Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:22 - ಕನ್ನಡ ಸಮಕಾಲಿಕ ಅನುವಾದ

22 ರೂಬೇನನು ಅವನನ್ನು ಅವರ ಕೈಗಳಿಂದ ತಪ್ಪಿಸಿ, ತನ್ನ ತಂದೆಯ ಬಳಿಗೆ ತಿರುಗಿ ಕರೆದುಕೊಂಡುಹೋಗುವ ಉದ್ದೇಶದಿಂದ ಅವರಿಗೆ, “ರಕ್ತ ಚೆಲ್ಲಬೇಡಿರಿ, ಕಾಡಿನಲ್ಲಿರುವ ಈ ಗುಂಡಿಯಲ್ಲಿ ಹಾಕಿರಿ, ಆದರೆ ಅವನ ಮೇಲೆ ಕೈಹಾಕಬೇಡಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ರೂಬೇನನು ಅವನನ್ನು ಅವರ ಕೈಯಿಂದ ತಪ್ಪಿಸಿ ತಂದೆಗೆ ತಿರುಗಿ ಒಪ್ಪಿಸಬೇಕೆಂದು ನೆನಸಿ ಅವರಿಗೆ, “ಇವನ ರಕ್ತ ಸುರಿಸಬೇಡಿರಿ, ಅವನನ್ನು ಈ ಕಾಡಿನಲ್ಲಿರುವ ಈ ಗುಂಡಿಯೊಳಗೆ ಹಾಕಿರಿ, ಅವನ ಮೇಲೆ ಕೈಹಾಕಬೇಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ರಕ್ತಪಾತ ಕೂಡದು, ಕಾಡಿನಲ್ಲಿರುವ ಈ ಬಾವಿ ಒಂದರಲ್ಲಿ ಹಾಕಿಬಿಡಿ, ಅವನ ಮೇಲೆ ಕೈಹಾಕಬೇಡಿ,” ಎಂದು ಅವನಿಗೆ ಹೇಳಿದ. ಅವನನ್ನು ಅವರಿಂದ ತಪ್ಪಿಸಿ ತಂದೆಗೆ ಮತ್ತೆ ಒಪ್ದಿಸಬೇಕೆಂಬ ಗುರಿ ರೂಬೇನನದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ರೂಬೇನನು ಅವನನ್ನು ಅವರ ಕೈಯಿಂದ ತಪ್ಪಿಸಿ ತಂದೆಗೆ ತಿರಿಗಿ ಒಪ್ಪಿಸಬೇಕೆಂದು ಅವರಿಗೆ - ಪ್ರಾಣಹತ್ಯ ಮಾಡಬೇಡಿರಿ; ಅವನನ್ನು ಕಾಡಿನಲ್ಲಿರುವ ಈ ಗುಂಡಿಯೊಳಗೆ ಹಾಕಬಹುದು; ಅವನ ಮೇಲೆ ಕೈಹಾಕಬೇಡಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅರಣ್ಯದಲ್ಲಿರುವ ಬರಿದಾದ ಬಾವಿಗೆ ಅವನನ್ನು ನೂಕಿಬಿಡಿ; ಆದರೆ ಅವನಿಗೆ ನೋವು ಮಾಡಬೇಡಿ” ಎಂದು ಹೇಳಿದನು. ತರುವಾಯ ಯೋಸೇಫನನ್ನು ಬಾವಿಯಿಂದ ಮೇಲೆತ್ತಿ ತಂದೆಗೆ ಅವನನ್ನು ಒಪ್ಪಿಸಬೇಕೆಂಬುದೇ ರೂಬೇನನ ಅಪೇಕ್ಷೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:22
9 ತಿಳಿವುಗಳ ಹೋಲಿಕೆ  

ಆ ದಿನಗಳಲ್ಲಿ ಅರಸನಾದ ಹೆರೋದನು ದೇವರ ಸಭೆಯ ಸದಸ್ಯರನ್ನು ಹಿಂಸಿಸುವ ಉದ್ದೇಶದಿಂದ ಕೆಲವರನ್ನು ಬಂಧಿಸಿದನು.


ಪಿಲಾತನು ತನ್ನ ಯತ್ನ ನಡೆಯಲಿಲ್ಲವೆಂದೂ ಅದಕ್ಕೆ ಬದಲಾಗಿ ಗದ್ದಲವೇ ಹೆಚ್ಚಾಗುತ್ತದೆಂದೂ ನೋಡಿ, ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು, “ಈ ನೀತಿವಂತನ ರಕ್ತದ ವಿಷಯದಲ್ಲಿ ನಾನು ನಿರಪರಾಧಿ, ಇದಕ್ಕೆ ನೀವೇ ಜವಾಬ್ದಾರಿ,” ಎಂದನು.


ಆ ಶಿಕ್ಷೆಯನ್ನು ನಡೆಸುವಾಗ ತಪ್ಪು ಕಂಡವನೇ ಮೊದಲು ಕಲ್ಲು ಎಸೆಯಬೇಕು, ತರುವಾಯ ಜನರೆಲ್ಲರೂ ಎಸೆಯಲಿ.


ಆದರೆ ದೇವರು ಇಸ್ರಾಯೇಲರ ಶ್ರೇಷ್ಠರನ್ನು ತಳ್ಳಿಬಿಡಲಿಲ್ಲ. ಅವರು ಸಹ ದೇವರನ್ನು ನೋಡಿ, ಊಟಮಾಡಿ, ಪಾನಮಾಡಿದರು.


ಆಗ ರೂಬೇನನು ಅವರಿಗೆ ಉತ್ತರವಾಗಿ, “ಹುಡುಗನಿಗೆ ಏನೂ ಕೇಡು ಮಾಡಬೇಡಿರಿ, ಎಂದು ನಾನು ನಿಮಗೆ ಹೇಳಿದರೂ ನೀವು ಕೇಳಲಿಲ್ಲ. ಆದ್ದರಿಂದ ಅವನಿಗಾದ ಪ್ರಾಣಹಾನಿಯ ವಿಷಯದಲ್ಲಿ ಈಗ ನಾವು ಲೆಕ್ಕ ಒಪ್ಪಿಸುತ್ತಿದ್ದೇವೆ,” ಎಂದನು.


ಯೆಹೋವ ದೇವರ ದೂತನು ಅಬ್ರಹಾಮನಿಗೆ, “ಹುಡುಗನ ಮೇಲೆ ಕೈ ಹಾಕಬೇಡ; ಅವನಿಗೆ ಏನೂ ಮಾಡಬೇಡ; ಏಕೆಂದರೆ ನೀನು ದೇವರಿಗೆ ಭಯಪಡುತ್ತೀ ಎಂದು ಈಗ ನಾನು ತಿಳಿದಿದ್ದೇನೆ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಅರ್ಪಿಸುವುದಕ್ಕೆ ಹಿಂಜರಿಯಲಿಲ್ಲ,” ಎಂದು ಹೇಳಿದನು.


ಆದರೆ ರೂಬೇನನು ಅದನ್ನು ಕೇಳಿ, ಅವನನ್ನು ಅವರ ಕೈಗಳಿಂದ ತಪ್ಪಿಸಿ, “ಅವನನ್ನು ಕೊಲ್ಲುವುದು ಬೇಡ,” ಎಂದನು.


ಯೋಸೇಫನು ತನ್ನ ಸಹೋದರರ ಬಳಿಗೆ ಬಂದಾಗ, ಅವರು ಯೋಸೇಫನ ಮೇಲಿದ್ದ ಬಣ್ಣಗಳ ಅಂಗಿಯನ್ನು ತೆಗೆದರು.


ಹೀಗಾದರೂ ಎಲ್ನಾಥಾನನೂ, ದೆಲಾಯನೂ, ಗೆಮರೀಯನೂ ಆ ಸುರುಳಿಯನ್ನು ಸುಡಬಾರದೆಂದು ಅರಸನಿಗೆ ಬಿನ್ನಹ ಮಾಡಿದರು; ಆದರೆ ಅವನು ಅವರಿಗೆ ಕಿವಿಗೊಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು