ಆದಿಕಾಂಡ 38:22 - ಕನ್ನಡ ಸಮಕಾಲಿಕ ಅನುವಾದ22 ಆಗ ಅವನು ಯೆಹೂದನ ಬಳಿಗೆ ತಿರುಗಿಬಂದು, “ಆಕೆಯು ನನಗೆ ಸಿಕ್ಕಲಿಲ್ಲ, ಇದಲ್ಲದೆ ಆ ಸ್ಥಳದ ಮನುಷ್ಯರು, ‘ಈ ಸ್ಥಳದಲ್ಲಿ ದೇವದಾಸಿ ಇರಲಿಲ್ಲ,’ ಎಂದು ಹೇಳಿದರು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅವನು ಯೆಹೂದನ ಬಳಿಗೆ ಹಿಂದಿರುಗಿ ಬಂದು, “ನಾನು ಅವಳನ್ನು ಕಾಣಲಿಲ್ಲ ಮತ್ತು ಅಲ್ಲಿ ವಿಚಾರಿಸಿದಾಗ ಆ ಊರಿನವರು ಅಲ್ಲಿ ಯಾವ ವೇಶ್ಯಾಸ್ತ್ರೀಯೂ ಇಲ್ಲವೆಂದರು” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅವನು ಯೆಹೂದನ ಬಳಿಗೆ ಹಿಂದಿರುಗಿ ಬಂದು, “ನಾನು ಅವಳನ್ನು ಕಾಣಲಿಲ್ಲ; ವಿಚಾರಿಸಿದಾಗ ಆ ಊರಿನವರು ಇಲ್ಲಿ ಯಾವ ವೇಶ್ಯೆಯೂ ಇಲ್ಲವೆಂದರು,” ಎಂದು ವರದಿಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅವನು ಯೆಹೂದನ ಬಳಿಗೆ ಹಿಂದಿರುಗಿಬಂದು - ನಾನು ಅವಳನ್ನು ಕಾಣಲಿಲ್ಲ. ಮತ್ತು ವಿಚಾರಿಸಿದಾಗ ಆ ಊರಿನವರು ಅಲ್ಲಿ ಯಾವ ದೇವದಾಸಿಯೂ ಇಲ್ಲವೆಂದರು ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆದ್ದರಿಂದ ಅವನು ಯೆಹೂದನ ಬಳಿಗೆ ಹಿಂತಿರುಗಿ ಬಂದು, “ನಾನು ಆ ವೇಶ್ಯೆಯನ್ನು ಕಂಡುಹಿಡಿಯಲಾಗಲಿಲ್ಲ. ಅದಲ್ಲದೆ ಆ ಸ್ಥಳದ ಗಂಡಸರು ಅಲ್ಲಿ ಒಬ್ಬ ವೇಶ್ಯೆಯೂ ಇಲ್ಲ ಎಂದು ಹೇಳಿದರು” ಅಂದನು. ಅಧ್ಯಾಯವನ್ನು ನೋಡಿ |