ಆದಿಕಾಂಡ 35:8 - ಕನ್ನಡ ಸಮಕಾಲಿಕ ಅನುವಾದ8 ಆಗ ರೆಬೆಕ್ಕಳ ದಾದಿಯಾಗಿದ್ದ ದೆಬೋರಳು ಮರಣಹೊಂದಿದಳು. ಬೇತೇಲಿನ ಕೆಳಗಿದ್ದ ಏಲಾ ಮರದ ಬುಡದಲ್ಲಿ ಆಕೆಯನ್ನು ಹೂಳಿಟ್ಟರು. ಆ ಸ್ಥಳಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅಲ್ಲಿ ರೆಬೆಕ್ಕಳ ದಾಸಿಯಾದ ದೆಬೋರಳು ಸತ್ತು ಹೋದಾಗ, ಅವರು ಆಕೆಯನ್ನು ಬೇತೇಲಿನ ತಗ್ಗಿನಲ್ಲಿರುವ ಅಲ್ಲೋನ್ ಮರದ ಬುಡದಲ್ಲಿ ಸಮಾಧಿಮಾಡಿದರು. ಆ ಸ್ಥಳಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅಲ್ಲಿರುವಾಗ ರೆಬೆಕ್ಕಳ ದಾದಿ ದೆಬೋರಳು ಸತ್ತುಹೋದಳು. ಆಕೆಯನ್ನು ಬೇತೇಲಿನ ಕಣಿವೆಯಲ್ಲಿರುವ ಮತ್ತೊಂದು ಓಕ್ ಮರದ ಬುಡದಲ್ಲಿ ಸಮಾಧಿಮಾಡಿ ಅದಕ್ಕೆ ‘ಅಲ್ಲೋನ್ ಬಾಕೂತ್’ ಎಂದು ಹೆಸರಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅಲ್ಲಿ ರೆಬೆಕ್ಕಳ ದಾದಿಯಾದ ದೆಬೋರಳು ಸತ್ತುಹೋಗಲು ಅವರು ಆಕೆಗೆ ಬೇತೇಲಿನ ತಗ್ಗಿನಲಿರುವ ಅಲ್ಲೋನ್ ಮರದ ಬುಡದಲ್ಲಿ ಸಮಾಧಿಮಾಡಿ ಅದಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ರೆಬೆಕ್ಕಳ ದಾಸಿಯಾದ ದೆಬೋರಳು ಅಲ್ಲಿ ಸತ್ತುಹೋದಳು. ಆದ್ದರಿಂದ ಅವರು ಆಕೆಯನ್ನು ಬೇತೇಲಿನ ಬಳಿಯಲ್ಲಿರುವ ಏಲಾವೃಕ್ಷದ ಬುಡದಲ್ಲಿ ಸಮಾಧಿ ಮಾಡಿದರು. ಆ ಸ್ಥಳಕ್ಕೆ “ಅಲ್ಲೋನ್ ಬಾಕೂತ್” ಎಂದು ಹೆಸರಿಟ್ಟರು. ಅಧ್ಯಾಯವನ್ನು ನೋಡಿ |