ಆದಿಕಾಂಡ 39:4 - ಕನ್ನಡ ಸಮಕಾಲಿಕ ಅನುವಾದ4 ಆದ್ದರಿಂದ ಯೋಸೇಫನು ಪೋಟೀಫರನ ದೃಷ್ಟಿಯಲ್ಲಿ ದಯೆಹೊಂದಿ ಅವನ ಸೇವೆ ಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ, ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದುದರಿಂದ ಅವನ ದಣಿಯು ಯೋಸೇಫನ ಮೇಲೆ ದಯೆ ಇಟ್ಟು, ಅವನನ್ನು ಸ್ವಂತ ಸೇವಕನನ್ನಾಗಿ ನೇಮಿಸಿಕೊಂಡನು. ಇದಲ್ಲದೆ ಆ ದಣಿಯು ಅವನಿಗೆ ತನ್ನ ಮನೆಯಲ್ಲಿ ಪಾರುಪತ್ಯವನ್ನು ಕೊಟ್ಟು ತನ್ನ ಆಸ್ತಿಯನ್ನೆಲ್ಲಾ ಅವನ ವಶಕ್ಕೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಜೋಸೆಫ್ ಅವನ ಕೃಪೆಗೆ ಪಾತ್ರನಾದ. ದಣಿ ಅವನನ್ನು ತನ್ನ ಆಪ್ತಸೇವಕನನ್ನಾಗಿ ನೇಮಿಸಿಕೊಂಡ. ಅದು ಮಾತ್ರವಲ್ಲ, ತನ್ನ ಮನೆಯಲ್ಲೇ ಮೇಲ್ವಿಚಾರಕನನ್ನಾಗಿ ಮಾಡಿ, ತನ್ನ ಆಸ್ತಿಪಾಸ್ತಿಯನ್ನೆಲ್ಲ ಅವನ ವಶಕ್ಕೆ ಒಪ್ಪಿಸಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವನ ಮೇಲೆ ದಯೆ ಇಟ್ಟು ಅವನನ್ನು ಸ್ವಂತ ಸೇವಕನನ್ನಾಗಿ ನೇವಿುಸಿಕೊಂಡನು. ಇದಲ್ಲದೆ ಆ ದಣಿಯು ಅವನಿಗೆ ತನ್ನ ಮನೆಯಲ್ಲಿ ಪಾರುಪತ್ಯವನ್ನು ಕೊಟ್ಟು ತನ್ನ ಆಸ್ತಿಯನ್ನೆಲ್ಲಾ ಅವನ ವಶಕ್ಕೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಪೋಟೀಫರನು ಯೋಸೇಫನ ವಿಷಯದಲ್ಲಿ ತುಂಬ ಸಂತೋಷಪಟ್ಟು ಸ್ವಂತ ಸೇವಕನನ್ನಾಗಿ ಮಾಡಿಕೊಂಡನು; ಅಲ್ಲದೆ ಮನೆಯ ಮೇಲ್ವಿಚಾರಣೆಯನ್ನು ಒಪ್ಪಿಸಿಕೊಟ್ಟನು; ತನ್ನ ಆಸ್ತಿಗೆಲ್ಲಾ ಮೇಲಾಧಿಕಾರಿಯನ್ನಾಗಿ ನೇಮಿಸಿದನು. ಅಧ್ಯಾಯವನ್ನು ನೋಡಿ |
ಎಸ್ತೇರಳು ಹೇಗೈಯ ಮೆಚ್ಚುಗೆಯನ್ನು ಗಳಿಸಿದ್ದರಿಂದ ಅವನ ಸಮ್ಮುಖದಲ್ಲಿ ಅವಳಿಗೆ ದಯೆ ದೊರಕಿತು. ಆದಕಾರಣ ಅವನು ತ್ವರೆಯಾಗಿ ಸೌಂದರ್ಯವರ್ಧಕ ಸಾಧನಗಳನ್ನೂ ಅರಸನ ಅರಮನೆಯಿಂದ ಏಳುಮಂದಿ ದಾಸಿಯರನ್ನೂ ಅವಳಿಗೆ ಕೊಟ್ಟನು. ಇದಲ್ಲದೆ ಸ್ತ್ರೀಯರಿದ್ದ ಕೋಣೆಯಲ್ಲಿ ಉತ್ತಮವಾದ ಭೋಜನಾಂಶಗಳನ್ನು ಅವಳಿಗೂ ಅವಳ ದಾಸಿಯರಿಗೂ ಕೊಟ್ಟನು. ಆಕೆಯನ್ನೂ ಮತ್ತು ಆಕೆಯ ಸೇವಕಿಯರನ್ನೂ ಅಂತಃಪುರದ ಉತ್ತಮ ಭಾಗದಲ್ಲಿರಿಸಿದನು.