Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 39:11 - ಕನ್ನಡ ಸಮಕಾಲಿಕ ಅನುವಾದ

11 ಹೀಗಿರುವಲ್ಲಿ ಒಂದು ದಿನ ಅವನು ತನ್ನ ಕೆಲಸ ಮಾಡುವುದಕ್ಕೆ ಮನೆಯನ್ನು ಪ್ರವೇಶಿಸಿದಾಗ, ಮನೆಯ ಸೇವಕರಲ್ಲಿ ಒಬ್ಬರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹೀಗಿರಲು ಒಂದು ದಿನ ಅವನು ತನ್ನ ಕೆಲಸದ ಮೇಲೆ ಮನೆಗೆ ಬಂದಾಗ ಮನೆಯೊಳಗೆ ಯಾವ ಸೇವಕರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇಂತಿರಲು, ಒಂದು ದಿನ ಜೋಸೆಫನು ತನ್ನ ಕೆಲಸದ ಮೇಲೆ ಬಂದಾಗ ಮನೆಯ ಸೇವಕರಾರೂ ಒಳಗೆ ಇರಲಿಲ್ಲ. ಆಕೆ ಅವನ ಬಟ್ಟೆಯನ್ನು ಹಿಡುಕೊಂಡು “ಹಾಸಿಗೆಗೆ ಬಾ,” ಎಂದು ಕರೆದಳು. ಅವನು ತನ್ನ ಬಟ್ಟೆಯನ್ನು ಅವಳ ಕೈಯಲ್ಲೇ ಬಿಟ್ಟು ತಪ್ಪಿಸಿಕೊಂಡು ಓಡಿಹೋದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಹೀಗಿರಲು ಒಂದು ದಿನ ಅವನು ತನ್ನ ಕೆಲಸದ ಮೇಲೆ ಮನೆಗೆ ಬಂದಾಗ ಮನೆಯವರಲ್ಲಿ ಯಾರೂ ಒಳಗೆ ಇಲ್ಲದಿರುವಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಒಂದು ದಿನ ಯೋಸೇಫನು ತನ್ನ ಕೆಲಸದ ನಿಮಿತ್ತ ಮನೆಯೊಳಗೆ ಹೋದನು. ಆಗ ಮನೆಯಲ್ಲಿ ಇದ್ದವನು ಅವನೊಬ್ಬನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 39:11
8 ತಿಳಿವುಗಳ ಹೋಲಿಕೆ  

ಆ ಅವಿಧೇಯರು ಗುಟ್ಟಾಗಿ ಮಾಡುವ ಕೃತ್ಯಗಳನ್ನು ಹೇಳುವುದಕ್ಕೂ ಅವಮಾನಕರವಾಗಿವೆ.


ಆದರೆ ನಿಮ್ಮೊಳಗೆ ಅನೈತಿಕತೆಯಾಗಲಿ, ಯಾವ ಅಶುದ್ಧತ್ವವಾಗಲಿ, ಇಲ್ಲವೆ ಲೋಭವಾಗಲಿ ಇರಲೇಬಾರದು. ಇವು ದೇವರ ಪರಿಶುದ್ಧರಿಗೆ ಯೋಗ್ಯವಲ್ಲ.


“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನನ್ನ ಕಣ್ಣಿಗೆ ಬೀಳದಂತೆ ಯಾವನಾದರೂ ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೇ?” ಎಂದು ಯೆಹೋವ ದೇವರು ಹೇಳುತ್ತಾರೆ.


“ಕದ್ದ ನೀರು ಸಿಹಿಯಾಗಿದೆ; ರಹಸ್ಯದಲ್ಲಿ ತಿನ್ನುವ ಆಹಾರವು ರುಚಿಯಾಗಿದೆ,” ಎಂದು ಹೇಳುತ್ತಾಳೆ.


ವ್ಯಭಿಚಾರಿಯು ಸಂಜೆಯನ್ನು ಎದುರುನೋಡುತ್ತಿರುವನು. ತರುವಾಯ, ‘ಯಾವ ಕಣ್ಣೂ ನನ್ನನ್ನು ನೋಡುವುದಿಲ್ಲ,’ ಎಂದು ಹೇಳುತ್ತಾನೆ; ಯಾರು ತನ್ನನ್ನು ಕಾಣದಂತೆ ಮುಖವನ್ನು ಮುಚ್ಚಿಕೊಳ್ಳುತ್ತಾನೆ.


ಅವಳು ಪ್ರತಿದಿನ ಯೋಸೇಫನ ಸಂಗಡ ಮಾತನಾಡಿದರೂ, ಅವನು ಅವಳ ಕೂಡ ಮಲಗುವುದಕ್ಕಾಗಲಿ, ಅವಳ ಹತ್ತಿರ ಇರುವುದಕ್ಕಾಗಲಿ ಒಪ್ಪಲಿಲ್ಲ.


ಆಗ ಆಕೆಯು ಅವನ ಬಟ್ಟೆಯನ್ನು ಹಿಡಿದುಕೊಂಡು, “ನನ್ನ ಸಂಗಡ ಮಲಗು,” ಎಂದಳು. ಆದರೆ ಅವನು ತನ್ನ ವಸ್ತ್ರವನ್ನು ಅವಳ ಕೈಯಲ್ಲಿ ಬಿಟ್ಟು ಹೊರಗೆ ಓಡಿಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು