Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:36 - ಕನ್ನಡ ಸಮಕಾಲಿಕ ಅನುವಾದ

36 ಇದರೊಂದಿಗೆ, ಆ ಮಿದ್ಯಾನ್ಯರು ಯೋಸೇಫನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡುಹೋಗಿ ಪೋಟೀಫರನಿಗೆ ಮಾರಿದರು. ಇವನು ಫರೋಹನ ಉದ್ಯೋಗಸ್ಥನೂ ಮೈಗಾವಲಿನ ದಳಪತಿಯೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ತೆಗೆದುಕೊಂಡು ಹೋಗಿ ಐಗುಪ್ತ ದೇಶದ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು. ಇವನು ಅರಸನ ಮೈಗಾವಲಿನವರ ದಳಪತಿಯೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಮಿದ್ಯಾನ್ಯರು ಜೋಸೆಫನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡುಹೋಗಿ ಫರೋಹನ ಆಸ್ಥಾನದಲ್ಲಿದ್ದ ಪೋಟೀಫರನಿಗೆ ಮಾರಿದರು; ಇವನು, ದೊಡ್ಡ ಉದ್ಯೋಗಸ್ಥನೂ ಮೈಗಾವಲಿನವರ ದಳಪತಿಯೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ವಿುದ್ಯಾನ್ಯರು ಯೋಸೇಫನನ್ನು ಐಗುಪ್ತದೇಶಕ್ಕೆ ತೆಗೆದುಕೊಂಡು ಹೋಗಿ ಫರೋಹನ ಬಳಿಯಲ್ಲಿದ್ದ ದೊಡ್ಡ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು; ಇವನು ಮೈಗಾವಲಿನವರ ದಳವಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಮಿದ್ಯಾನಿನ ವ್ಯಾಪಾರಿಗಳು ಯೋಸೇಫನನ್ನು ಈಜಿಪ್ಟಿನಲ್ಲಿ ಮಾರಿದರು. ಅವರು ಅವನನ್ನು ಫರೋಹನ ಕಾವಲುಗಾರರಿಗೆ ನಾಯಕನಾಗಿದ್ದ ಪೋಟೀಫರನಿಗೆ ಮಾರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:36
12 ತಿಳಿವುಗಳ ಹೋಲಿಕೆ  

ಮೈಗಾವಲಿನ ದಳಪತಿಯು ಅವರನ್ನೂ ನೋಡಿಕೊಳ್ಳುವದಕ್ಕೆ ಯೋಸೇಫನನ್ನು ನೇಮಿಸಿದ್ದರಿಂದ, ಅವನು ಅವರನ್ನು ನೋಡಿಕೊಳ್ಳುತ್ತಿದ್ದನು. ಅವರು ಕೆಲವು ಕಾಲ ಸೆರೆಯಲ್ಲಿದ್ದರು.


ಈ ಪ್ರಕಾರ ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ, ಅವರು ಯೋಸೇಫನನ್ನು ಗುಂಡಿಯಿಂದ ಮೇಲೆತ್ತಿ, ಇಷ್ಮಾಯೇಲರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು. ಅವರು ಯೋಸೇಫನನ್ನು ಈಜಿಪ್ಟಿಗೆ ಕರೆದುಕೊಂಡು ಹೋದರು.


ಯೆಹೋವ ದೇವರನ್ನು ಸೇರಿಕೊಂಡ ವಿದೇಶೀಯನು, “ಯೆಹೋವ ದೇವರು ತಮ್ಮ ಜನರಿಂದ ನನ್ನನ್ನು ಖಂಡಿತವಾಗಿ ಬಹಿಷ್ಕರಿಸುವರು,” ಎಂದು ಹೇಳದಿರಲಿ. ಮತ್ತು ನಪುಂಸಕನು, “ನಾನು ಕೇವಲ ಒಣಗಿದ ಮರ,” ಎಂದು ಹೇಳದಿರಲಿ.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದ ಐದನೆಯ ತಿಂಗಳಿನ, ಏಳನೆಯ ದಿನದಲ್ಲಿ ಬಾಬಿಲೋನಿನ ಅರಸನ ಸೇವಕನೂ, ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದು,


ಏಳನೆಯ ದಿವಸದಲ್ಲಿ ಅರಸನಾದ ಅಹಷ್ವೇರೋಷನು ದ್ರಾಕ್ಷಾರಸದಿಂದ ಅಮಲೇರಿದಾಗ ಬಹುರೂಪವತಿಯಾದ ವಷ್ಟಿ ರಾಣಿಯ ಸೌಂದರ್ಯವನ್ನು ಜನರಿಗೂ ಪ್ರಧಾನರಿಗೂ ಪ್ರದರ್ಶಿಸುವುದಕ್ಕೆ ರಾಣಿಗೆ ರಾಜಕಿರೀಟವನ್ನು ಧರಿಸಿಕೊಂಡು ತನ್ನ ಮುಂದೆ ಕರೆದುಕೊಂಡು ಬರುವುದಕ್ಕೆ ಅರಸನಾದ ಅಹಷ್ವೇರೋಷನ ಸಮ್ಮುಖದಲ್ಲಿ ಸೇವೆ ಮಾಡುವ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರಕಾಸ್ ಎಂಬ ಏಳುಮಂದಿ ಕಂಚುಕಿಗಳಿಗೆ ಹೇಳಿದನು.


ಅವರನ್ನು ಮೈಗಾವಲಿನವರ ದಳಪತಿಯ ಮನೆಯೊಳಗೆ ಕಾವಲಿರಿಸಿದನು. ಅದು ಯೋಸೇಫನು ಬಂಧಿಯಾಗಿದ್ದ ಸ್ಥಳವಾಗಿತ್ತು.


ಮೈಗಾವಲಿನ ದಳಪತಿಗೆ ಸೇವಕನಾಗಿದ್ದ ಹಿಬ್ರಿಯ ಯೌವನಸ್ಥನು ಅಲ್ಲಿ ನಮ್ಮ ಸಂಗಡ ಇದ್ದನು. ಅವನಿಗೆ ನಾವು ನಮ್ಮ ಕನಸುಗಳನ್ನು ತಿಳಿಸಿದಾಗ, ಅವನು ನಮ್ಮ ನಮ್ಮ ಕನಸಿನ ಅರ್ಥವನ್ನು ಹೇಳಿದನು.


ಆಗ ದೇವರು ಅವರ ಮುಂದೆ ಒಬ್ಬ ಮನುಷ್ಯನನ್ನು ಕಳುಹಿಸಿದರು. ಅವನೇ ದಾಸನಾಗಿ ಮಾರಲಾದ ಯೋಸೇಫನು.


ಆಗ ಪಟ್ಟಣದೊಳಗೆ ಉಳಿದವರನ್ನೂ, ಮೊದಲೇ ತನ್ನನ್ನು ಮೊರೆ ಹೋದವರನ್ನೂ, ಇತರ ಸಮಸ್ತ ಜನರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾನನು ಬಾಬಿಲೋನಿಗೆ ಸೆರೆಹಿಡಿದು ಕರೆದುಕೊಂಡು ಹೋದನು.


ಬಾಬಿಲೋನಿನ ಜ್ಞಾನಿಗಳನ್ನು ಕೊಲ್ಲಲು ಹೊರಟಿದ್ದ ಅರಸನ ಕಾವಲುಗಾರರ ಅಧಿಪತಿಯಾದ ಅರ್ಯೋಕನಿಗೆ ದಾನಿಯೇಲನು ಜ್ಞಾನದಿಂದಲೂ ಚಾತುರ್ಯದಿಂದಲೂ ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು