Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:29 - ಕನ್ನಡ ಸಮಕಾಲಿಕ ಅನುವಾದ

29 ರೂಬೇನನು ಗುಂಡಿಯ ಬಳಿಗೆ ತಿರುಗಿ ಬಂದಾಗ, ಯೋಸೇಫನು ಗುಂಡಿಯಲ್ಲಿ ಇಲ್ಲದ್ದರಿಂದ, ತನ್ನ ವಸ್ತ್ರಗಳನ್ನು ಹರಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ರೂಬೇನನು ತಿರುಗಿ ಆ ಗುಂಡಿಯ ಹತ್ತಿರಕ್ಕೆ ಬಂದು ಅದರಲ್ಲಿ ಯೋಸೇಫನು ಇಲ್ಲದೆ ಇರುವುದನ್ನು ಕಂಡು ತನ್ನ ಬಟ್ಟೆಗಳನ್ನು ಹರಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ರೂಬೇನನು ಮರಳಿ ಆ ಬಾವಿಯ ಬಳಿಗೆ ಬಂದು ನೋಡಿದನು. ಅದರಲ್ಲಿ ಜೋಸೆಫನು ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ರೂಬೇನನು ತಿರಿಗಿ ಆ ಗುಂಡಿಯ ಹತ್ತಿರಕ್ಕೆ ಬಂದು ಅದರಲ್ಲಿ ಯೋಸೇಫನಿಲ್ಲದ್ದನ್ನು ಕಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆ ಸಮಯದಲ್ಲಿ ರೂಬೇನನು ತನ್ನ ಸಹೋದರರೊಡನೆ ಇರಲಿಲ್ಲ. ಅವರು ಯೋಸೇಫನನ್ನು ಮಾರಿದ್ದು ಅವನಿಗೆ ಗೊತ್ತಿರಲಿಲ್ಲ. ರೂಬೇನನು ಬಾವಿಗೆ ಹಿಂತಿರುಗಿ ಬಂದಾಗ, ಯೋಸೇಫನನ್ನು ಅಲ್ಲಿ ಕಾಣದೆ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:29
14 ತಿಳಿವುಗಳ ಹೋಲಿಕೆ  

ಆಗ ಯೋಬನು ಎದ್ದು ತನ್ನ ಮೇಲಂಗಿಯನ್ನು ಹರಿದುಕೊಂಡನು. ನಂತರ ತನ್ನ ತಲೆ ಬೋಳಿಸಿಕೊಂಡು, ನೆಲಕ್ಕೆ ಬಿದ್ದು ಸಾಷ್ಟಾಂಗವೆರಗಿ,


ಆಗ ಯಾಕೋಬನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗೋಸ್ಕರ ಬಹುದಿನ ದುಃಖಪಟ್ಟನು.


ಇದಲ್ಲದೆ ಕಾನಾನ್ ದೇಶವನ್ನು ಸಂಚರಿಸಿ ನೋಡಿದವರಲ್ಲಿದ್ದ ನೂನನ ಮಗ ಯೆಹೋಶುವನೂ, ಯೆಫುನ್ನೆಯ ಮಗ ಕಾಲೇಬನೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು,


ಆಗ ಅವರು ತಮ್ಮ ವಸ್ತ್ರಗಳನ್ನು ಹರಿದುಕೊಂಡು, ತಮ್ಮ ತಮ್ಮ ಕತ್ತೆಗಳ ಮೇಲೆ ಚೀಲಗಳನ್ನು ಹೇರಿಕೊಂಡು ಪಟ್ಟಣಕ್ಕೆ ಮರಳಿ ಬಂದರು.


ಆದರೆ ಅಪೊಸ್ತಲರಾದ ಬಾರ್ನಬ ಮತ್ತು ಪೌಲರು ಇದನ್ನು ಕೇಳಿದಾಗ, ತಮ್ಮ ಬಟ್ಟೆಗಳನ್ನು ಹರಿದುಕೊಂಡು ಜನಸಮೂಹದ ಕಡೆಗೆ ಓಡಿಬಂದು ಕೂಗಿ ಹೇಳಿದ್ದೇನೆಂದರೆ:


ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಂಡು, ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಳ್ಳಿರಿ. ಅವರು ದಯೆಯೂ ಕರುಣೆಯೂ, ದೀರ್ಘಶಾಂತಿಯೂ ಮಹಾ ಪ್ರೀತಿಯೂ ಉಳ್ಳವರಾಗಿ ಮಾಡಬೇಕೆಂದಿರುವ ಕೇಡಿಗೆ ಮನಮರುಗುತ್ತಾರೆ.


ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ, ತನ್ನ ಬಟ್ಟೆಗಳನ್ನು ಹರಿದುಕೊಂಡು, ಗೋಣಿ ತಟ್ಟಿನಿಂದ ತನ್ನನ್ನು ಮುಚ್ಚಿಕೊಂಡು, ಯೆಹೋವ ದೇವರ ಆಲಯಕ್ಕೆ ಹೋದನು.


ಅವನು ಅವಳನ್ನು ನೋಡಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡು, “ಅಯ್ಯೋ, ನನ್ನ ಮಗಳೇ, ನೀನು ನನ್ನನ್ನು ಬಹಳವಾಗಿ ಕುಂದಿಸಿದೆ. ನನ್ನನ್ನು ತೊಂದರೆ ಪಡಿಸುವವರಲ್ಲಿ ನೀನೂ ಒಬ್ಬಳಾದೆ. ಏಕೆಂದರೆ ನಾನು ಯೆಹೋವ ದೇವರಿಗೆ ನನ್ನ ಬಾಯಿತೆರೆದು, ಪ್ರಮಾಣಮಾಡಿದೆನು, ಹಿಂದೆಗೆಯಲಾರೆನು,” ಎಂದನು.


ಆಗ ಯಾಕೋಬನ ಮಕ್ಕಳು ಶೆಕೆಮನಿಗೂ, ಅವನ ತಂದೆ ಹಮೋರನಿಗೂ ವಂಚನೆಯ ಉತ್ತರವನ್ನು ಕೊಟ್ಟರು. ಏಕೆಂದರೆ ಅವನು ತಮ್ಮ ತಂಗಿ ದೀನಳನ್ನು ಕೆಡಿಸಿದ್ದನು.


ಆಗ ದಾವೀದನೂ, ಅವನ ಸಂಗಡ ಇದ್ದ ಸಮಸ್ತ ಜನರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು,


ಆಗ ತಾಮಾರಳು ತನ್ನ ತಲೆಯ ಮೇಲೆ ಬೂದಿಯನ್ನು ಹಾಕಿಕೊಂಡು, ತಾನು ಧರಿಸಿಕೊಂಡಿದ್ದ ವಿವಿಧ ಬಣ್ಣದ ವಸ್ತ್ರವನ್ನು ಹರಿದು, ತನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಗಟ್ಟಿಯಾಗಿ ಅಳುತ್ತಾ ಹೋದಳು.


ಇಸ್ರಾಯೇಲಿನ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು, “ಕೊಲ್ಲುವುದಕ್ಕೂ, ಬದುಕಿಸುವುದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ವಾಸಿ ಮಾಡುವುದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧವಾಗಿ ಜಗಳಕ್ಕೆ ಕಾರಣ ಹುಡುಕುವುದನ್ನು ನೀವೇ ನೋಡಿರಿ,” ಎಂದನು.


ಅಲ್ಲಿ ಅರಸನು ಪದ್ಧತಿಯ ಪ್ರಕಾರ ಕಂಬದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.


ಈ ವಾಕ್ಯಗಳನ್ನೆಲ್ಲಾ ಕೇಳಿದ ಅರಸನಾದರೂ, ಅವರ ಸೇವಕರಾದ ಒಬ್ಬರಾದರೂ ಹೆದರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು