನ ಚೊಚ್ಚಲ ಮಗನಾದ ರೂಬೇನ್ ಮತ್ತು ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಯಕೋಬನ ಹನ್ನೆರಡು ಗಂಡು ಮಕ್ಕಳ ಹೆಸರು ಇವು: ಯಕೋಬನ ಚೊಚ್ಚಲಮಗ ರೂಬೇನ್, ಸಿಮೆಯೋನ್, ಲೇವಿ, ಯೆಹೂದಾ, ಇಸ್ಸಾಕಾರ್, ಜೆಬುಲೂನ್ - ಇವರು ಲೇಯಳಲ್ಲಿ ಹುಟ್ಟಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವರು ಯಾರಾರಂದರೆ - ಯಾಕೋಬನ ಚೊಚ್ಚಲಮಗನಾದ ರೂಬೇನ್; ಆಮೇಲೆ ಸಿಮೆಯೋನ್, ಲೇವಿ, ಯೆಹೂದಾ, ಇಸ್ಸಾಕಾರ್, ಜೆಬುಲೂನ್; ಇವರು ಲೇಯಳಲ್ಲಿ ಹುಟ್ಟಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಲೇಯಳ ಗಂಡುಮಕ್ಕಳು: ಯಾಕೋಬನ ಚೊಚ್ಚಲ ಮಗನಾದ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್ ಮತ್ತು ಜೆಬುಲೂನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 35:23
33 ತಿಳಿವುಗಳ ಹೋಲಿಕೆ  

ದಾಸಿಯರನ್ನೂ, ಅವರ ಮಕ್ಕಳನ್ನೂ ಮುಂದುಗಡೆಯಲ್ಲಿಯೂ; ಅವರ ಹಿಂದೆ ಲೇಯಳನ್ನೂ, ಆಕೆಯ ಮಕ್ಕಳನ್ನೂ; ಕಟ್ಟಕಡೆಯಲ್ಲಿ ರಾಹೇಲಳನ್ನೂ, ಯೋಸೇಫನನ್ನೂ ಇರಿಸಿದನು.


ಆಮೇಲೆ ದೇವರು ಅಬ್ರಹಾಮನಿಗೆ ಸುನ್ನತಿಯ ಒಡಂಬಡಿಕೆಯನ್ನೂ ಕೊಟ್ಟರು. ಅಬ್ರಹಾಮನಿಗೆ ಇಸಾಕನು ಜನಿಸಿದನು. ಇಸಾಕನು ಜನಿಸಿದ ಎಂಟನೆಯ ದಿನ ಅಬ್ರಹಾಮನು ಇಸಾಕನಿಗೆ ಸುನ್ನತಿ ಮಾಡಿಸಿದನು. ಅನಂತರ ಇಸಾಕನಿಗೆ ಯಾಕೋಬನು ಜನಿಸಿದನು. ಯಾಕೋಬನು ನಮ್ಮ ಹನ್ನೆರಡು ಮಂದಿ ಪಿತೃಗಳಿಗೆ ತಂದೆಯಾದನು.


ಲೇಯಳು ತಾತ್ಸಾರಕ್ಕೆ ತುತ್ತಾಗುವಳೆಂದು ಯೆಹೋವ ದೇವರು ಕಂಡು, ಅವಳು ಗರ್ಭಿಣಿಯಾಗುವಂತೆ ಅನುಗ್ರಹಮಾಡಿದರು. ಆದರೆ ರಾಹೇಲಳು ಬಂಜೆಯಾಗಿದ್ದಳು.


ಯಾಕೋಬನೊಂದಿಗೆ ಈಜಿಪ್ಟಿಗೆ ತಮ್ಮ ತಮ್ಮ ಮನೆಯವರ ಸಂಗಡ ಬಂದ ಇಸ್ರಾಯೇಲನ ಮಕ್ಕಳ ಹೆಸರುಗಳು:


ಲಾಬಾನನಿಗೆ ಇಬ್ಬರು ಪುತ್ರಿಯರಿದ್ದರು. ದೊಡ್ಡವಳ ಹೆಸರು ಲೇಯಳು, ಚಿಕ್ಕವಳ ಹೆಸರು ರಾಹೇಲಳು.


“ರೂಬೇನನೇ, ನೀನು ನನ್ನ ಜೇಷ್ಠಪುತ್ರನು. ನನ್ನ ಶಕ್ತಿ, ನನ್ನ ಬಲದ ಸಂಕೇತವೂ, ಗೌರವದಲ್ಲಿ ಶಕ್ತಿಯಲ್ಲಿ ಮಿತಿಮೀರಿದವನೂ ಆಗಿರುವೆ.


“ನಿಮಗೆ ಸಹಾಯ ಮಾಡಬೇಕಾದ ಪುರುಷರ ಹೆಸರುಗಳು: “ರೂಬೇನ್ ಗೋತ್ರದಿಂದ ಶೆದೇಯೂರನ ಮಗ ಎಲೀಚೂರ್,


ಇಸ್ರಾಯೇಲಿನ ಚೊಚ್ಚಲ ಮಗ ರೂಬೇನನ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.


ದೇವದರ್ಶನ ಗುಡಾರದ ಪೂರ್ವದಿಕ್ಕಿನಲ್ಲಿ, ಸೂರ್ಯೋದಯದ ಕಡೆಗೆ ಯೆಹೂದ ದಂಡಿನ ಧ್ವಜದ ಬಳಿಯಲ್ಲಿ ತಮ್ಮ ಸೈನ್ಯಗಳ ಪ್ರಕಾರ ಇಳಿದುಕೊಳ್ಳಬೇಕು. ಯೆಹೂದ ಮಕ್ಕಳಿಗೆ ಅಮ್ಮೀನಾದಾಬನ ಮಗ ನಹಶೋನನು ಸೈನ್ಯಾಧಿಪತಿ.


ಮೊದಲನೆಯ ದಿವಸದಲ್ಲಿ ತನ್ನ ಕಾಣಿಕೆಯನ್ನು ಅರ್ಪಿಸಿದವನು ಯೆಹೂದ ಗೋತ್ರದ ಅಮ್ಮೀನಾದಾಬನ ಮಗ ನಹಶೋನನು.


ಯೆಹೂದನ ಪಾಳೆಯದ ಧ್ವಜವು ಅದರ ಸೈನ್ಯಗಳ ಪ್ರಕಾರ ಮೊದಲು ಹೊರಟಿತು. ಅವರ ಸೈನ್ಯದ ಮೇಲೆ ಅಮ್ಮೀನಾದಾಬನ ಮಗ ನಹಶೋನನು ಇದ್ದನು.


ಅವರ ಹೆಸರುಗಳು ಯಾವುವೆಂದರೆ: ರೂಬೇನನ ಗೋತ್ರದ ಜಕ್ಕೂರನ ಮಗ ಶಮ್ಮೂವ,


ಇಸ್ರಾಯೇಲನ ಚೊಚ್ಚಲ ಮಗ ರೂಬೇನನೂ, ರೂಬೇನನ ಮಕ್ಕಳೂ; ಹನೋಕನೂ, ಇವನಿಂದ ಹನೋಕ್ಯರ ಕುಟುಂಬ; ಪಲ್ಲೂವಿನಿಂದ ಪಲ್ಲೂವಿಯರ ಕುಟುಂಬ;


“ಈ ಜನರ ಹೆಸರುಗಳು ಇವೇ. “ಯೆಹೂದನ ಕುಟುಂಬದಿಂದ ಯೆಫುನ್ನೆಯ ಮಗ ಕಾಲೇಬನೂ,


ಇದಲ್ಲದೆ ಮೋಶೆ ಅದೇ ದಿನದಲ್ಲಿ ಜನರಿಗೆ ಆಜ್ಞಾಪಿಸಿದ್ದೇನೆಂದರೆ:


“ರೂಬೇನನು ಸಾಯದೆ ಬದುಕಲಿ. ಅವನ ಜನರು ಕಡಿಮೆಯಾಗದಿರಲಿ.”


ಮೋಶೆಯು ರೂಬೇನನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಕೊಟ್ಟ ಸೊತ್ತು ಇವು:


ಯೆಹೂದ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ವಿಭಾಗಿಸಿದ ಮೇರೆ ಯಾವುದೆಂದರೆ: ಕಟ್ಟಕಡೆಗಿರುವ ದಕ್ಷಿಣ ಕಡೆಗೆ ಎದೋಮಿನ ಮೇರೆಯಾದ ಚಿನ್ ಮರುಭೂಮಿಯ ದಕ್ಷಿಣ ಭಾಗ.


ಎರಡನೆಯ ಚೀಟು ಬಿದ್ದ ಭಾಗವು ಸಿಮೆಯೋನನ ಗೋತ್ರದವರದಾಗಿತ್ತು. ಸಿಮೆಯೋನನ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ದೊರೆಯಿತು. ಅವರ ಸೊತ್ತು ಯೆಹೂದ ಗೋತ್ರದ ಸೊತ್ತಿನ ಮಧ್ಯದಲ್ಲಿತ್ತು.


ಮೂರನೆಯ ಚೀಟು ಬಿದ್ದ ಭಾಗ ಜೆಬುಲೂನನ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ಬಿದ್ದಿತು. ಅವರ ಬಾಧ್ಯತೆಯ ಮೇರೆ ಸಾರೀದ್ ವರೆಗೂ ಇತ್ತು.


ನಾಲ್ಕನೆಯ ಚೀಟು ಇಸ್ಸಾಕಾರನ ಸಂತತಿಯವರಿಗೆ ಬಿದ್ದಿತು.


ಅಮಾಲೇಕ್ಯರಿಗೆ ವಿರೋಧ ಮಾಡಿದವರ ಬೇರು ಎಫ್ರಾಯೀಮಿನಿಂದ ಉಂಟಾಯಿತು. ನಿನ್ನ ಹಿಂದೆ ನಿನ್ನ ಜನರಲ್ಲಿ ಬೆನ್ಯಾಮೀನನು ಮಾಕೀರನಲ್ಲಿಂದ ಅಧಿಪತಿಗಳೂ, ಜೆಬುಲೂನನಲ್ಲಿಂದ ಬರಹಗಾರನ ಲೇಖನಿಯನ್ನು ಉಪಯೋಗಿಸುವವರೂ ಬಂದರು.


ಇಸ್ಸಾಕಾರನ ಪ್ರಧಾನರು ದೆಬೋರಳ ಸಂಗಡ ಇದ್ದರು. ಹೌದು, ಇಸ್ಸಾಕಾರನ ಗೋತ್ರದವರು ಬಾರಾಕನ ಹಿಂದೆ ಅವನ ಕಟ್ಟಳೆಯ ಪ್ರಕಾರ, ಕಾಲುನಡಿಗೆಯಾಗಿ ಕಣಿವೆಯಲ್ಲಿ ನಡೆದರು. ರೂಬೇನನ ಕಡೆಯವರು ತಮ್ಮ ಹೃದಯಗಳನ್ನು ಮಹಾ ಪರಿಶೋಧನೆ ಮಾಡಿಕೊಂಡರು.


ಜೆಬುಲೂನ್ಯರು ತಮ್ಮ ಪ್ರಾಣಗಳನ್ನು ಧೈರ್ಯವಾಗಿ ಕೊಡುವ ಜನರಾಗಿದ್ದರು. ನಫ್ತಾಲಿಯೂ ಸಹ ಹೊಲದ ಎತ್ತರವಾದ ಸ್ಥಳಗಳಲ್ಲಿ ತಮ್ಮ ಪ್ರಾಣಗಳನ್ನು ಧೈರ್ಯವಾಗಿ ಕೊಡುವ ಜನರಾಗಿದ್ದರು.


ಆಗ ಊರುಬಾಗಿಲಲ್ಲಿ ಕೂಡಿದ್ದ ಸಮಸ್ತ ಜನರೂ ಹಿರಿಯರೂ, “ನಾವು ಸಾಕ್ಷಿಗಳೇ, ನಿನ್ನ ಮನೆಯಲ್ಲಿ ಬಂದ ಸ್ತ್ರೀಯನ್ನು ಯೆಹೋವ ದೇವರು ಇಸ್ರಾಯೇಲ್ ಮನೆಯನ್ನು ಕಟ್ಟಿದ ಇಬ್ಬರಾದ ರಾಹೇಲಳ ಹಾಗೆಯೂ ಲೇಯಳ ಹಾಗೆಯೂ ಮಾಡಲಿ. ಎಫ್ರಾತದಲ್ಲಿ ಧನವಂತನಾಗಿರು, ಬೇತ್ಲೆಹೇಮಿನಲ್ಲಿ ಘನವಂತನಾಗಿರು.


ಯುದ್ಧಕ್ಕೆ ಪರಾಕ್ರಮಶಾಲಿಗಳಾದ ಸಿಮೆಯೋನನ ಮಕ್ಕಳಲ್ಲಿ 7,100 ಮಂದಿ.


ಇಸ್ರಾಯೇಲಿನ ಗೋತ್ರಗಳ ಮೇಲೆ ಇರುವ ಅಧಿಕಾರಿಗಳು ಯಾರೆಂದರೆ: ರೂಬೇನ್ಯರ ಮೇಲೆ ನಾಯಕನು, ಜಿಕ್ರಿಯ ಮಗ ಎಲೀಯೆಜೆರನು. ಸಿಮೆಯೋನ್ಯರ ಮೇಲೆ ನಾಯಕನು, ಮಾಕನ ಮಗ ಶೆಫಟ್ಯನು.


“ಪಟ್ಟಣದ ಹೊರಗೆ ನಿರ್ಗಮನ ಹೀಗಿರಬೇಕು: “ಉತ್ತರದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಅಳತೆಗಳು.


ಸಿಮೆಯೋನ್ ಕುಲದಿಂದ 12,000, ಲೇವಿ ಕುಲದಿಂದ 12,000, ಇಸ್ಸಾಕರ್ ಕುಲದಿಂದ 12,000,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು