Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:19 - ಕನ್ನಡ ಸಮಕಾಲಿಕ ಅನುವಾದ

19 ತರುವಾಯ ಅವಳು ಎದ್ದು ಹೋಗಿ, ಮುಸುಕನ್ನು ತೆಗೆದಿಟ್ಟು, ತನ್ನ ವಿಧವೆಯ ವಸ್ತ್ರಗಳನ್ನು ಹಾಕಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ತರುವಾಯ ಆಕೆ ತಾನು ಹಾಕಿಕೊಂಡಿದ್ದ ಮುಸುಕನ್ನು ತೆಗೆದಿಟ್ಟು ತಿರುಗಿ ವಿಧವೆಯ ವಸ್ತ್ರಗಳನ್ನು ಉಟ್ಟುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಮನೆಗೆ ಬಂದ ಮೇಲೆ ತಾನು ಹಾಕಿಕೊಂಡಿದ್ದ ಮುಸುಕನ್ನು ತೆಗೆದಿಟ್ಟು ವಿಧವೆಯ ವಸ್ತ್ರಗಳನ್ನು ಮತ್ತೆ ಉಟ್ಟುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಕೆ ಎದ್ದುಹೋದ ಮೇಲೆ ತಾನು ಹಾಕಿಕೊಂಡಿದ್ದ ಮುಸುಕನ್ನು ತೆಗೆದಿಟ್ಟು ತಿರಿಗಿ ವಿಧವಾವಸ್ತ್ರಗಳನ್ನು ಉಟ್ಟುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ತಾಮಾರಳು ಮನೆಗೆ ಹೋಗಿ ಮುಸುಕನ್ನು ತೆಗೆದುಹಾಕಿ ಮತ್ತೆ ವಿಧವಾವಸ್ತ್ರಗಳನ್ನು ಧರಿಸಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:19
5 ತಿಳಿವುಗಳ ಹೋಲಿಕೆ  

ಆಕೆಯು ವಿಧವೆಯ ವಸ್ತ್ರಗಳನ್ನು ತೆಗೆದಿಟ್ಟು, ಮುಸುಕುಹಾಕಿ ಮುಚ್ಚಿಕೊಂಡು, ತಿಮ್ನಾ ಊರಿನ ಮಾರ್ಗದಲ್ಲಿರುವ ಏನಯಿಮೂರಿನ ಬಹಿರಂಗ ಸ್ಥಳದಲ್ಲಿ ಕೂತುಕೊಂಡಳು. ಏಕೆಂದರೆ ಶೇಲಹನು ದೊಡ್ಡವನಾಗಿದ್ದರೂ ತನ್ನನ್ನು ಅವನಿಗೆ ಹೆಂಡತಿಯಾಗಿ ಕೊಡಲಿಲ್ಲವೆಂದು ಹಾಗೆ ಮಾಡಿದಳು.


ಅರಸನು ಅವಳಿಗೆ, “ನಿನಗೆ ಏನಾಯಿತು?” ಎಂದನು. ಅದಕ್ಕವಳು, “ನಾನು ನಿಶ್ಚಯವಾಗಿ ವಿಧವೆಯಾದ ಸ್ತ್ರೀಯು. ನನ್ನ ಗಂಡನು ಸತ್ತುಹೋಗಿದ್ದಾನೆ.


ಆದುದರಿಂದ ಯೋವಾಬನು ತೆಕೋವಗೆ ಮನುಷ್ಯರನ್ನು ಕಳುಹಿಸಿ, ಅಲ್ಲಿಂದ ಒಬ್ಬ ಜ್ಞಾನವುಳ್ಳ ಸ್ತ್ರೀಯನ್ನು ಕರಿಸಿ ಅವಳಿಗೆ, “ನೀನು ಗೋಳಾಡುವವಳ ಹಾಗೆ ನಟಿಸಿ, ದುಃಖ ವಸ್ತ್ರಗಳನ್ನು ಧರಿಸಿಕೋ; ತಲೆಗೆ ಎಣ್ಣೆಯನ್ನು ಹಚ್ಚಿಕೊಳ್ಳದೆ, ಸತ್ತವನಿಗೋಸ್ಕರ ಅನೇಕ ದಿವಸಗಳಿಂದ ದುಃಖಿಸುವವಳ ಹಾಗಿದ್ದು,


ಅದಕ್ಕೆ ಅವನು, “ನಿನಗೆ ಕೊಡತಕ್ಕ ಈಡು ಏನು?” ಎಂದಾಗ. ಅವಳು, “ನಿನ್ನ ಮುದ್ರೆಯೂ ನಿನ್ನ ದಾರವೂ ನಿನ್ನ ಕೈಯಲ್ಲಿರುವ ಕೋಲೂ,” ಎಂದಳು. ಆಗ ಅವನು ಅವುಗಳನ್ನು ಆಕೆಗೆ ಕೊಟ್ಟು, ಆಕೆಯನ್ನು ಕೂಡಿದನು. ಹೀಗೆ ಅವಳು ಅವನಿಂದ ಗರ್ಭಿಣಿಯಾದಳು.


ಯೆಹೂದನು ಆ ಸ್ತ್ರೀಯ ಕೈಯಿಂದ ಈಡು ತೆಗೆದುಕೊಳ್ಳುವದಕ್ಕೆ ತನ್ನ ಸ್ನೇಹಿತನಾದ ಅದುಲ್ಲಾಮ್ಯನ ಕೈಯಿಂದ ಮೇಕೆಯ ಮರಿಯನ್ನು ಕಳುಹಿಸಿದಾಗ ಆಕೆಯು ಸಿಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು