Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:20 - ಕನ್ನಡ ಸಮಕಾಲಿಕ ಅನುವಾದ

20 ಬನ್ನಿರಿ, ಈಗ ಅವನನ್ನು ಕೊಂದು, ಯಾವುದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ. ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ,” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಬನ್ನಿರಿ, ಈಗ ನಾವು ಅವನನ್ನು ಕೊಂದು ಈ ಗುಂಡಿಗಳಲ್ಲಿ ಒಂದರೊಳಗೆ ಹಾಕಿ, ಕಾಡುಮೃಗವು ಅವನನ್ನು ತಿಂದು ಬಿಟ್ಟಿತೆಂದು ಹೇಳೋಣ. ಆಗ ಅವನ ಕನಸುಗಳು ಏನಾಗುವವೋ? ನೋಡೋಣ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾವು ಅವನನ್ನು ಕೊಂದು ಈ ಬಾವಿಯೊಂದರಲ್ಲಿ ಹಾಕಿಬಿಡೋಣ. 'ಕಾಡುಮೃಗ ಅವನನ್ನು ತಿಂದುಬಿಟ್ಟಿತು'; ಎಂದು ಹೇಳಿದರೆ ಆಯಿತು, ಬನ್ನಿ, ಆಗ ಅವನ ಕನಸುಗಳು ಏನಾಗುತ್ತವೋ ನೋಡೋಣ,” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾವು ಅವನನ್ನು ಕೊಂದು ಈ ಗುಂಡಿಗಳಲ್ಲಿ ಒಂದರೊಳಗೆ ಹಾಕಿ ದುಷ್ಟಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ ಬನ್ನಿ; ಆಗ ಅವನ ಕನಸುಗಳು ಏನಾಗುವವೋ ನೋಡೋಣ ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅವನನ್ನು ಕೊಲ್ಲಲು ಇದೇ ತಕ್ಕ ಸಮಯ. ಅವನನ್ನು ಕೊಂದು ನೀರಿಲ್ಲದ ಬಾವಿಯೊಳಗೆ ದಬ್ಬಿ, ಕ್ರೂರ ಪ್ರಾಣಿಯೊಂದು ಅವನನ್ನು ತಿಂದುಬಿಟ್ಟಿತೆಂದು ನಮ್ಮ ತಂದೆಗೆ ಹೇಳೋಣ. ಆಗ ಅವನ ಕನಸುಗಳೆಲ್ಲ ಹೇಗೆ ನಿಜವಾಗುತ್ತವೊ ನೋಡೋಣ” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:20
25 ತಿಳಿವುಗಳ ಹೋಲಿಕೆ  

ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸ ಹೋದವರೂ ವಿವಿಧ ಆಶೆಗಳಿಗೂ ಭೋಗಗಳಿಗೂ ದಾಸರಾಗಿದ್ದೆವು. ಕೆಟ್ಟತನ ಹಾಗೂ ಮತ್ಸರಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ದ್ವೇಷಿಸುವವರೂ ಆಗಿದ್ದೆವು.


ಕ್ರೋಧವು ಕ್ರೂರ, ಕೋಪವು ಪ್ರವಾಹ; ಆದರೆ ಅಸೂಯೆದ ಮುಂದೆ ಯಾವನು ನಿಂತಾನು?


ಅವನು ಹಿಂದಿರುಗಿ ಅವರನ್ನು ನೋಡಿ, ಯೆಹೋವ ದೇವರ ಹೆಸರಿನಲ್ಲಿ ಅವರನ್ನು ಶಪಿಸಿದನು. ಆಗ ಅಡವಿಯಿಂದ ಎರಡು ಕರಡಿಗಳು ಹೊರಟು, ಅವರಲ್ಲಿ ನಾಲ್ವತ್ತೆರಡು ಹುಡುಗರನ್ನು ಸೀಳಿಬಿಟ್ಟವು.


ನಾನು ಭೂಲೋಕದ ಕಾರ್ಯಗಳನ್ನು ನಿಮಗೆ ಹೇಳುವಾಗಲೇ ನೀವು ನಂಬುವುದಿಲ್ಲ, ಪರಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ಹೇಗೆ ನಂಬುವಿರಿ?


ದ್ವೇಷವನ್ನು ಮರೆಮಾಚುವವನು ಸುಳ್ಳುಗಾರ ಮತ್ತು ಚಾಡಿ ಹೇಳುವವನು ಮೂರ್ಖನು.


ಹೆಮ್ಮೆಯ ದೃಷ್ಟಿ, ಸುಳ್ಳಾಡುವ ನಾಲಿಗೆ, ನಿರಪರಾಧಿಯ ರಕ್ತವನ್ನು ಸುರಿಸುವ ಕೈಗಳು,


ಏಕೆಂದರೆ ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತಸುರಿಸುವುದಕ್ಕೆ ಆತುರಪಡುತ್ತವೆ.


ತಮ್ಮೊಳಗೆ ಕೇಡನ್ನು ಪ್ರೋತ್ಸಾಹ ಮಾಡುತ್ತಾರೆ. ರಹಸ್ಯವಾಗಿ ಬಲೆಗಳನ್ನು ಒಡ್ಡುವುದಕ್ಕೆ ಮಾತನಾಡುತ್ತಾ, “ನಮ್ಮನ್ನು ಕಾಣುವವರು ಯಾರು?” ಎಂದುಕೊಳ್ಳುತ್ತಾರೆ.


ಅವನು ಹೋದ ತರುವಾಯ, ಸಿಂಹವು ಅವನನ್ನು ದಾರಿಯಲ್ಲಿ ಹಿಡಿದು ಕೊಂದುಹಾಕಿತು. ಅವನ ಹೆಣ ದಾರಿಯಲ್ಲಿ ಬಿದ್ದಿತ್ತು. ಕತ್ತೆಯೂ ಮತ್ತು ಸಿಂಹವೂ ಹೆಣದ ಬಳಿಯಲ್ಲಿ ನಿಂತಿದ್ದವು.


ಆಗ ಸೌಲನು ಎದ್ದು ಜೀಫ್ ಮರುಭೂಮಿಯಲ್ಲಿರುವ ದಾವೀದನನ್ನು ಹುಡುಕಲು ಇಸ್ರಾಯೇಲಿನಲ್ಲಿ ಆಯ್ದ ಮೂರು ಸಾವಿರ ಜನರ ಸಂಗಡ ಜೀಫ್ ಮರುಭೂಮಿಗೆ ಹೊರಟುಹೋಗಿ,


ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನಿಗೆ ಏಳಿಗೆ ಆಗುವುದಿಲ್ಲ. ಆದರೆ ಪಾಪಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರಕುವುದು.


ಈಗ ಇಗೋ, ನೀನು ನಿಶ್ಚಯವಾಗಿ ಅರಸನಾಗುವೆ ಎಂದೂ, ಇಸ್ರಾಯೇಲಿನ ರಾಜ್ಯವು ನಿನ್ನ ಕೈಯಲ್ಲಿ ಸ್ಥಿರವಾಗುವುದೆಂದೂ ನಾನು ಚೆನ್ನಾಗಿ ಬಲ್ಲೆನು.


ಅವರು, “ಇಗೋ, ಈ ಕನಸುಗಾರ ಬರುತ್ತಿದ್ದಾನೆ,


ಆಗ ಯೆಹೂದನು ತನ್ನ ಸಹೋದರರಿಗೆ, “ನಾವು ನಮ್ಮ ಸಹೋದರನನ್ನು ಕೊಂದುಹಾಕಿ, ಅವನ ರಕ್ತವನ್ನು ಮರೆಮಾಡುವುದರಲ್ಲಿ ಲಾಭವೇನು?


ಆ ಬಣ್ಣದ ಅಂಗಿಯನ್ನು ಅವರು ತಮ್ಮ ತಂದೆಯ ಬಳಿಗೆ ತಂದು, “ಇದು ನಮಗೆ ಸಿಕ್ಕಿತು, ಇದು ನಿನ್ನ ಮಗನ ಅಂಗಿಯೋ ಏನೋ ನೋಡು,” ಎಂದು ಹೇಳಿದರು.


ಯಾಕೋಬನು ಅದನ್ನು ಗುರುತು ಹಿಡಿದು, “ಇದು ನನ್ನ ಮಗನ ಅಂಗಿ ಹೌದು, ದುಷ್ಟಮೃಗವು ಅವನನ್ನು ತಿಂದುಬಿಟ್ಟಿತು, ಯೋಸೇಫನನ್ನು ನಿಸ್ಸಂದೇಹವಾಗಿ ಸೀಳಿಹಾಕಿರಬೇಕು,” ಎಂದನು.


ಯೋಸೇಫನು ತನ್ನ ಸಹೋದರರಿಗೆ, “ನಾನು ಯೋಸೇಫನು! ನನ್ನ ತಂದೆಯು ಬದುಕಿದ್ದಾನೋ?” ಎಂದನು. ಅದಕ್ಕೆ ಅವನ ಸಹೋದರರು ಅವನ ಮುಂದೆ ಕಳವಳಗೊಂಡವರಾಗಿ, ಅವನಿಗೆ ಉತ್ತರ ಕೊಡಲಾರದೆ ಹೋದರು.


ಮಗನೇ, ಪಾಪಿಗಳು ನಿನ್ನನ್ನು ಸೆಳೆದರೆ ನೀನು ಒಪ್ಪಬೇಡ.


“ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ. ವಿಪರೀತವಾದ ಶಿಕ್ಷೆಯು ಹಾದುಹೋಗುವಾಗ, ಅದು ನಮ್ಮನ್ನು ಮುಟ್ಟದು; ನಮ್ಮ ಅಸತ್ಯವನ್ನು ಆಶ್ರಯವಾಗಿ ಮಾಡಿಕೊಂಡು, ಮೋಸದಲ್ಲಿ ಅಡಗಿಕೊಂಡಿದ್ದೇವೆ,” ಎನ್ನುತ್ತೀರಲ್ಲಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು