Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 36:9 - ಕನ್ನಡ ಸಮಕಾಲಿಕ ಅನುವಾದ

9 ಸೇಯೀರ್ ಪರ್ವತದಲ್ಲಿರುವ ಎದೋಮ್ಯರ ತಂದೆ ಏಸಾವನ ವಂಶಾವಳಿಗಳು ಇವೇ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸೇಯೀರ್ ಬೆಟ್ಟದ ಸೀಮೆಯಲ್ಲಿದ್ದ ಎದೋಮ್ಯರ ಮೂಲಪುರುಷನಾದ ಏಸಾವನ ವಂಶದ ಚರಿತ್ರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸೇಯೀರ್ ಮಲೆನಾಡಿನಲ್ಲಿದ್ದ ಎದೋಮ್ಯರ ಮೂಲಪುರುಷನಾದ ಏಸಾವನ ವಂಶಾವಳಿ ಹೀಗಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಸೇಯೀರ್ ಬೆಟ್ಟದ ಸೀಮೆಯಲ್ಲಿದ್ದ ಎದೋಮ್ಯರ ಮೂಲಪುರುಷನಾದ ಏಸಾವನ ವಂಶಸ್ಥರ ಚರಿತ್ರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಏಸಾವನು ಎದೋಮ್ ಜನರ ತಂದೆ. ಸೇಯೀರ್ ದೇಶದಲ್ಲಿ ವಾಸವಾಗಿದ್ದ ಏಸಾವನ ಕುಟುಂಬದವರ ಹೆಸರುಗಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 36:9
10 ತಿಳಿವುಗಳ ಹೋಲಿಕೆ  

ಹಿರಿಯ ಮಗಳು ಮಗನನ್ನು ಹೆತ್ತು, ಅವನಿಗೆ ಮೋವಾಬ್ ಎಂದು ಹೆಸರಿಟ್ಟಳು. ಈಗಿನ ಮೋವಾಬ್ಯರಿಗೂ ಇವನೇ ತಂದೆ.


ಯಾಕೋಬನು ಎದೋಮ್ಯರ ದೇಶವಾದ ಸೇಯೀರನ ಸೀಮೆಯಲ್ಲಿರುವ ತನ್ನ ಅಣ್ಣನಾದ ಏಸಾವನ ಬಳಿಗೆ ದೂತರನ್ನು ತನ್ನ ಮುಂದಾಗಿ ಕಳುಹಿಸಿದನು.


ಹೀಗೆ ಎದೋಮನು ಎಂಬ ಏಸಾವನು ಸೇಯೀರ್ ಪರ್ವತದಲ್ಲಿ ವಾಸವಾಗಿದ್ದನು.


ಏಸಾವನ ಪುತ್ರರ ಹೆಸರುಗಳು ಯಾವುವೆಂದರೆ: ಏಸಾವನ ಹೆಂಡತಿಯಾಗಿರುವ ಆದಾ ಎಂಬಾಕೆಯ ಮಗನಾಗಿರುವ ಎಲೀಫಜನು, ಏಸಾವನ ಹೆಂಡತಿ ಬಾಸೆಮತಳ ಮಗ ರೆಯೂವೇಲನು.


ಇದಲ್ಲದೆ ಅವರಲ್ಲಿ ಸಿಮೆಯೋನನ ಪುತ್ರರಲ್ಲಿ ಐನೂರು ಮಂದಿ ಇಷ್ಷೀಯ ಪುತ್ರರಾದ ಪೆಲಟ್ಯ, ನೆಯರ್ಯ, ರೆಫಾಯ, ಉಜ್ಜೀಯೇಲ್ ಎಂಬವರನ್ನು ತಮ್ಮ ಅಧಿಪತಿಗಳಾಗಿ ಮಾಡಿಕೊಂಡು. ಸೇಯೀರ್ ಎಂಬ ಪರ್ವತ ದೇಶಕ್ಕೆ ಹೋದರು.


ಕಳುಹಿಸುವಾಗ ಅವರಿಗೆ, “ನನ್ನ ಯಜಮಾನನಾದ ಏಸಾವನಿಗೆ ನೀವು ಹೀಗೆ ಹೇಳಬೇಕು: ‘ನಿನ್ನ ದಾಸನಾದ ಯಾಕೋಬನು ಹೀಗೆ ಹೇಳುತ್ತಾನೆ: ಲಾಬಾನನ ಸಂಗಡ ನಾನು ಇಲ್ಲಿಯವರೆಗೆ ಪ್ರವಾಸಿಯಾಗಿದ್ದೆನು.


ಮಗ್ದೀಯೇಲ್ ಮತ್ತು ಗೀರಾಮ್ ಇವರೇ ತಮ್ಮ ನಿವಾಸಸ್ಥಳಗಳ ಪ್ರಕಾರ ಎದೋಮ್ಯರ ಮುಖಂಡರು. ಎದೋಮ್ಯರ ತಂದೆ ಏಸಾವನು ವಂಶಾವಳಿ ಇದೇ.


ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದವಿಡುವಷ್ಟು ಸ್ಥಳವನ್ನಾದರೂ ಕೊಡುವುದಿಲ್ಲ. ಏಕೆಂದರೆ ಸೇಯೀರ್ ಬೆಟ್ಟವನ್ನು ನಾನು ಏಸಾವನಿಗೆ ಸ್ವದೇಶವಾಗಿ ಕೊಟ್ಟಿದ್ದೇನೆ.


ಇಸಾಕನಿಗೆ ಯಾಕೋಬನನ್ನೂ ಏಸಾವನನ್ನೂ ಕೊಟ್ಟು ಏಸಾವನಿಗೆ ಸೇಯೀರ್ ಪರ್ವತದ ನಾಡನ್ನು ಸೊತ್ತಾಗಿ ಕೊಟ್ಟೆನು. ಆದರೆ ಯಾಕೋಬನೂ ಅವನ ಮಕ್ಕಳೂ ಈಜಿಪ್ಟಿಗೆ ಹೋದರು.


ಓಬದ್ಯನ ದರ್ಶನವು. ಸಾರ್ವಭೌಮ ಯೆಹೋವ ದೇವರು ಎದೋಮನ್ನು ಕುರಿತು ಹೀಗೆ ಹೇಳುತ್ತಾರೆ: ಯೆಹೋವ ದೇವರಿಂದ ಸುದ್ದಿಯನ್ನು ಕೇಳಿದ್ದೇವೆ. ಅವರು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾರೆ: “ಏಳಿರಿ, ಅದಕ್ಕೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು