ಆದಿಕಾಂಡ 38:12 - ಕನ್ನಡ ಸಮಕಾಲಿಕ ಅನುವಾದ12 ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ಸತ್ತಳು. ಯೆಹೂದನು ಆದರಣೆ ಹೊಂದಿದ ಮೇಲೆ, ತಾನೂ, ತನ್ನ ಸ್ನೇಹಿತನಾಗಿರುವ ಅದುಲ್ಲಾಮ್ಯನಾದ ಹೀರಾನನೂ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವವರ ಬಳಿಗೆ ತಿಮ್ನಾ ಊರಿಗೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ತೀರಿಕೊಂಡಳು. ಯೆಹೂದನು ತನಗೆ ದುಃಖಶಮನವಾದ ಮೇಲೆ ತನ್ನ ಕುರಿಗಳ ಉಣ್ಣೆ ಕತ್ತರಿಸುವವರ ಬಳಿಗೆ ತನ್ನ ಸ್ನೇಹಿತನಾದ ಹೀರಾ ಎಂಬ ಅದುಲ್ಲಾಮ್ಯನ ಜೊತೆಯಲ್ಲಿ ಗಟ್ಟಾ ಹತ್ತಿ ತಿಮ್ನಾ ಊರಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ತೀರಿಹೋದಳು. ದುಃಖಶಮನವಾದ ಮೇಲೆ ಯೆಹೂದನು, ತನ್ನ ಕುರಿಗಳಿಗೆ ಉಣ್ಣೇ ಕತ್ತರಿಸುವವರಿದ್ದ ತಿಮ್ನಾ ಊರಿಗೆ ಹೋದನು. ಅದುಲ್ಲಾಮ್ಯದ ತನ್ನ ಗೆಳೆಯ ಹೀರಾ ಅವನ ಜೊತೆಯಲ್ಲಿ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ತೀರಿಹೋದಳು. ಯೆಹೂದನು ತನಗೆ ದುಃಖ ಶಮನವಾದ ಮೇಲೆ ತನ್ನ ಕುರಿಗಳ ಉಣ್ಣೇ ಕತ್ತರಿಸುವವರ ಬಳಿಗೆ ತನ್ನ ಸ್ನೇಹಿತನಾದ ಹೀರಾ ಎಂಬ ಅದುಲ್ಲಾಮ್ಯನ ಜೊತೆಯಲ್ಲಿ ಗಟ್ಟಾ ಹತ್ತಿ ತಿಮ್ನಾ ಊರಿಗೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆಮೇಲೆ ಬಹುದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ತೀರಿಕೊಂಡಳು. ಯೆಹೂದನು ತನ್ನ ದುಃಖದ ಸಮಯ ತೀರಿದ ಮೇಲೆ ಅದುಲ್ಲಾಮ್ಯದವನಾದ ತನ್ನ ಸ್ನೇಹಿತ ಹೀರಾನೊಂದಿಗೆ ತನ್ನ ಕುರಿಗಳ ಉಣ್ಣೆ ಕತ್ತರಿಸುವುದಕ್ಕಾಗಿ ತಿಮ್ನಾ ಊರಿಗೆ ಹೋದನು. ಅಧ್ಯಾಯವನ್ನು ನೋಡಿ |