Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 35:6 - ಕನ್ನಡ ಸಮಕಾಲಿಕ ಅನುವಾದ

6 ಹೀಗೆ ಯಾಕೋಬನು ತನ್ನ ಸಂಗಡ ಇದ್ದ ಎಲ್ಲಾ ಜನರಸಹಿತವಾಗಿ ಕಾನಾನ್ ದೇಶದಲ್ಲಿರುವ ಬೇತೇಲ್ ಎಂಬ ಲೂಜಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹೀಗೆ ಯಾಕೋಬನೂ ಅವನ ಸಂಗಡ ಇದ್ದ ಜನರೆಲ್ಲರೂ ಕಾನಾನ್ ದೇಶದಲ್ಲಿರುವ ಬೇತೇಲ್ ಎಂಬ ಲೂಜಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಯಕೋಬನೂ ಅವನ ಸಂಗಡವಿದ್ದ ಜನರೆಲ್ಲರೂ ಕಾನಾನ್ ನಾಡಿನಲ್ಲಿದ್ದ ಬೇತೇಲೆಂಬ ಊರಿಗೆ ಬಂದು ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯಾಕೋಬನೂ ಅವನ ಸಂಗಡ ಇದ್ದ ಜನರೆಲ್ಲರೂ ಕಾನಾನ್‍ದೇಶದಲ್ಲಿರುವ ಬೇತೇಲೆಂಬ ಲೂಜಿಗೆ ಮುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯಾಕೋಬನು ಮತ್ತು ಅವರ ಜನರು ಲೂಜಿಗೆ ಹೋದರು. ಈಗ ಲೂಜನ್ನು “ಬೇತೇಲ್” ಎಂದು ಕರೆಯುತ್ತಾರೆ. ಅದು ಕಾನಾನ್ ದೇಶದಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 35:6
7 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ಆ ಸ್ಥಳಕ್ಕೆ, ಬೇತೇಲ್, ಎಂದು ಹೆಸರಿಟ್ಟನು. ಅದಕ್ಕಿಂತ ಮೊದಲು ಆ ಸ್ಥಳಕ್ಕೆ, ಲೂಜ್ ಎಂದು ಹೆಸರಿತ್ತು.


ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವುದು. ಆಗ ದೇವರು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ದೇವರಿಗೆ ನಾನು ಖಂಡಿತವಾಗಿ ಕೊಡುವೆನು,” ಎಂದನು.


ಅಲ್ಲಿಂದ ಅವರು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ, ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರೂ ಇರುವ ಹಾಗೆ ತನ್ನ ಗುಡಾರವನ್ನು ಹಾಕಿಕೊಂಡನು. ಅಲ್ಲಿ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿ, ಯೆಹೋವ ದೇವರ ಹೆಸರನ್ನು ಆರಾಧಿಸಿದನು.


ಆಗ ಯಾಕೋಬನು ಯೋಸೇಫನಿಗೆ, “ಸರ್ವಶಕ್ತ ದೇವರು ಕಾನಾನ್ ದೇಶದ ಲೂಜ್ ಎಂಬಲ್ಲಿ ನನಗೆ ಕಾಣಿಸಿಕೊಂಡು, ನನ್ನನ್ನು ಆಶೀರ್ವದಿಸಿದರು.


ಅವನು ಪ್ರತಿವರ್ಷ ಹೊರಟು ಬೇತೇಲನ್ನೂ, ಗಿಲ್ಗಾಲನ್ನೂ, ಮಿಚ್ಪೆಯನ್ನೂ ಸುತ್ತಿಕೊಂಡು ಹೋಗಿ ಆ ಸ್ಥಳಗಳಲ್ಲೆಲ್ಲಾ ಇಸ್ರಾಯೇಲರಿಗೆ ನ್ಯಾಯತೀರಿಸಿದನು.


ಇಗೋ, ನಾನು ನಿನ್ನ ಸಂಗಡ ಇದ್ದು, ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಈ ದೇಶಕ್ಕೆ ನಿನ್ನನ್ನು ತಿರುಗಿ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವವರೆಗೆ ನಿನ್ನನ್ನು ಬಿಡುವುದಿಲ್ಲ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು