Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:8 - ಕನ್ನಡ ಸಮಕಾಲಿಕ ಅನುವಾದ

8 ಆಗ ಅವನ ಸಹೋದರರು ಅವನಿಗೆ, “ನೀನು ನಮ್ಮನ್ನು ನಿಶ್ಚಯವಾಗಿಯೂ ಆಳುವೆಯೋ? ನಿಜವಾಗಿ ನಮ್ಮ ಮೇಲೆ ದೊರೆತನ ಮಾಡುವಿಯೋ?” ಎಂದು ಹೇಳಿ, ಅವನ ಕನಸು ಮತ್ತು ಅವನ ಮಾತುಗಳಿಗೆ ಅವನನ್ನು ಮತ್ತಷ್ಟೂ ದ್ವೇಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅದಕ್ಕೆ ಅವನ ಅಣ್ಣಂದಿರು ಅವನಿಗೆ, “ನೀನು ನಿಜವಾಗಿ ನಮ್ಮನ್ನು ಆಳುವಿಯಾ? ನೀನು ನಮ್ಮ ಮೇಲೆ ದೊರೆತನ ಮಾಡುವಿಯಾ?” ಎಂದು ಹೇಳಿ ಅವನ ಕನಸುಗಳಿಗಾಗಿಯೂ, ಅದನ್ನು ಅವನು ಅವರಿಗೆ ತಿಳಿಸಿದ್ದಕ್ಕಾಗಿಯು ಮತ್ತಷ್ಟು ಅವನನ್ನು ದ್ವೇಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅದಕ್ಕೆ ಅವನ ಅಣ್ಣಂದಿರು, “ಏನು, ನೀನು ನಿಜವಾಗಿ ನಮ್ಮನ್ನು ಆಳುವೆಯಾ? ನಮ್ಮ ಮೇಲೆ ದೊರೆತನ ಮಾಡುವೆಯಾ?” ಎಂದು ಪ್ರಶ್ನಿಸಿದರು. ಅವನ ಕನಸುಗಳು, ಅವನ ಮಾತುಗಳು ಅವರನ್ನು ಮತ್ತಷ್ಟು ಹಗೆಗಳನ್ನಾಗಿ ಮಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅದಕ್ಕೆ ಅವನ ಅಣ್ಣಂದಿರು - ನೀನು ನಿಜವಾಗಿ ನಮ್ಮನ್ನು ಆಳುವಿಯಾ? ನೀನು ನಮ್ಮ ಮೇಲೆ ದೊರೆತನಮಾಡುವಿಯಾ ಎಂದು ಅವನಿಗೆ ಹೇಳಿ ಅವನ ಕನಸುಗಳಿಗಾಗಿಯೂ ಮಾತುಗಳಿಗಾಗಿಯೂ ಮತ್ತಷ್ಟು ಹಗೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವನ ಅಣ್ಣಂದಿರು, “ನೀನು ರಾಜನಾಗಿ ನಮ್ಮನ್ನು ಆಳುವೆ ಎಂಬುದು ಇದರ ಅರ್ಥವೆಂದು ನಿನ್ನ ಆಲೋಚನೆಯೋ?” ಎಂದು ಪ್ರಶ್ನಿಸಿ ಆ ಕನಸಿನ ನಿಮಿತ್ತ ಅವನನ್ನು ಮತ್ತಷ್ಟು ದ್ವೇಷಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:8
19 ತಿಳಿವುಗಳ ಹೋಲಿಕೆ  

“ ‘ನಿನ್ನನ್ನು ಅಧಿಕಾರಿಯನ್ನಾಗಿಯೂ ನ್ಯಾಯಾಧೀಶನನ್ನಾಗಿಯೂ ನೇಮಿಸಿದವರು ಯಾರು?’ ಎಂಬ ಮಾತುಗಳಿಂದ ಇಸ್ರಾಯೇಲರು ತಿರಸ್ಕರಿಸಿದಂಥ ಆ ಮೋಶೆಯೇ ಇವನು. ಉರಿಯುವ ಪೊದೆಯಲ್ಲಿ ದರ್ಶನ ಕೊಟ್ಟು ದೇವದೂತನ ಮುಖಾಂತರವಾಗಿ ದೇವರೇ ಇವನನ್ನು ಅವರ ಅಧಿಕಾರಿಯನ್ನಾಗಿಯೂ ವಿಮೋಚಕನ್ನಾಗಿಯೂ ಕಳುಹಿಸಿದರು.


ಆದರೆ ಕೆಲವು ಪುಂಡಪೋಕರಿಗಳು, “ಇವನು ನಮ್ಮನ್ನು ರಕ್ಷಿಸುವುದೇನು?” ಎಂದು ಅವನನ್ನು ತಿರಸ್ಕರಿಸಿದರು. ಅವರು ಅವನಿಗೆ ಕಾಣಿಕೆಯನ್ನು ತೆಗೆದುಕೊಂಡು ಬರಲಿಲ್ಲ. ಅವನು ಕೇಳದ ಹಾಗೆ ಇದ್ದನು.


ಯಾವನು ದೇವಪುತ್ರರನ್ನೇ ತುಳಿದು ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಪವಿತ್ರಾತ್ಮ ದೇವರನ್ನು ತಿರಸ್ಕಾರ ಮಾಡಿದ್ದಾನೋ, ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗುವನೆಂಬುದನ್ನು ಯೋಚಿಸಿರಿ.


ಆಗ ಯೇಸು ಅವರನ್ನು ದಿಟ್ಟಿಸಿ ನೋಡಿ, “ಹಾಗಾದರೆ, “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು,’ ಎಂದು ಪವಿತ್ರ ವೇದದಲ್ಲಿ ಬರೆದಿರುವುದರ ಅರ್ಥ ಏನು?


“ಆದರೆ ಅವನ ನಾಡಿನವರೋ ಅವನನ್ನು ದ್ವೇಷಿಸುತ್ತಿದ್ದರು. ‘ಇವನು ನಮ್ಮ ಅರಸನಾಗುವುದು ಬೇಡ,’ ಎಂದು ತಿಳಿಸಲು ಅವನ ಹಿಂದೆಯೇ ಪ್ರತಿನಿಧಿಗಳನ್ನು ಕಳುಹಿಸಿದರು.


ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.


ದಾವೀದನು ಆ ಮನುಷ್ಯರ ಸಂಗಡ ಮಾತನಾಡುತ್ತಿರುವುದನ್ನು ಅವನ ಹಿರಿಯ ಸಹೋದರನಾದ ಎಲೀಯಾಬನು ಕೇಳಿ, ಅವನ ಮೇಲೆ ಕೋಪಗೊಂಡು, “ನೀನು ಇಲ್ಲಿಗೆ ಬಂದದ್ದೇನು? ಅಡವಿಯಲ್ಲಿರುವ ಆ ಸ್ವಲ್ಪ ಕುರಿಗಳನ್ನು ಯಾರ ವಶಕ್ಕೆ ಒಪ್ಪಿಸಿ ಬಂದೆ? ನಿನ್ನ ಗರ್ವವನ್ನೂ, ನಿನ್ನ ಹೃದಯದ ಅಹಂಕಾರವನ್ನೂ ನಾನು ಬಲ್ಲೆನು. ಏಕೆಂದರೆ ಯುದ್ಧವನ್ನು ನೋಡಲು ಇಳಿದು ಬಂದಿದ್ದೀ,” ಎಂದನು.


ಅದಕ್ಕವನು, “ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿದ್ದಾರೆ? ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದು ಹಾಕಬೇಕೆಂದಿದ್ದೀಯೋ?” ಎಂದನು. ಆಗ ಮೋಶೆಯು ಭಯಪಟ್ಟು, “ನಿಶ್ಚಯವಾಗಿ ನಾನು ಮಾಡಿದ ಕಾರ್ಯವು ತಿಳಿದಿರಬೇಕು,” ಎಂದುಕೊಂಡನು.


ಪುರಾತನ ಪರ್ವತಗಳ ಆಶೀರ್ವಾದಗಳಿಗಿಂತ ನಿನ್ನ ತಂದೆಯ ಆಶೀರ್ವಾದಗಳು ಶ್ರೇಷ್ಠವಾದವುಗಳು. ಅವು ಪುರಾತನ ಶಿಖರಗಳ ಐಶ್ವರ್ಯಕ್ಕಿಂತ ಹೆಚ್ಚಿನವುಗಳು. ಇವೆಲ್ಲವೂ ಯೋಸೇಫನ ತಲೆಯ ಮೇಲೆ ಅಂದರೆ, ತನ್ನ ಸಹೋದರರಲ್ಲಿ ರಾಜಕುಮಾರನಾದವನ ಹಣೆಯ ಮೇಲಿರಲಿ.


ತಮ್ಮ ತಂದೆಯು ಅವನನ್ನು ಎಲ್ಲಾ ಸಹೋದರರಿಗಿಂತ ಹೆಚ್ಚು ಪ್ರೀತಿಮಾಡುತ್ತಿರುವುದನ್ನು ಅವನ ಸಹೋದರರು ಕಂಡು, ಅವನನ್ನು ದ್ವೇಷಿಸಿ, ಅವನ ಸಂಗಡ ಸಮಾಧಾನದಿಂದ ಮಾತಾಡದೆಹೋದರು.


ಏಸಾವನು ತನ್ನ ತಂದೆಯು ಅವನಿಗೆ ಕೊಟ್ಟ ಆಶೀರ್ವಾದಕ್ಕೋಸ್ಕರ ಯಾಕೋಬನನ್ನು ದ್ವೇಷಿಸಿದನು. ಏಸಾವನು, “ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸಮೀಪವಾಗಿವೆ. ತರುವಾಯ ನಾನು ನನ್ನ ಸಹೋದರ ಯಾಕೋಬನನ್ನು ಕೊಲ್ಲುವೆನು,” ಎಂದು ತನ್ನಲ್ಲಿಯೇ ಅಂದುಕೊಂಡನು.


ಇದಲ್ಲದೆ ಅವನು ಇನ್ನೊಂದು ಕನಸನ್ನು ಕಂಡು ತನ್ನ ಸಹೋದರರಿಗೆ, “ಇನ್ನೊಂದು ಕನಸನ್ನು ಕಂಡಿದ್ದೇನೆ. ಸೂರ್ಯನೂ ಚಂದ್ರನೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು,” ಎಂದನು.


ಅದಕ್ಕವರು, “ಅಲ್ಲ, ನಮ್ಮ ಒಡೆಯಾ, ನಿನ್ನ ದಾಸರಾದ ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕೆ ಬಂದಿದ್ದೇವೆ.


ಯೆಹೂದನು ಅವನ ಸಮೀಪಕ್ಕೆ ಬಂದು, “ನನ್ನ ಒಡೆಯನೇ, ನನ್ನ ಒಡೆಯನ ಕಿವಿಗಳಲ್ಲಿ ಒಂದು ಮಾತು ಹೇಳುವುದಕ್ಕೆ ನಿನ್ನ ದಾಸನಿಗೆ ಅಪ್ಪಣೆಯಾಗಬೇಕು. ನಿನ್ನ ದಾಸನ ಮೇಲೆ ನಿನ್ನ ಕೋಪವು ಉರಿಯದೆ ಇರಲಿ. ಏಕೆಂದರೆ ನೀನು ಫರೋಹನಿಗೆ ಸಮಾನನು.


ಆಮೇಲೆ ಅವನ ಸಹೋದರರು ಬಂದು ಅವನ ಮುಂದೆ ಅಡ್ಡಬಿದ್ದು, “ನಿನ್ನ ದಾಸರಾಗಿದ್ದೇವೆ,” ಎಂದರು.


ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆಯುವ ಫಲಗಳಲ್ಲಿ ಉತ್ಕೃಷ್ಟವಾದುದೆಲ್ಲವೂ ಸುಡುವ ಪೊದೆಯಲ್ಲಿ ವಾಸವಾಗಿದ್ದ ದೇವರ ದಯೆಯೂ ಯೋಸೇಫನ ತಲೆಯ ಮೇಲೆ ನೆಲೆಗೊಳ್ಳಲಿ. ಅವನು ತನ್ನ ಸಹೋದರರಲ್ಲಿ ರಾಜಕುಮಾರನಾಗಿರುವನು. ಕುಲದವರ ಶಿರಸ್ಸಾಗಿರುವ ಅವನ ಮೇಲೆ ಆಶೀರ್ವಾದ ಉಂಟಾಗಲಿ.


ಇದರಿಂದ ಸೌಲನಿಗೆ ಬಹು ಕೋಪವಾಯಿತು. ಆ ಹಾಡಿನಿಂದ ಅವನಿಗೆ ಬಹುಬೇಸರವಾಯಿತು. “ಇವರು ದಾವೀದನಿಗೆ ಹತ್ತು ಸಾವಿರಗಳಷ್ಟು ಎಂದು ಹಾಡಿದ್ದಾರೆ; ನನಗೆ ಸಾವಿರಗಳಷ್ಟೇ ಎಂದು ಹಾಡಿದ್ದಾರೆ; ಹಾಗಾದರೆ, ಅವನಿಗೆ ರಾಜ್ಯವಲ್ಲದೆ ಇನ್ನು ಆಗಬೇಕಾದದ್ದೇನು?” ಎಂದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು