Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:7 - ಕನ್ನಡ ಸಮಕಾಲಿಕ ಅನುವಾದ

7 ಆದರೆ ಯೆಹೂದನ ಜೇಷ್ಠಪುತ್ರ ಏರನು ಯೆಹೋವ ದೇವರ ದೃಷ್ಟಿಯಲ್ಲಿ ದುಷ್ಟನಾಗಿದ್ದುದರಿಂದ, ಯೆಹೋವ ದೇವರು ಅವನನ್ನು ಸಾವಿಗೀಡುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಯೆಹೋವನ ದೃಷ್ಟಿಯಲ್ಲಿ ಕೆಟ್ಟವನಾಗಿದ್ದುದರಿಂದ ಯೆಹೋವನು ಅವನನ್ನು ಸಾಯುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದರೆ ಯೆಹೂದನ ಈ ಹಿರಿಯ ಮಗ ಸರ್ವೇಶ್ವರ ಸ್ವಾಮಿಯ ದೃಷ್ಟಿಯಲ್ಲಿ ಕೆಟ್ಟವನಾಗಿದ್ದನು. ಆದ್ದರಿಂದ ಸರ್ವೇಶ್ವರ ಅವನನ್ನು ಸಾವಿಗೀಡುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ಯೆಹೂದನ ಚೊಚ್ಚಲಮಗನಾದ ಏರನು ಯೆಹೋವನ ದೃಷ್ಟಿಯಲ್ಲಿ ಕೆಟ್ಟವನಾದ್ದರಿಂದ ಯೆಹೋವನು ಅವನನ್ನು ಸಾಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ಏರನು ಅನೇಕ ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ಯೆಹೋವನು ಅವನನ್ನು ಸಾಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:7
11 ತಿಳಿವುಗಳ ಹೋಲಿಕೆ  

ಯೆಹೂದನ ಪುತ್ರರು: ಏರ್, ಓನಾನ್, ಶೇಲಹ. ಈ ಮೂವರು ಅವನಿಗೆ ಶೂನನ ಮಗಳಾದ ಕಾನಾನ್ ದೇಶದವಳಿಂದ ಹುಟ್ಟಿದರು. ಯೆಹೂದನ ಚೊಚ್ಚಲಮಗನಾದ ಏರನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟವನಾದ್ದರಿಂದ, ದೇವರು ಅವನನ್ನು ಮರಣಕ್ಕೆ ಒಪ್ಪಿಸಿದರು.


ಯೆಹೂದನ ಮಕ್ಕಳು: ಏರ್, ಓನಾನ್, ಶೇಲಹ, ಪೆರೆಚ್ ಮತ್ತು ಜೆರಹ. ಆದರೆ ಏರನೂ, ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಮತ್ತು ಹಾಮೂಲ್ ಎಂಬುವರು.


ಯೆಹೂದನ ಪುತ್ರರು: ಏರ್, ಓನಾನನೂ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು.


ಏಕೆಂದರೆ ಈ ಸ್ಥಳದವರ ಕೂಗು ಯೆಹೋವ ದೇವರ ಸನ್ನಿಧಿಯಲ್ಲಿ ದೊಡ್ಡದಾಗಿರುವುದರಿಂದ ನಾವು ಇದನ್ನು ನಾಶ ಮಾಡುತ್ತೇವೆ. ಯೆಹೋವ ದೇವರು ನಮ್ಮನ್ನು ಕಳುಹಿಸಿದ್ದಾರೆ.”


ಸೊದೋಮಿನ ಜನರು ದುಷ್ಟರಾಗಿದ್ದರು ಮತ್ತು ಯೆಹೋವ ದೇವರ ವಿರುದ್ಧ ಬಹಳ ಪಾಪಮಾಡುತ್ತಿದ್ದರು.


ಆದರೆ ದೇವರೇ, ದುಷ್ಟರನ್ನು ನಾಶದ ಕುಣಿಯಲ್ಲಿ ಇಳಿಯ ಮಾಡುವಿರಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಕಾಲದಲ್ಲಿ ಅರ್ಧವನ್ನೂ ಜೀವಿಸುವುದಿಲ್ಲ. ನಾನಾದರೋ ನಿಮ್ಮಲ್ಲಿ ಭರವಸವಿಡುತ್ತೇನೆ.


ಇದಲ್ಲದೆ ಮನಸ್ಸೆಯು ಬೆನ್ ಹಿನ್ನೋಮ್ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬಲಿಯಾಗಿ ಅರ್ಪಿಸಿದನು. ಮೇಘ ಮಂತ್ರಗಳನ್ನೂ, ಸರ್ಪಮಂತ್ರಗಳನ್ನೂ ಮಾಟವನ್ನೂ ಮಾಡಿದನು. ಕಣಿಹೇಳುವವರನ್ನೂ, ಮಾಂತ್ರಿಕರನ್ನೂ ವಿಚಾರಿಸಿದನು. ಯೆಹೋವ ದೇವರ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿ ಅವರಿಗೆ ಕೋಪವನ್ನು ಎಬ್ಬಿಸಿದನು.


ಆದರೆ ನೋಹನಿಗೆ ಯೆಹೋವ ದೇವರ ದಯೆ ದೊರಕಿತು.


ಇದಾದ ಮೇಲೆ ಯೆಹೂದನು ತನ್ನ ಜೇಷ್ಠಪುತ್ರ ಏರನಿಗೆ ತಾಮಾರ್ ಎಂಬ ಹೆಣ್ಣನ್ನು ತಂದು ಮದುವೆಮಾಡಿದನು.


ಮನುಷ್ಯನಿಗೆ ವಿರೋಧವಾಗಿ ಮನುಷ್ಯನು ಪಾಪಮಾಡಿದರೆ, ದೇವರು ಅಪರಾಧಿಗಾಗಿ ಮಧ್ಯಸ್ಥಿಕೆಯನ್ನು ವಹಿಸುವರು. ಆದರೆ ಒಬ್ಬನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದರೆ, ಅವನಿಗೋಸ್ಕರ ವಿಜ್ಞಾಪನೆ ಮಾಡತಕ್ಕವರು ಯಾರು?” ಎಂದನು. ಆದರೂ ಅವರು ತಮ್ಮ ತಂದೆಯ ಮಾತನ್ನು ಕೇಳದೆ ಹೋದರು. ಯೆಹೋವ ದೇವರು ಅವರನ್ನು ಮರಣದಂಡನೆಗೆ ಒಪ್ಪಿಸಬೇಕೆಂದಿದ್ದರು.


“ನನ್ನ ದೇವರಾದ ಯೆಹೋವ ದೇವರೇ, ವಿಧವೆಯ ಮಗನನ್ನು ಕೊಂದುಹಾಕುವ ಈ ದುರಂತ ಅವಳ ಮೇಲೆ ಬರಮಾಡಿದಿಯಲ್ಲಾ?” ಎಂದು ಯೆಹೋವ ದೇವರನ್ನು ಕೂಗಿ ಬೇಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು