Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 36:15 - ಕನ್ನಡ ಸಮಕಾಲಿಕ ಅನುವಾದ

15 ಏಸಾವನ ಪುತ್ರರ ಮುಖಂಡರು ಯಾರೆಂದರೆ: ಏಸಾವನ ಚೊಚ್ಚಲ ಮಗನಾಗಿರುವ ಎಲೀಫಜನ ಮಕ್ಕಳಾದ ತೇಮಾನ್, ಓಮಾರ್, ಚೆಫೋ, ಕೆನಜ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಏಸಾವನ ಪುತ್ರರ ಮುಖಂಡರು ಯಾರೆಂದರೆ: ಏಸಾವನ ಚೊಚ್ಚಲ ಮಗನಾದ ಎಲೀಫಜನಿಂದ ಹುಟ್ಟಿದವರು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಕೆನೆಜ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಏಸಾವನ ವಂಶದ ಕುಲನಾಯಕರು: ಏಸಾವನ ಜೇಷ್ಠಪುತ್ರನಾದ ಎಲೀಫಜನಿಂದ ತೇಮಾನ, ಏಮಾರ, ಚೆಫೋ, ಕೆನೆಜ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಏಸಾವನ ವಂಶಸ್ಥರ ಕುಲಪತಿಗಳು. ಏಸಾವನ ಚೊಚ್ಚಲಮಗನಾದ ಎಲೀಫಜನಿಂದ ಹುಟ್ಟಿದವರು ಯಾರಂದರೆ - ತೇಮಾನ ಕುಲಪತಿ, ಓಮಾರಕುಲಪತಿ, ಚೆಫೋಕುಲಪತಿ, ಕೆನಜ್‍ಕುಲಪತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಏಸಾವನ ವಂಶಸ್ಥರ ಕುಲಪತಿಗಳು: ಏಸಾವನ ಮೊದಲನೆ ಮಗನಾದ ಎಲೀಫಜ. ಎಲೀಫಜನಿಂದ ಬಂದವರು: ತೇಮಾನ್, ಓಮಾರ್, ಚೆಫೋ, ಕೆನೆಜ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 36:15
19 ತಿಳಿವುಗಳ ಹೋಲಿಕೆ  

ಸರ್ವರು ಸಂಹಾರದಿಂದ ಏಸಾವನ ಬೆಟ್ಟದೊಳಗಿಂದ ನಾಶವಾಗುವ ಹಾಗೆ ತೇಮಾನೇ, ನಿನ್ನ ಪರಾಕ್ರಮಶಾಲಿಗಳು ಗಾಬರಿಪಡುವರು.


ಯೋಬನ ಮೂವರು ಸ್ನೇಹಿತರು, ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು ಅವನಿಗೆ ಬಂದ ಈ ಎಲ್ಲಾ ಕಷ್ಟನಷ್ಟವನ್ನು ಕುರಿತು ಕೇಳಿ, ಯೋಬನಿಗೆ ಸಂತಾಪವನ್ನು ತೋರ್ಪಡಿಸಿ ಅವನನ್ನು ಸಂತೈಸುವುದಕ್ಕೆ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡು, ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು.


ದೇವರು, ತೇಮಾನಿನಿಂದಲೂ; ಪರಿಶುದ್ಧರು, ಪಾರಾನ್ ಪರ್ವತದಿಂದಲೂ ಬಂದರು. ಅವರ ಮಹಿಮೆ ಆಕಾಶಗಳನ್ನು ಮುಚ್ಚಿತು. ಅವರ ಸ್ತೋತ್ರವು ಭೂಮಿಯನ್ನು ತುಂಬಿಸಿತು.


ಆದರೆ ನಾನು ತೇಮಾನಿನ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಬೊಚ್ರದ ಕೋಟೆಗಳನ್ನು ದಹಿಸಿಬಿಡುವುದು.”


ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಎದೋಮಿನ ವಿರುದ್ಧ ನನ್ನ ಕೈಯನ್ನು ಚಾಚುತ್ತೇನೆ: ಅದರೊಳಗಿನಿಂದ ಮನುಷ್ಯರನ್ನೂ ಮೃಗಗಳನ್ನೂ ಕಡಿದುಬಿಡುತ್ತೇನೆ. ಅದನ್ನು ಕಾಡನ್ನಾಗಿ ಮಾಡುತ್ತೇನೆ, ತೇಮಾನು ಮೊದಲುಗೊಂಡು ದೆದಾನಿಯವರು ಖಡ್ಗದಿಂದ ಬೀಳುವರು.


ಆದ್ದರಿಂದ ಯೆಹೋವ ದೇವರು ಎದೋಮಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ, ತೇಮಾನಿನ ನಿವಾಸಿಗಳಿಗೆ ವಿರೋಧವಾಗಿ ಮಾಡಿದ ಯೋಜನೆಗಳನ್ನೂ ಕೇಳಿರಿ. ಕಾಡುಮೃಗಗಳು ನಿಶ್ಚಯವಾಗಿ, ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವುವು. ಖಂಡಿತವಾಗಿ, ಹುಲ್ಲುಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.


ಎದೋಮ್ಯರನ್ನು ಕುರಿತದ್ದು: ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ. “ತೇಮಾನ್‌ನಲ್ಲಿ ಇನ್ನು ಮೇಲೆ ಜ್ಞಾನವಿರುವುದಿಲ್ಲವೋ? ವಿವೇಕಿಗಳಿಂದ ಆಲೋಚನೆಯು ನಾಶವಾಯಿತೋ? ಅವರ ಜ್ಞಾನವು ಕ್ಷೀಣಿಸಿದೆಯೇ?


ದುಷ್ಟರು ದೊಡ್ಡ ಅಧಿಕಾರದಲ್ಲಿರುವುದನ್ನು ನಾನು ಕಂಡೆನು; ಅವರು ಹಸಿರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದರು.


ಅವರೊಂದಿಗೆ ಅವರ ಸಂತಾನದವರು ಅವರ ಮುಂದೆ ಸುಸ್ಥಿರವಾಗುವುದನ್ನೂ, ಅವರ ಮಕ್ಕಳು ನೆಲೆಯಾಗಿರುವುದನ್ನೂ ನೋಡುವರು.


ತೇಮಾನ್ಯನಾದ ಎಲೀಫಜನು ಉತ್ತರಕೊಟ್ಟನು:


ಯೋಬಾಬನ ಮರಣದ ನಂತರ ಅವನ ಬದಲಾಗಿ ತೇಮಾನೀಯರ ದೇಶದ ಹುಷಾಮನು ಅರಸನಾದನು.


ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳುವರು; ಕಂಪನವು ಮೋವಾಬಿನ ಬಲಿಷ್ಠರನ್ನು ಹಿಡಿಯುವುದು; ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು.


ಏಸಾವನ ಹೆಂಡತಿ ಒಹೊಲೀಬಾಮಳ ಪುತ್ರರು ಯಾರೆಂದರೆ: ಯೆಯೂಷ್, ಯಳಾಮ್ ಮತ್ತು ಕೋರಹ ಇವರೇ. ಇವರು ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ್ದ ಒಹೊಲೀಬಾಮಳಿಂದ ಬಂದ ಮುಖಂಡರು.


ಆದಾಳು ಏಸಾವನಿಗೆ ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಯೂವೇಲನನ್ನು ಹೆತ್ತಳು.


ಏಸಾವನ ಹೆಂಡತಿಯಾಗಿದ್ದ ಸಿಬೆಯೋನನ ಮಗಳಾಗಿರುವ ಅನಾಹಳ ಮಗಳಾದ ಒಹೊಲೀಬಾಮಳ ಪುತ್ರರು ಯಾರೆಂದರೆ: ಆಕೆಯು ಏಸಾವನಿಗೆ ಯೆಯೂಷ್, ಯಳಾಮ್ ಹಾಗೂ ಕೋರಹ ಇವರನ್ನು ಹೆತ್ತಳು.


ಕೋರಹ, ಗತಾಮ್, ಅಮಾಲೇಕ್, ಎದೋಮ್ಯ ದೇಶದಲ್ಲಿದ್ದ ಎಲೀಫಜನಿಂದ ಬಂದ ಮುಖಂಡರು ಇವರೇ. ಇವರು ಆದಾ ಎಂಬಾಕೆಯ ಮೊಮ್ಮಕ್ಕಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು