ಆದಿಕಾಂಡ 39:9 - ಕನ್ನಡ ಸಮಕಾಲಿಕ ಅನುವಾದ9 ಈ ಮನೆಯಲ್ಲಿ ನನಗಿಂತ ದೊಡ್ಡವನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವುದರಿಂದ, ನಿನ್ನನ್ನು ಹೊರತುಪಡಿಸಿ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ಮಹಾ ದುಷ್ಕೃತ್ಯ ಮಾಡಿ, ದೇವರಿಗೆ ವಿರೋಧವಾಗಿ ಪಾಪ ಮಾಡುವುದು ಹೇಗೆ?” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಈ ಮನೆಯಲ್ಲಿ ನನಗಿಂತ ಯಾರೂ ದೊಡ್ಡವರಲ್ಲ. ನೀನು ಅವನ ಧರ್ಮಪತ್ನಿಯಾದುದರಿಂದ ನಿನ್ನನ್ನು ಮಾತ್ರ ನನಗೆ ಅಧೀನ ಮಾಡಲಿಲ್ಲ. ಹೀಗಿರುವಲ್ಲಿ ನಾನು ಇಂಥಾ ಮಹಾ ದುಷ್ಟ ಕಾರ್ಯವನ್ನು ಮಾಡಿ ದೇವರಿಗೆ ವಿರೋಧವಾಗಿ ಹೇಗೆ ಪಾಪ ಮಾಡಲಿ?” ಎಂದು ತನ್ನ ದಣಿಯ ಹೆಂಡತಿಗೆ ಉತ್ತರ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಈ ಮನೆಯಲ್ಲಿ ನನಗಿಂತ ಹೆಚ್ಚಿನ ಅಧಿಕಾರ ಪಡೆದವರು ಒಬ್ಬರೂ ಇಲ್ಲ; ನಿಮ್ಮನ್ನು ಬಿಟ್ಟು ಮಿಕ್ಕ ಎಲ್ಲವನ್ನು ನನಗೆ ಅಧೀನಮಾಡಿದ್ದಾರೆ. ನೀವು ಅವರ ಧರ್ಮಪತ್ನಿ ಅಲ್ಲವೆ? ಹೀಗಿರುವಲ್ಲಿ, ನಾನು ಇಂತಹ ಮಹಾದುಷ್ಕೃತ್ಯವೆಸಗಿ ದೇವರಿಗೆ ವಿರುದ್ಧ ಹೇಗೆ ಪಾಪಮಾಡಲಿ?” ಎಂದು ಆಕೆಗೆ ಉತ್ತರಕೊಟ್ಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಈ ಮನೆಯಲ್ಲಿ ಅವನೂ ನನಗಿಂತ ದೊಡ್ಡವನಲ್ಲ; ನೀನು ಅವನ ಧರ್ಮಪತ್ನಿಯಾದದರಿಂದ ನಿನ್ನನ್ನು ಮಾತ್ರ ನನಗೆ ಅಧೀನಮಾಡಲಿಲ್ಲ; ಹೀಗಿರುವಲ್ಲಿ ನಾನು ಇಂಥಾ ಮಹಾದುಷ್ಕೃತ್ಯವನ್ನು ನಡಿಸಿ ದೇವರಿಗೆ ವಿರುದ್ಧವಾಗಿ ಹೇಗೆ ಪಾಪಮಾಡಲಿ ಎಂದು ತನ್ನ ದಣಿಯ ಹೆಂಡತಿಗೆ ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನನ್ನ ಧಣಿಯು ಈ ಮನೆಯ ಸರ್ವಾಧಿಕಾರವನ್ನು ನನಗೆ ಕೊಟ್ಟಿದ್ದರೂ ತನ್ನ ಧರ್ಮಪತ್ನಿಯಾದ ನಿನ್ನನ್ನು ನನಗೆ ಅಧೀನಪಡಿಸಿಲ್ಲ. ಹೀಗಿರಲು ಇಂಥಾ ಮಹಾ ದುಷ್ಕೃತ್ಯವನ್ನು ನಡೆಸಿ ದೇವರಿಗೆ ವಿರುದ್ಧವಾಗಿ ಹೇಗೆ ಪಾಪಮಾಡಲಿ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿ |