Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:11 - ಕನ್ನಡ ಸಮಕಾಲಿಕ ಅನುವಾದ

11 ಆಗ ಯೆಹೂದನು ತನ್ನ ಸೊಸೆ ತಾಮಾರಳಿಗೆ, “ನನ್ನ ಮಗ ಶೇಲಹನು ದೊಡ್ಡವನಾಗುವವರೆಗೆ ವಿಧವೆಯಾಗಿದ್ದು, ನಿನ್ನ ತಂದೆಯ ಮನೆಯಲ್ಲಿರು,” ಎಂದನು. ಏಕೆಂದರೆ ಇವನು ಸಹ ತನ್ನ ಸಹೋದರರ ಹಾಗೆ ಸತ್ತಾನೆಂದು ಅಂದುಕೊಂಡನು. ತಾಮಾರಳಾದರೋ ಹೋಗಿ ತನ್ನ ತಂದೆಯ ಮನೆಯಲ್ಲಿ ವಾಸಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ಮೇಲೆ ಯೆಹೂದನು ಒಂದು ವೇಳೆ ಶೇಲಹನು ತನ್ನ ಅಣ್ಣಂದಿರಂತೆಯೇ ಸತ್ತಾನೆಂದು ಯೋಚಿಸಿ ತನ್ನ ಸೊಸೆಯಾದ ತಾಮಾರಳಿಗೆ, “ನನ್ನ ಮಗನಾದ ಶೇಲಹನು ಪ್ರಾಯಸ್ಥನಾಗುವ ತನಕ ನೀನು ವಿಧವೆಯಾಗಿದ್ದು ನಿನ್ನ ತಂದೆಯ ಮನೆಯಲ್ಲಿರು” ಎಂದು ಹೇಳಿದನು. ಅವಳು ತಂದೆಯ ಮನೆಗೆ ಹೋಗಿ ಅಲ್ಲೇ ವಾಸಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅನಂತರ ಯೆಹೂದನು, ಬಹುಶಃ ಶೇಲಹನು ಕೂಡ ತನ್ನ ಅಣ್ಣಂದಿರಂತೆ ಸತ್ತಾನೆಂದು ಆಲೋಚಿಸಿ, ತನ್ನ ಸೊಸೆ ತಾಮಾರಳಿಗೆ, “ನನ್ನ ಮಗ ಶೇಲಹನು ಪ್ರಾಯಸ್ಥನಾಗುವ ತನಕ ನೀನು ವಿಧವೆಯಾಗಿ ತೌರುಮನೆಯಲ್ಲಿರು,” ಎಂದು ನೆವಹೇಳಿದನು. ಅಂತೆಯೇ ಅವಳು ತೌರುಮನೆಗೆ ಹೋಗಿ ಅಲ್ಲೇ ವಾಸಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಮೇಲೆ ಯೆಹೂದನು - ಒಂದು ವೇಳೆ ಶೇಲಹನೂ ತನ್ನ ಅಣ್ಣಂದಿರಂತೆಯೇ ಸತ್ತಾನೆಂದು ಯೋಚಿಸಿ ತನ್ನ ಸೊಸೆಯಾದ ತಾಮಾರಳಿಗೆ - ನನ್ನ ಮಗನಾದ ಶೇಲಹನು ಪ್ರಾಯಸ್ಥನಾಗುವ ತನಕ ನೀನು ವಿಧವೆಯಾಗಿ ತೌರಮನೆಯಲ್ಲಿರು ಎಂದು ನೆವ ಹೇಳಿದನು. ಅವಳು ತೌರಮನೆಗೆ ಹೋಗಿ ಅಲ್ಲೇ ವಾಸಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ಯೆಹೂದನು ತನ್ನ ಸೊಸೆಯಾದ ತಾಮಾರಳಿಗೆ, “ನಿನ್ನ ತಂದೆಯ ಮನೆಗೆ ಹಿಂತಿರುಗಿ ಹೋಗಿ ಅಲ್ಲಿರು. ನನ್ನ ಮಗನಾದ ಶೇಲಹನು ದೊಡ್ಡವನಾಗುವ ತನಕ ಮದುವೆಯಾಗಬೇಡ” ಎಂದು ಹೇಳಿದನು. ಶೇಲಹನು ಸಹ ತನ್ನ ಅಣ್ಣಂದಿರಂತೆ ಸಾಯಬಹುದೆಂದು ಯೆಹೂದನು ಹೆದರಿಕೊಂಡಿದ್ದನು. ಆದ್ದರಿಂದ ತಾಮಾರಳು ತನ್ನ ತಂದೆಯ ಮನೆಗೆ ಹಿಂತಿರುಗಿ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:11
3 ತಿಳಿವುಗಳ ಹೋಲಿಕೆ  

ಯಾಜಕನ ಮಗಳು ವಿಧವೆಯಾಗಿದ್ದರೆ ಇಲ್ಲವೆ ಗಂಡಬಿಟ್ಟವಳಾಗಿದ್ದರೆ ಮತ್ತು ಮಕ್ಕಳಿಲ್ಲದವಳಾಗಿ ತನ್ನ ಯೌವನದಲ್ಲಿದ್ದಂತೆಯೇ ತನ್ನ ತಂದೆಯ ಮನೆಗೆ ಹಿಂದಿರುಗಿದವಳಾಗಿದ್ದರೆ, ಅವಳು ತನ್ನ ತಂದೆಯ ಆಹಾರದಲ್ಲಿ ತಿನ್ನಲಿ. ಆದರೆ ಯಾಜಕರಲ್ಲದ ಕುಟುಂಬದವರು ಅದರಲ್ಲಿ ತಿನ್ನಬಾರದು.


ಆಕೆಯು ವಿಧವೆಯ ವಸ್ತ್ರಗಳನ್ನು ತೆಗೆದಿಟ್ಟು, ಮುಸುಕುಹಾಕಿ ಮುಚ್ಚಿಕೊಂಡು, ತಿಮ್ನಾ ಊರಿನ ಮಾರ್ಗದಲ್ಲಿರುವ ಏನಯಿಮೂರಿನ ಬಹಿರಂಗ ಸ್ಥಳದಲ್ಲಿ ಕೂತುಕೊಂಡಳು. ಏಕೆಂದರೆ ಶೇಲಹನು ದೊಡ್ಡವನಾಗಿದ್ದರೂ ತನ್ನನ್ನು ಅವನಿಗೆ ಹೆಂಡತಿಯಾಗಿ ಕೊಡಲಿಲ್ಲವೆಂದು ಹಾಗೆ ಮಾಡಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು