Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:33 - ಕನ್ನಡ ಸಮಕಾಲಿಕ ಅನುವಾದ

33 ಯಾಕೋಬನು ಅದನ್ನು ಗುರುತು ಹಿಡಿದು, “ಇದು ನನ್ನ ಮಗನ ಅಂಗಿ ಹೌದು, ದುಷ್ಟಮೃಗವು ಅವನನ್ನು ತಿಂದುಬಿಟ್ಟಿತು, ಯೋಸೇಫನನ್ನು ನಿಸ್ಸಂದೇಹವಾಗಿ ಸೀಳಿಹಾಕಿರಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಯಾಕೋಬನು ಅದರ ಗುರುತು ಹಿಡಿದು, “ಈ ಅಂಗಿ ನನ್ನ ಮಗನದೇ ಹೌದು, ಕಾಡುಮೃಗವು ಅವನನ್ನು ಕೊಂದು ತಿಂದು ಬಿಟ್ಟಿದೆ. ಯೋಸೇಫನನ್ನು ಸಂದೇಹವಿಲ್ಲದೆ ಸೀಳಿಹಾಕಿರಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಯಕೋಬನು ಅದರ ಗುರುತನ್ನು ಹಿಡಿದು, ” ಈ ಅಂಗಿ ನಿಶ್ಚಯವಾಗಿ ನನ್ನ ಮಗನದೇ; ಕಾಡುಮೃಗ ಅವನನ್ನು ಕೊಂದು ತಿಂದಿರಬೇಕು, ಜೋಸೆಫನನ್ನು ಅದು ನಿಸ್ಸಂದೇಹವಾಗಿ ಸೀಳಿಹಾಕಿರಬೇಕು,” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅವನು ಅದರ ಗುರುತನ್ನು ಹಿಡಿದು - ಈ ಅಂಗಿ ನನ್ನ ಮಗನದೇ ಹೌದು; ದುಷ್ಟಮೃಗವು ಅವನನ್ನು ಕೊಂದು ತಿಂದಿರಬೇಕು; ಯೋಸೇಫನು ಸಂದೇಹವಿಲ್ಲದೆ ಸೀಳಿ ಹಾಕಲ್ಪಟ್ಟಿರಬೇಕು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ತಂದೆಯು ಆ ನಿಲುವಂಗಿಯನ್ನು ನೋಡಿ ಅದನ್ನು ಗುರುತಿಸಿ, “ಹೌದು, ಇದು ಯೋಸೇಫನದೇ. ಯಾವುದೋ ಕ್ರೂರ ಪ್ರಾಣಿಯ ಬಾಯಿಗೆ ತುತ್ತಾದನು” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:33
10 ತಿಳಿವುಗಳ ಹೋಲಿಕೆ  

ಒಬ್ಬನು ನನ್ನ ಬಳಿಯಿಂದ ಹೋಗಿ ಬಿಟ್ಟನು. “ಅವನು ನಿಶ್ಚಯವಾಗಿ ಕಾಡುಮೃಗದಿಂದ ಸೀಳಿ ಸತ್ತಿರಬೇಕು,” ಎಂದು ಹೇಳಿದಿರಿ. ಅವನನ್ನು ನಾನು ಈ ದಿನದವರೆಗೂ ನೋಡಲಿಲ್ಲ.


ಬನ್ನಿರಿ, ಈಗ ಅವನನ್ನು ಕೊಂದು, ಯಾವುದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ. ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ,” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.


ಯೇಸು ಅವನಿಗೆ, “ನಾನು ಮಾಡುವುದು ಏನೆಂದು ಈಗ ನಿನಗೆ ಅರ್ಥವಾಗುವುದಿಲ್ಲ. ಆದರೆ ಇನ್ನು ಮುಂದೆ ನಿನಗೆ ಅರ್ಥವಾಗುವುದು,” ಎಂದರು.


ಅರಿವಿಲ್ಲದವರು ಯಾವ ಮಾತನ್ನಾದರೂ ನಂಬುತ್ತಾರೆ, ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.


ಅವನು ಹಿಂದಿರುಗಿ ಅವರನ್ನು ನೋಡಿ, ಯೆಹೋವ ದೇವರ ಹೆಸರಿನಲ್ಲಿ ಅವರನ್ನು ಶಪಿಸಿದನು. ಆಗ ಅಡವಿಯಿಂದ ಎರಡು ಕರಡಿಗಳು ಹೊರಟು, ಅವರಲ್ಲಿ ನಾಲ್ವತ್ತೆರಡು ಹುಡುಗರನ್ನು ಸೀಳಿಬಿಟ್ಟವು.


ಅವನು ಹೋದ ತರುವಾಯ, ಸಿಂಹವು ಅವನನ್ನು ದಾರಿಯಲ್ಲಿ ಹಿಡಿದು ಕೊಂದುಹಾಕಿತು. ಅವನ ಹೆಣ ದಾರಿಯಲ್ಲಿ ಬಿದ್ದಿತ್ತು. ಕತ್ತೆಯೂ ಮತ್ತು ಸಿಂಹವೂ ಹೆಣದ ಬಳಿಯಲ್ಲಿ ನಿಂತಿದ್ದವು.


ಆ ಬಣ್ಣದ ಅಂಗಿಯನ್ನು ಅವರು ತಮ್ಮ ತಂದೆಯ ಬಳಿಗೆ ತಂದು, “ಇದು ನಮಗೆ ಸಿಕ್ಕಿತು, ಇದು ನಿನ್ನ ಮಗನ ಅಂಗಿಯೋ ಏನೋ ನೋಡು,” ಎಂದು ಹೇಳಿದರು.


ಆದರೆ ಯಾಕೋಬನು, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು, ಅವನ ಅಣ್ಣ ಸತ್ತು ಹೋಗಿ, ಇವನೊಬ್ಬನೇ ಉಳಿದಿದ್ದಾನೆ. ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ, ನನ್ನ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ಇಳಿಸುವಿರಿ,” ಎಂದನು.


ನಾವು ನಮ್ಮ ಒಡೆಯನಿಗೆ, ‘ನಮಗೆ ಮುದುಕನಾದ ತಂದೆಯೂ ಅವನಿಗೆ ಮುಪ್ಪಿನಲ್ಲಿ ಹುಟ್ಟಿದ ಚಿಕ್ಕ ಮಗನೂ ಇದ್ದಾನೆ, ಅವನ ಸಹೋದರನು ಸತ್ತುಹೋಗಿದ್ದಾನೆ. ಅವನ ತಂದೆಯು ಅವನನ್ನು ಪ್ರೀತಿಸುತ್ತಾನೆ,’ ಎಂದು ಹೇಳಿದೆವು.


ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಮುಖವನ್ನು ಕಾಣುವೆನೆಂದು ನಾನು ನೆನಸಿರಲಿಲ್ಲ. ಆದರೆ ನಿನ್ನ ಸಂತಾನವನ್ನು ಸಹ ದೇವರು ನನಗೆ ಕಾಣುವಂತೆ ಅನುಗ್ರಹಿಸಿದ್ದಾನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು