Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:9 - ಕನ್ನಡ ಸಮಕಾಲಿಕ ಅನುವಾದ

9 ಇದಲ್ಲದೆ ಅವನು ಇನ್ನೊಂದು ಕನಸನ್ನು ಕಂಡು ತನ್ನ ಸಹೋದರರಿಗೆ, “ಇನ್ನೊಂದು ಕನಸನ್ನು ಕಂಡಿದ್ದೇನೆ. ಸೂರ್ಯನೂ ಚಂದ್ರನೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನು ಇನ್ನೊಂದು ಕನಸನ್ನು ಕಂಡನು. ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದನು. ಅವನು ಅವರಿಗೆ, “ಇನ್ನೊಂದು ಕನಸು ಕಂಡಿದ್ದೇನೆ. ಅದರಲ್ಲಿ ಸೂರ್ಯಚಂದ್ರರೂ, ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡ ಬಿದ್ದವು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಜೋಸೆಫನಿಗೆ ಇನ್ನೊಂದು ಕನಸು ಬಿತ್ತು. ಅದನ್ನೂ ಅವನು ಅಣ್ಣಂದಿರಿಗೆ ತಿಳಿಸಿದ: “ನಾನು ಇನ್ನೊಂದು ಕನಸು ಕಂಡಿದ್ದೇನೆ. ಅದರಲ್ಲಿ ಸೂರ್ಯ, ಚಂದ್ರ, ಹಾಗೂ ನಕ್ಷತ್ರಗಳೂ ನನಗೆ ಅಡ್ಡಬಿದ್ದವು,” ಎಂದು ಹೇಳಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವನು ಇನ್ನೊಂದು ಕನಸು ಕಂಡು ಅದನ್ನೂ ತನ್ನ ಅಣ್ಣಂದಿರಿಗೆ ತಿಳಿಸಿದನು. ಅವನು ಅವರಿಗೆ - ಇನ್ನೊಂದು ಕನಸು ಕಂಡಿದ್ದೇನೆ; ಅದರಲ್ಲಿ ಸೂರ್ಯಚಂದ್ರರೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಮೇಲೆ ಯೋಸೇಫನಿಗೆ ಮತ್ತೊಂದು ಕನಸಾಯಿತು. ಯೋಸೇಫನು ಈ ಕನಸಿನ ಬಗ್ಗೆಯೂ ತನ್ನ ಅಣ್ಣಂದಿರಿಗೆ ತಿಳಿಸಿದನು. ಯೋಸೇಫನು ಅವರಿಗೆ, “ನನಗೆ ಮತ್ತೊಂದು ಕನಸಾಯಿತು. ಸೂರ್ಯ, ಚಂದ್ರ ಮತ್ತು ಹನ್ನೊಂದು ನಕ್ಷತ್ರಗಳು ನನಗೆ ಅಡ್ಡಬೀಳುವುದನ್ನು ಕಂಡೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:9
19 ತಿಳಿವುಗಳ ಹೋಲಿಕೆ  

ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು. ನನ್ನ ಸಿವುಡು ಎದ್ದುನಿಂತಿತು. ಆಗ ನಿಮ್ಮ ಸಿವುಡುಗಳು ತಿರುಗಿ ನನ್ನ ಸಿವುಡಿಗೆ ಅಡ್ಡಬಿದ್ದವು,” ಎಂದನು.


ಹೀಗೆ ನೀವು ನಿಂದಾರಹಿತರೂ ದೋಷವಿಲ್ಲದವರೂ, “ನಿಷ್ಕಳಂಕರಾದ ದೇವರ ಮಕ್ಕಳಾಗಿ, ವಕ್ರವಾದ ದುಷ್ಟ ಜನಾಂಗದ ಮಧ್ಯದಲ್ಲಿ,” ಜೀವವಾಕ್ಯವನ್ನು ಹಿಡಿದುಕೊಂಡು, ಲೋಕದಲ್ಲಿ ನಕ್ಷತ್ರಗಳಂತೆ ಹೊಳೆಯುವವರಾಗಿರುವಿರಿ.


ಅದು ಆಕಾಶದ ಸೈನ್ಯದ ಎತ್ತರಕ್ಕೂ ಬೆಳೆದು, ಆ ಸೈನ್ಯದಲ್ಲಿಯೂ, ನಕ್ಷತ್ರಗಳಲ್ಲಿಯೂ ಕೆಲವನ್ನು ನೆಲಕ್ಕೆ ತಳ್ಳಿ, ಅವುಗಳನ್ನು ತುಳಿದು ಹಾಕಿತು.


ಯೋಸೇಫನು ತನ್ನ ತಂದೆಯನ್ನೂ, ತನ್ನ ಸಹೋದರರನ್ನೂ, ತನ್ನ ತಂದೆಯ ಮನೆಯವರೆಲ್ಲರನ್ನೂ ಅವರ ಮಕ್ಕಳ ಲೆಕ್ಕದ ಪ್ರಕಾರ ಆಹಾರಕೊಟ್ಟು, ಅವರನ್ನು ಸಂರಕ್ಷಿಸಿದನು.


ಆಗ ಯೋಸೇಫನು ತನ್ನ ರಥವನ್ನು ಸಿದ್ಧಮಾಡಿಕೊಂಡು, ತನ್ನ ತಂದೆ ಇಸ್ರಾಯೇಲನಿಗೆ ಎದುರಾಗಿ ಗೋಷೆನಿಗೆ ಹೋದನು. ಯೋಸೇಫನು ತನ್ನ ತಂದೆಯನ್ನು ಸಂಧಿಸಿ, ಅಪ್ಪಿಕೊಂಡು, ಬಹಳ ಹೊತ್ತಿನವರೆಗೆ ಅತ್ತನು.


ನೀವು ಶೀಘ್ರವಾಗಿ ನನ್ನ ತಂದೆಯ ಬಳಿಗೆ ಹೊರಟುಹೋಗಿ, ‘ನಿನ್ನ ಮಗ ಯೋಸೇಫನನ್ನು ದೇವರು ಈಜಿಪ್ಟಿಗೆಲ್ಲಾ ಪ್ರಭುವನ್ನಾಗಿ ಮಾಡಿದ್ದಾರೆ, ತಡಮಾಡದೆ ನನ್ನ ಬಳಿಗೆ ಬೇಗ ಬಾ.


ನನ್ನ ಒಡೆಯನೇ, ‘ನಿಮಗೆ ತಂದೆಯೂ ಸಹೋದರರೂ ಇದ್ದಾರೋ,’ ಎಂದು ತನ್ನ ದಾಸರನ್ನು ಕೇಳಲು,


ಯೆಹೂದನೂ ಅವನ ಸಹೋದರರೂ ಯೋಸೇಫನು ಇನ್ನೂ ಮನೆಯಲ್ಲಿದ್ದಾಗಲೇ, ಅವನ ಮನೆಗೆ ಬಂದು ಮುಂದೆ ಅಡ್ಡಬಿದ್ದರು.


ಅದಕ್ಕವರು, “ನಿನ್ನ ದಾಸನಾದ ನಮ್ಮ ತಂದೆಯು ಕ್ಷೇಮದಿಂದಿದ್ದಾನೆ, ಅವನು ಇನ್ನೂ ಬದುಕಿದ್ದಾನೆ,” ಎಂದು ಹೇಳಿ ತಮ್ಮ ತಲೆಗಳನ್ನು ಮತ್ತೆ ಬಾಗಿಸಿ ವಂದಿಸಿದರು.


ಇದಲ್ಲದೆ ಆ ಕನಸು ಫರೋಹನಿಗೆ ಎರಡು ಸಾರಿ ಬಿದ್ದುದರಿಂದ, ಆ ಕಾರ್ಯವು ದೇವರಿಂದ ಸ್ಥಿರಪಡಿಸಲಾಗಿದೆ. ಆದ್ದರಿಂದ ದೇವರು ಅದನ್ನು ಬೇಗನೆ ನೆರವೇರಿಸುವರು.


ಆಗ ಯೋಸೇಫನು ಫರೋಹನಿಗೆ, “ಫರೋಹನ ಎರಡು ಕನಸುಗಳ ವಿಷಯ ಒಂದೇ, ದೇವರು ಮಾಡಲಿರುವುದನ್ನು ಫರೋಹನಿಗೆ ತಿಳಿಸಿದ್ದಾರೆ.


ಅವನು ತನ್ನ ತಂದೆಗೂ ತನ್ನ ಸಹೋದರರಿಗೂ ತಿಳಿಸಿದಾಗ, ಅವನ ತಂದೆಯು ಅವನನ್ನು ಗದರಿಸಿ, “ನೀನು ಕಂಡ ಈ ಕನಸು ಏನು? ನಾನು, ನಿನ್ನ ತಾಯಿ, ನಿನ್ನ ಸಹೋದರರೂ ನಿಜವಾಗಿ ನಿನ್ನ ಮುಂದೆ ಅಡ್ಡ ಬೀಳುವುದಕ್ಕೆ ಬರಬೇಕೋ?” ಎಂದನು.


ಆಗ ಅವನ ಸಹೋದರರು ಅವನಿಗೆ, “ನೀನು ನಮ್ಮನ್ನು ನಿಶ್ಚಯವಾಗಿಯೂ ಆಳುವೆಯೋ? ನಿಜವಾಗಿ ನಮ್ಮ ಮೇಲೆ ದೊರೆತನ ಮಾಡುವಿಯೋ?” ಎಂದು ಹೇಳಿ, ಅವನ ಕನಸು ಮತ್ತು ಅವನ ಮಾತುಗಳಿಗೆ ಅವನನ್ನು ಮತ್ತಷ್ಟೂ ದ್ವೇಷಿಸಿದರು.


ಆದರೆ ದೇವರು ಅಬೀಮೆಲೆಕನಿಗೆ ರಾತ್ರಿಯ ಕನಸಿನಲ್ಲಿ ಬಂದು, “ನೀನು ಆ ಸ್ರೀಯನ್ನು ತೆಗೆದುಕೊಂಡ ಕಾರಣ ಸಾಯತಕ್ಕವನಾಗಿದ್ದಿ, ಏಕೆಂದರೆ ಆಕೆಯು ಆ ಮನುಷ್ಯನ ಹೆಂಡತಿ,” ಎಂದು ಅವನಿಗೆ ಹೇಳಿದರು.


ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರುವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು, ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.


ಯೋಸೇಫನು ಮನೆಗೆ ಬಂದ ಮೇಲೆ, ತಮ್ಮ ಕೈಗಳಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತೆಗೆದುಕೊಂಡು ಬಂದು, ಅವನಿಗೆ ನೆಲದವರೆಗೂ ಅಡ್ಡಬಿದ್ದರು.


ಯೆಹೋವ ದೇವರು ಅವರಿಗೆ ಹೀಗೆ ಹೇಳಿದನು, “ನನ್ನ ಮಾತುಗಳನ್ನು ಈಗ ಕೇಳಿರಿ: “ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಯೆಹೋವ ದೇವರಾದ ನಾನು ದರ್ಶನದಲ್ಲಿ ಪ್ರಕಟಿಸುವೆನು, ಇಲ್ಲವೆ ಕನಸಿನಲ್ಲಿಯೂ ನಾನು ಅವನೊಡನೆ ಮಾತನಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು