Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:32 - ಕನ್ನಡ ಸಮಕಾಲಿಕ ಅನುವಾದ

32 ಆ ಬಣ್ಣದ ಅಂಗಿಯನ್ನು ಅವರು ತಮ್ಮ ತಂದೆಯ ಬಳಿಗೆ ತಂದು, “ಇದು ನಮಗೆ ಸಿಕ್ಕಿತು, ಇದು ನಿನ್ನ ಮಗನ ಅಂಗಿಯೋ ಏನೋ ನೋಡು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆ ಬಣ್ಣದ ನಿಲುವಂಗಿಯನ್ನು ತಮ್ಮ ತಂದೆಯ ಬಳಿಗೆ ತಂದು, “ಇದು ನಮಗೆ ಸಿಕ್ಕಿತು. ಇದು ನಿನ್ನ ಮಗನ ಅಂಗಿಯೋ ಏನೋ ದಯವಿಟ್ಟು ನೋಡು” ಎಂದು ಅವನಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆ ಅಂಗಿಯನ್ನು ತಮ್ಮ ತಂದೆಗೆ ಕಳಿಸಿದರು. ಅದನ್ನು ತಂದವರು, “ಇದು ನಮಗೆ ಸಿಕ್ಕಿತು; ಇದು ನಿಮ್ಮ ಮಗನ ಅಂಗಿಯೋ ಅಲ್ಲವೋ ನೋಡಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆ ನಿಲುವಂಗಿಯನ್ನು ತಮ್ಮ ತಂದೆಗೆ ಕಳುಹಿಸಿದರು; ತಂದವರು - ಇದು ನಮಗೆ ಸಿಕ್ಕಿತು; ಇದು ನಿನ್ನ ಮಗನ ಅಂಗಿ ಹೌದೋ ಅಲ್ಲವೋ ನೋಡು ಎಂದು ಅವನಿಗೆ ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಬಳಿಕ ಆ ನಿಲುವಂಗಿಯನ್ನು ತಮ್ಮ ತಂದೆಯ ಬಳಿಗೆ ತೆಗೆದುಕೊಂಡು ಹೋಗಿ, “ನಾವು ಈ ನಿಲುವಂಗಿಯನ್ನು ಕಂಡೆವು. ಇದು ಯೋಸೇಫನ ನಿಲುವಂಗಿಯೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:32
7 ತಿಳಿವುಗಳ ಹೋಲಿಕೆ  

ಆದರೆ ನಿನ್ನ ಆಸ್ತಿಯನ್ನು ವೇಶ್ಯೆಯರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದಾಗ, ವಿಶೇಷ ಔತಣವನ್ನೇ ಮಾಡಿಸಿದ್ದೀಯಲ್ಲಾ!’ ಎಂದನು.


ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನ ವಯಸ್ಸಿನಲ್ಲಿ ಹುಟ್ಟಿದ ಮಗನಾಗಿದ್ದುದರಿಂದ ಅವನು ತನ್ನ ಎಲ್ಲಾ ಮಕ್ಕಳಿಗಿಂತ ಅವನನ್ನು ಹೆಚ್ಚು ಪ್ರೀತಿಮಾಡಿ, ಅವನಿಗೆ ಅನೇಕ ಬಣ್ಣಗಳ ಅಂಗಿಯನ್ನು ಹೊಲಿಸಿಕೊಟ್ಟನು.


ಬನ್ನಿರಿ, ಈಗ ಅವನನ್ನು ಕೊಂದು, ಯಾವುದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ. ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ,” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.


ಆಗ ಅವರು ಯೋಸೇಫನ ಅಂಗಿಯನ್ನು ತೆಗೆದುಕೊಂಡು, ಒಂದು ಹೋತವನ್ನು ಕೊಯ್ದು, ಆ ಅಂಗಿಯನ್ನು ರಕ್ತದಲ್ಲಿ ಅದ್ದಿ,


ಯಾಕೋಬನು ಅದನ್ನು ಗುರುತು ಹಿಡಿದು, “ಇದು ನನ್ನ ಮಗನ ಅಂಗಿ ಹೌದು, ದುಷ್ಟಮೃಗವು ಅವನನ್ನು ತಿಂದುಬಿಟ್ಟಿತು, ಯೋಸೇಫನನ್ನು ನಿಸ್ಸಂದೇಹವಾಗಿ ಸೀಳಿಹಾಕಿರಬೇಕು,” ಎಂದನು.


ಆಕೆಯನ್ನು ಹೊರಗೆ ತಂದಾಗ, ಆಕೆಯು ತನ್ನ ಮಾವನಿಗೆ, “ಈ ಒತ್ತೆಯ ಸಾಮಾನುಗಳನ್ನು ಕೊಟ್ಟ ಆ ಮನುಷ್ಯನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಆದ್ದರಿಂದ ಈ ಮುದ್ರೆಯೂ ದಾರವೂ ಕೋಲೂ ಯಾರವೆಂದು ತಿಳಿದುಕೋ,” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು