Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 35:26 - ಕನ್ನಡ ಸಮಕಾಲಿಕ ಅನುವಾದ

26 ಲೇಯಳ ದಾಸಿ ಜಿಲ್ಪಳ ಪುತ್ರರು: ಗಾದ್ ಮತ್ತು ಆಶೇರ್. ಇವರೇ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹುಟ್ಟಿದ ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಲೇಯಳ ದಾಸಿಯಾದ ಜಿಲ್ಪಳಲ್ಲಿ ಹುಟ್ಟಿದವರು: ಗಾದ್, ಆಶೇರ್. ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹುಟ್ಟಿದ ಮಕ್ಕಳು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಗಾದ್, ಆಶೇರ್ - ಇವರಿಬ್ಬರು ಲೇಯಳ ದಾಸಿ ಜಿಲ್ಪಳಲ್ಲಿ ಹುಟ್ಟಿದವರು. ಮೆಸಪೊಟೇಮಿಯಾದಲ್ಲಿ ಯಕೋಬನಿಗೆ ಹುಟ್ಟಿದ ಮಕ್ಕಳು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಗಾದ್, ಆಶೇರ್ ಇವರಿಬ್ಬರು ಲೇಯಳ ದಾಸಿಯಾದ ಜಿಲ್ಪಳಲ್ಲಿ ಹುಟ್ಟಿದವರು. ಪದ್ದನ್ಅರಾವಿುನಲ್ಲಿ ಯಾಕೋಬನಿಗೆ ಹುಟ್ಟಿದ ಮಕ್ಕಳು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಜಿಲ್ಪಳು ಲೇಯಳ ದಾಸಿ. ಜಿಲ್ಪಳ ಗಂಡುಮಕ್ಕಳು: ಗಾದ್ ಮತ್ತು ಆಶೇರ್. ಇವರೆಲ್ಲರು ಯಾಕೋಬನಿಗೆ ಪದ್ದನ್‌ಅರಾಮಿನಲ್ಲಿ ಹುಟ್ಟಿದ ಗಂಡುಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 35:26
10 ತಿಳಿವುಗಳ ಹೋಲಿಕೆ  

ಆದರೆ ರಾಹೇಲಳು ಸತ್ತುಹೋದಳು. ಅವಳು ಪ್ರಾಣಬಿಡುವಾಗ, ಮಗನಿಗೆ ಬೆನೋನಿ ಎಂದು ಹೆಸರಿಟ್ಟಳು, ಆದರೆ ಅವನ ತಂದೆ ಅವನಿಗೆ ಬೆನ್ಯಾಮೀನ್ ಎಂದು ಹೆಸರಿಟ್ಟನು.


ತನ್ನ ಎಲ್ಲಾ ಪಶುಗಳನ್ನೂ, ತಾನು ಸಂಪಾದಿಸಿದ ಎಲ್ಲಾ ಸಂಪತ್ತನ್ನೂ, ಪದ್ದನ್ ಅರಾಮಿನಲ್ಲಿ ತಾನು ಸಂಪಾದಿಸಿದ ಪಶುಗಳನ್ನೂ ಕಾನಾನ್ ದೇಶದಲ್ಲಿದ್ದ ತನ್ನ ತಂದೆ ಇಸಾಕನ ಬಳಿಗೆ ತೆಗೆದುಕೊಂಡು ಹೊರಟನು.


ಇಸಾಕನು ನಲವತ್ತು ವರ್ಷದವನಾಗಿದ್ದಾಗ ಪದ್ದನ್ ಅರಾಮಿನಿಂದ ಅರಾಮ್ಯನಾದ ಬೆತೂಯೇಲನ ಮಗಳೂ, ಲಾಬಾನನ ಸಹೋದರಿಯೂ ಆದ ರೆಬೆಕ್ಕಳನ್ನು ಹೆಂಡತಿಯಾಗಿ ತೆಗೆದುಕೊಂಡನು.


ಕೂಡಲೇ ನಿನ್ನ ತಾಯಿಯ ತಂದೆ ಬೆತೂಯೇಲನು ಇರುವ ಪದ್ದನ್ ಅರಾಮಿಗೆ ಹೋಗು. ನಿನ್ನ ತಾಯಿಯ ಸಹೋದರ ಲಾಬಾನನ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಹೆಂಡತಿಯನ್ನಾಗಿ ಮಾಡಿಕೋ.


ಇದು ಯಾಕೋಬನ ವಂಶದವರ ಚರಿತ್ರೆ: ಯೋಸೇಫನು ಹದಿನೇಳು ವರ್ಷದವನಾಗಿದ್ದಾಗ, ತನ್ನ ಸಹೋದರರ ಸಂಗಡ ಅಂದರೆ, ತನ್ನ ತಂದೆಯ ಹೆಂಡತಿಯರಾಗಿದ್ದ ಬಿಲ್ಹಳ ಮತ್ತು ಜಿಲ್ಪಳ ಮಕ್ಕಳ ಸಂಗಡ ಕುರಿಮಂದೆಗಳನ್ನು ಕಾಯುತ್ತಿದ್ದನು. ಯೋಸೇಫನು ಅವರ ಕೆಟ್ಟತನದ ಸುದ್ದಿಯನ್ನು ತನ್ನ ತಂದೆಗೆ ತಿಳಿಸುತ್ತಿದ್ದನು.


ಇದಲ್ಲದೆ ಲಾಬಾನನು ತನ್ನ ದಾಸಿಯಾದ ಜಿಲ್ಪಳನ್ನು, ತನ್ನ ಮಗಳಾದ ಲೇಯಳಿಗೆ ದಾಸಿಯಾಗಿ ಕೊಟ್ಟನು.


ಮೋಶೆಯು ಗಾದನ ಗೋತ್ರಗಳಿಗೆ ಅವರ ಕುಟುಂಬಗಳ ಪ್ರಕಾರ ಕೊಟ್ಟ ಸೊತ್ತು ಇವು:


ಚೀಟು ಬಿದ್ದ ಐದನೆಯ ಭಾಗವು ಆಶೇರನ ಗೋತ್ರಕ್ಕೆ ಅವರ ಕುಟುಂಬದ ಪ್ರಕಾರ ದೊರೆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು