Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 39:8 - ಕನ್ನಡ ಸಮಕಾಲಿಕ ಅನುವಾದ

8 ಆದರೆ ಅವನು ಅದಕ್ಕೆ ಒಪ್ಪದೆ, ತನ್ನ ಯಜಮಾನನ ಹೆಂಡತಿಗೆ, “ನನ್ನ ಯಜಮಾನನು ತನ್ನ ಮನೆಯಲ್ಲಿರುವ ಯಾವುದರ ಬಗ್ಗೆಯೂ ಚಿಂತಿಸದೆ, ತನಗಿದ್ದದ್ದನ್ನೆಲ್ಲಾ ನನಗೆ ಒಪ್ಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ಅವನು ಒಪ್ಪದೆ, “ನನ್ನ ದಣಿಯು ತನ್ನ ಆಸ್ತಿಯನ್ನೆಲ್ಲಾ ನನ್ನ ವಶಕ್ಕೆ ಒಪ್ಪಿಸಿರುವುದಲ್ಲದೆ ನಾನು ಇಲ್ಲಿ ಇರುವುದರಿಂದ ಮನೆಯೊಳಗೆ ನಡೆಯುವ ಯಾವ ಕೆಲಸವನ್ನೂ ಚಿಂತಿಸದೇ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಜೋಸೆಫನು ಒಪ್ಪಲಿಲ್ಲ. “ನನ್ನ ಒಡೆಯ ತನ್ನ ಆಸ್ತಿಪಾಸ್ತಿಯನ್ನೆಲ್ಲ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ನಾನಿರುವುದರಿಂದ ಮನೆಯ ಎಲ್ಲ ವಿಷಯಗಳಲ್ಲಿ ನಿಶ್ಚಿಂತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೆ ಅವನು ಒಪ್ಪದೆ - ನನ್ನ ದಣಿಯು ತನ್ನ ಆಸ್ತಿಯನ್ನೆಲ್ಲಾ ನನ್ನ ವಶಕ್ಕೆ ಒಪ್ಪಿಸಿ ನಾನು ಇರುವದರಿಂದ ಮನೆಯೊಳಗೆ ನಡೆಯುವ ಯಾವ ಕೆಲಸವನ್ನೂ ಚಿಂತಿಸದೆ ಇದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಯೋಸೇಫನು ತಿರಸ್ಕರಿಸಿದನು. ಅವನು, “ನನ್ನ ಧಣಿಯು ಈ ಮನೆಯ ಜವಾಬ್ದಾರಿಕೆಗಳನ್ನೆಲ್ಲಾ ನನಗೆ ವಹಿಸಿ ನಿಶ್ಚಿಂತೆಯಿಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 39:8
15 ತಿಳಿವುಗಳ ಹೋಲಿಕೆ  

ವ್ಯಭಿಚಾರಿಣಿಯ ಬಾಯಿ ಆಳವಾದ ಬಾವಿ; ಯೆಹೋವ ದೇವರಿಗೆ ಸಿಟ್ಟನ್ನು ಎಬ್ಬಿಸುವವನು ಅದರಲ್ಲಿ ಬೀಳುವನು.


ಅವು ವ್ಯಭಿಚಾರಿಣಿಯಿಂದಲೂ ಸವಿಮಾತನಾಡುವ ದಾರಿತಪ್ಪಿದ ಸ್ತ್ರೀಯಿಂದಲೂ ನಿನ್ನನ್ನು ಕಾಪಾಡುತ್ತವೆ.


ಮಗನೇ, ಪಾಪಿಗಳು ನಿನ್ನನ್ನು ಸೆಳೆದರೆ ನೀನು ಒಪ್ಪಬೇಡ.


ವಿಶ್ವಾಸಕ್ಕೆ ಅರ್ಹರಲ್ಲದ ಸ್ನೇಹಿತರನ್ನು ಹೊಂದಿರುವವನು ಶೀಘ್ರವೇ ನಾಶವಾಗುತ್ತಾನೆ; ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.


ಪರನ ಹೆಂಡತಿಯನ್ನು ಕೂಡುವವನ ಗತಿಯು ಹೀಗೆಯೇ ಇರುವದು. ಅವಳನ್ನು ಮುಟ್ಟುವ ಯಾವನೂ ದಂಡನೆಯಿಂದ ತಪ್ಪಿಸಿಕೊಳ್ಳನು.


ನಿನ್ನ ಹೃದಯದಲ್ಲಿ ಜ್ಞಾನವು ಪ್ರವೇಶಿಸಿ, ನಿನ್ನ ಪ್ರಾಣಕ್ಕೆ ತಿಳುವಳಿಕೆಯು ಹಿತಕರವಾಗಿರುವುದು.


ಆದ್ದರಿಂದ ಯೋಸೇಫನು ಪೋಟೀಫರನ ದೃಷ್ಟಿಯಲ್ಲಿ ದಯೆಹೊಂದಿ ಅವನ ಸೇವೆ ಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ, ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು.


ಯೆಹೋವ ದೇವರು ಅವನ ಸಂಗಡ ಇದ್ದುದರಿಂದಲೂ ಅವನು ಮಾಡುವುದನ್ನು ಯೆಹೋವ ದೇವರು ಅಭಿವೃದ್ಧಿಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವುದಕ್ಕೂ ಚಿಂತೆ ಮಾಡದೆ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು