Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:1 - ಕನ್ನಡ ಸಮಕಾಲಿಕ ಅನುವಾದ

1 ಆ ಕಾಲದಲ್ಲಿ ಯೆಹೂದನು ತನ್ನ ಸಹೋದರರ ಬಳಿಯಿಂದ ಹೊರಟು, ಅದುಲ್ಲಾಮೂರಿನವನಾದ ಹೀರಾನ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ಕಾಲದಲ್ಲಿ ಯೆಹೂದನು ತನ್ನ ಅಣ್ಣತಮ್ಮಂದಿರನ್ನು ಬಿಟ್ಟು ಗಟ್ಟಾ ಇಳಿದು ಅದುಲ್ಲಾಮಿನ ಊರಿನವನಾದ ಹೀರಾ ಎಂಬುವವನ ಹತ್ತಿರ ಉಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇತ್ತ ಯೆಹೂದನು ತನ್ನ ಅಣ್ಣತಮ್ಮಂದಿರನ್ನು ಬಿಟ್ಟು ಅದುಲ್ಲಾಮ್ ಊರಿನವನಾದ ಹೀರಾ ಎಂಬವನ ಬಳಿ ವಾಸಮಾಡಲು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆ ಕಾಲದಲ್ಲಿ ಯೆಹೂದನು ತನ್ನ ಅಣ್ಣತಮ್ಮಂದಿರನ್ನು ಬಿಟ್ಟು ಗಟ್ಟಾ ಇಳಿದು ಅದುಲ್ಲಾಮೂರಿನವನಾದ ಹೀರಾ ಎಂಬವನ ಹತ್ತಿರ ಇದ್ದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆ ಕಾಲದಲ್ಲಿ ಯೆಹೂದನು ತನ್ನ ಸಹೋದರರನ್ನು ಬಿಟ್ಟು ಹೀರಾ ಎಂಬುವನೊಂದಿಗೆ ವಾಸಿಸಲು ಹೋದನು. ಅವನು ಅದುಲ್ಲಾಮ್ ಊರಿನವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:1
12 ತಿಳಿವುಗಳ ಹೋಲಿಕೆ  

ಒಂದು ದಿನ ಎಲೀಷನು ಶೂನೇಮಿಗೆ ಹೋದನು. ಅಲ್ಲಿ ಒಬ್ಬಳು ಶ್ರೀಮಂತ ಸ್ತ್ರೀಯು ಇದ್ದಳು. ಅವಳು ಅವನನ್ನು ಊಟ ಮಾಡಲು ಬಲವಂತ ಮಾಡಿದಳು. ಹಾಗೆಯೇ ಅವನು ಆ ಮಾರ್ಗವಾಗಿ ಹೋಗುವಾಗಲೆಲ್ಲಾ, ಅಲ್ಲಿ ಊಟ ಮಾಡಲು ಹೋಗುತ್ತಿದ್ದನು.


ದಾವೀದನು ಆ ಸ್ಥಳದಿಂದ ತಪ್ಪಿಸಿಕೊಂಡು ಅದುಲ್ಲಾಮ್ ಎಂಬ ಗವಿಗೆ ಬಂದನು. ಆ ವರ್ತಮಾನವನ್ನು ಅವನ ಸಹೋದರರೂ, ಅವನ ತಂದೆಯ ಮನೆಯವರೆಲ್ಲರೂ ಕೇಳಿ, ಅವನ ಬಳಿಗೆ ಅಲ್ಲಿಗೆ ಬಂದರು.


ಮಾರೇಷದ ನಿವಾಸಿಯೇ, ನಿನಗೆ ವಿರೋಧವಾಗಿ ಜಯಶಾಲಿಗಳನ್ನು ನಾನು ತರುವೆನು. ಇಸ್ರಾಯೇಲಿನ ಮಹಿಮೆಯಾದಾತನು ಅದುಲ್ಲಾಮಿನ ಮಟ್ಟಿಗೂ ಬರುವನು.


ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗುವನು; ಆದರೆ ಮೂರ್ಖರ ಜೊತೆಗಾರನು ಸಂಕಟಪಡುವನು.


ಯರ್ಮೂತ್, ಅದುಲ್ಲಾಮ್, ಸೋಕೋ, ಅಜೇಕಾ,


“ನಿಮ್ಮ ಮೂಢತ್ವವನ್ನು ಬಿಟ್ಟು ಬಾಳಿರಿ ಮತ್ತು ವಿವೇಕದ ಮಾರ್ಗದಲ್ಲಿ ಹೋಗು,” ಎಂದೂ ಕೂಗುತ್ತಾಳೆ.


ಮೂವತ್ತು ಮಂದಿ ಪರಾಕ್ರಮಶಾಲಿಗಳ ಮುಖ್ಯಸ್ಥರಲ್ಲಿ ಮೂರು ಮಂದಿ ಹೊರಟು ಸುಗ್ಗಿಯ ಕಾಲದಲ್ಲಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿಗೆ ಬಂದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಿತ್ತು.


ಆಗ ಯಾಯೇಲಳು ಸೀಸೆರನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಒಳಗೆ ಬಾ, ನನ್ನ ಪ್ರಭುವೇ, ನಮ್ಮ ಬಳಿಗೆ ಬಾ, ಭಯಪಡಬೇಡ,” ಎಂದು ಹೇಳಿದಳು. ಅವನನ್ನು ಒಂದು ಕಂಬಳಿಯಿಂದ ಮುಚ್ಚಿದಳು.


ಲಿಬ್ನದ ಅರಸನು. ಅದುಲ್ಲಾಮಿನ ಅರಸನು.


ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ಸತ್ತಳು. ಯೆಹೂದನು ಆದರಣೆ ಹೊಂದಿದ ಮೇಲೆ, ತಾನೂ, ತನ್ನ ಸ್ನೇಹಿತನಾಗಿರುವ ಅದುಲ್ಲಾಮ್ಯನಾದ ಹೀರಾನನೂ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವವರ ಬಳಿಗೆ ತಿಮ್ನಾ ಊರಿಗೆ ಹೋದರು.


ಯೆಹೂದನು ಆ ಸ್ತ್ರೀಯ ಕೈಯಿಂದ ಈಡು ತೆಗೆದುಕೊಳ್ಳುವದಕ್ಕೆ ತನ್ನ ಸ್ನೇಹಿತನಾದ ಅದುಲ್ಲಾಮ್ಯನ ಕೈಯಿಂದ ಮೇಕೆಯ ಮರಿಯನ್ನು ಕಳುಹಿಸಿದಾಗ ಆಕೆಯು ಸಿಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು