ಆದಿಕಾಂಡ 35:5 - ಕನ್ನಡ ಸಮಕಾಲಿಕ ಅನುವಾದ5 ತರುವಾಯ ಅವರು ಮುಂದೆ ಪ್ರಯಾಣಮಾಡಿದರು. ಆಗ ಸುತ್ತಲಿರುವ ಪಟ್ಟಣಗಳವರ ಮೇಲೆ ದೇವರ ಭಯವು ಇದ್ದುದರಿಂದ, ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಮೇಲೆ ಅವರು ಪ್ರಯಾಣ ಮಾಡುತ್ತಿರುವಾಗ, ಸುತ್ತಲಿರುವ ಊರುಗಳಲ್ಲಿ ದೇವರ ಭಯವು ಇದ್ದುದರಿಂದ ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅವರು ಪ್ರಯಾಣಮಾಡುತ್ತಿದ್ದಾಗ ದೇವರು ಸುತ್ತಮುತ್ತಣದ ಊರಿನವರಲ್ಲಿ ಭಯ ಹುಟ್ಟಿಸಿದರು. ಇದರಿಂದಾಗಿ ಆ ಊರಿವನರಾರೂ ಯಕೋಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಮೇಲೆ ಅವರು ಪ್ರಯಾಣ ಮಾಡುತ್ತಿರುವಾಗ ದೇವರು ಹುಟ್ಟಿಸಿದ ಭಯವು ಸುತ್ತುಮುತ್ತಣ ಊರುಗಳಲ್ಲಿ ಇದ್ದದರಿಂದ ಆ ಊರುಗಳವರು ಯಾಕೋಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯಾಕೋಬನು ಮತ್ತು ಅವನ ಗಂಡುಮಕ್ಕಳು ಆ ಸ್ಥಳದಿಂದ ಹೊರಟರು. ಆ ಪ್ರದೇಶದಲ್ಲಿದ್ದ ಜನರು ಅವರನ್ನು ಹಿಂಬಾಲಿಸಿ ಕೊಲ್ಲಬೇಕೆಂದಿದ್ದರು. ಆದರೆ ಅವರು ಭಯಪಟ್ಟು ಯಾಕೋಬನನ್ನು ಹಿಂಬಾಲಿಸಲಿಲ್ಲ. ಅಧ್ಯಾಯವನ್ನು ನೋಡಿ |