Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:18 - ಕನ್ನಡ ಸಮಕಾಲಿಕ ಅನುವಾದ

18 ಅವರು ದೂರದಿಂದ ಅವನನ್ನು ನೋಡಿದಾಗ, ಅವನು ಸಮೀಪಕ್ಕೆ ಬರುವ ಮುಂಚೆಯೇ ಅವನನ್ನು ಕೊಂದುಹಾಕಬೇಕೆಂದು ಅವನಿಗೆ ವಿರೋಧವಾಗಿ ಒಳಸಂಚು ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರು ಅವನನ್ನು ದೂರದಿಂದ ನೋಡಿ ಅವನು ತಮ್ಮ ಬಳಿಗೆ ಬರುವಷ್ಟರೊಳಗೆ ಅವನನ್ನು ಕೊಲ್ಲುವುದಕ್ಕೆ ಒಳಸಂಚು ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಣ್ಣಂದಿರು ಅವನನ್ನು ದೂರದಿಂದಲೇ ನೋಡಿದರು. ಅವನು ತಮ್ಮ ಬಳಿಗೆ ಬರುವಷ್ಟರೊಳಗೆ ಅವನನ್ನು ಕೊಲ್ಲಲು ಒಳಸಂಚು ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರು ಅವನನ್ನು ದೂರದಿಂದ ನೋಡಿ ಅವನು ತಮ್ಮ ಬಳಿಗೆ ಬರುವಷ್ಟರೊಳಗೆ ಅವನನ್ನು ಕೊಲ್ಲುವದಕ್ಕೆ ಒಳಸಂಚುಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೋಸೇಫನನ್ನು ಬಹುದೂರದಿಂದಲೇ ಕಂಡ ಅವನ ಅಣ್ಣಂದಿರು ಅವನನ್ನು ಕೊಲ್ಲಲು ಒಂದು ಉಪಾಯ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:18
19 ತಿಳಿವುಗಳ ಹೋಲಿಕೆ  

ಮರುದಿನ ಯೆಹೂದ್ಯರು ರಹಸ್ಯವಾಗಿ ಕೂಡಿಬಂದು, ಪೌಲನನ್ನು ತಾವು ಕೊಲ್ಲುವವರೆಗೆ ಅನ್ನಪಾನ ಸ್ವೀಕರಿಸುವುದಿಲ್ಲವೆಂದು ಶಪಥಮಾಡಿಕೊಂಡರು.


ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿವಸಗಳಿದ್ದಾಗ, ಮುಖ್ಯಯಾಜಕರೂ ನಿಯಮ ಬೋಧಕರೂ ಉಪಾಯದಿಂದ ಯೇಸುವನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಮಾರ್ಗ ಹುಡುಕುತ್ತಿದ್ದರು.


ದುಷ್ಟನು ನೀತಿವಂತನಿಗಾಗಿ ಒಳಸಂಚು ಮಾಡುತ್ತಾನೆ; ಅವನನ್ನು ಕೊಲ್ಲಲು ಹುಡುಕುತ್ತಾನೆ.


ದುಷ್ಟನು ನೀತಿವಂತನಿಗಾಗಿ ಒಳಸಂಚು ಮಾಡುತ್ತಾನೆ, ಆದರೆ ಅವನನ್ನು ಕಂಡು ಹಲ್ಲು ಕಡಿಯುತ್ತಾನೆ.


ಸೌಲನು ತನ್ನ ಮಗ ಯೋನಾತಾನ ಮತ್ತು ತನ್ನ ಸಮಸ್ತ ಸೇವಕರಿಗೆ ದಾವೀದನನ್ನು ಕೊಲ್ಲಬೇಕೆಂದು ಹೇಳಿದನು. ಆದರೆ ಸೌಲನ ಮಗನಾದ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು.


ಅವರು ಆ ದಿನದಿಂದ ಯೇಸುವನ್ನು ಕೊಲ್ಲಬೇಕೆಂಬ ಒಳಸಂಚು ಮಾಡಿಕೊಂಡರು.


ಅನೇಕರು ಹೀಗೆ ಪಿಸುಗುಟ್ಟುವುದನ್ನು ಕೇಳಿದ್ದೇನೆ. ಸುತ್ತಲೂ ಅಂಜಿಕೆ ಇದೆ; ಅನೇಕರು ನನ್ನ ಪ್ರಾಣವನ್ನು ತೆಗೆಯಬೇಕೆಂದು ಒಳಸಂಚು ಮಾಡುತ್ತಿದ್ದಾರೆ.


“ಆದರೆ ಆ ರೈತರು, ‘ಇವನೇ ಬಾಧ್ಯಸ್ಥನು, ಬನ್ನಿರಿ, ಇವನನ್ನು ನಾವು ಕೊಂದು ಹಾಕೋಣ. ಆಗ ಆಸ್ತಿ ನಮ್ಮದಾಗುವುದು,’ ಎಂದು ತಮ್ಮ ತಮ್ಮಲ್ಲಿ ಮಾತನಾಡಿಕೊಂಡರು.


ಬೆಳಗಾದಾಗ, ಎಲ್ಲಾ ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವುದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.


“ಆದರೆ ಗೇಣಿಗೆದಾರರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ, ‘ಇವನೇ ಬಾಧ್ಯಸ್ಥನು. ಬನ್ನಿರಿ, ನಾವು ಇವನನ್ನು ಕೊಂದು ಇವನ ಆಸ್ತಿಯನ್ನು ಕಿತ್ತುಕೊಳ್ಳೋಣ,’ ಎಂದುಕೊಂಡು,


ನನ್ನ ಸ್ನೇಹಕ್ಕೆ ಬದಲಾಗಿ ನನ್ನ ಮೇಲೆ ದೂರು ಹೇಳುತ್ತಾರೆ; ಆದರೆ ನಾನು ಪ್ರಾರ್ಥನೆಯ ಮನುಷ್ಯನು.


ತಮ್ಮ ಜನರನ್ನು ದ್ವೇಷಿಸುವಂತೆಯೂ, ತಮ್ಮ ಸೇವಕರನ್ನು ಕುಯುಕ್ತಿಯಿಂದ ನಡೆಸುವಂತೆಯೂ ದೇವರು ಅವರ ಹೃದಯವನ್ನು ಮಾರ್ಪಡಿಸಿದನು.


ನೀತಿವಂತನ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ; ಅವರ ನಿರಪರಾಧಿಗಳನ್ನು ಮರಣಕ್ಕೆ ಒಪ್ಪಿಸುತ್ತಾರೆ.


ಅವರು, “ಇಗೋ, ಈ ಕನಸುಗಾರ ಬರುತ್ತಿದ್ದಾನೆ,


ಏಸಾವನು ತನ್ನ ತಂದೆಯು ಅವನಿಗೆ ಕೊಟ್ಟ ಆಶೀರ್ವಾದಕ್ಕೋಸ್ಕರ ಯಾಕೋಬನನ್ನು ದ್ವೇಷಿಸಿದನು. ಏಸಾವನು, “ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸಮೀಪವಾಗಿವೆ. ತರುವಾಯ ನಾನು ನನ್ನ ಸಹೋದರ ಯಾಕೋಬನನ್ನು ಕೊಲ್ಲುವೆನು,” ಎಂದು ತನ್ನಲ್ಲಿಯೇ ಅಂದುಕೊಂಡನು.


ತಮ್ಮ ತಂದೆ ಸತ್ತು ಹೋದ ಮೇಲೆ ಯೋಸೇಫನ ಸಹೋದರರು, “ಒಂದು ವೇಳೆ ಯೋಸೇಫನು ನಮ್ಮನ್ನು ಹಗೆಮಾಡಿ, ನಾವು ಅವನಿಗೆ ಮಾಡಿದ್ದ ಎಲ್ಲಾ ಕೇಡಿಗಾಗಿ ನಿಶ್ಚಯವಾಗಿ ಪ್ರತೀಕಾರಮಾಡಬಹುದು,” ಎಂದುಕೊಂಡು,


ನೀವು ನನಗೆ ವಿರೋಧವಾಗಿ ಕೇಡನ್ನು ಕಲ್ಪಿಸಿದ್ದೀರಿ, ಆದರೆ ದೇವರು ಒಳ್ಳೆಯದಕ್ಕಾಗಿಯೇ ಸಂಕಲ್ಪಿಸಿದರು. ಈಗ ಬಹುಜನರ ಪ್ರಾಣ ಉಳಿಯುವಂತೆ ನಡೆಯುತ್ತಿದೆ.


ಯೆಹೋವ ದೇವರೇ, ನಾನು ನಿಮ್ಮಲ್ಲಿ ಭರವಸೆ ಇಟ್ಟಿದ್ದೇನೆ; “ನನ್ನ ದೇವರು ನೀವೇ,” ಎಂದು ಹೇಳಿಕೊಂಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು