Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:12 - ಕನ್ನಡ ಸಮಕಾಲಿಕ ಅನುವಾದ

12 ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ ಅದು ಇನ್ನು ಮುಂದೆ ಫಲಿಸುವುದಿಲ್ಲ. ನೀನು ಭೂಲೋಕದಲ್ಲಿ ಅಲೆಮಾರಿಯಾಗಿ ತಿರುಗುವವನು ಆಗಿರುವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ, ಅದು ಇನ್ನು ಮುಂದೆ ನಿನಗೆ ಫಲಕೊಡುವುದಿಲ್ಲ. ನೀನು ಭೂಲೋಕದಲ್ಲಿ ಅಲೆದಾಡುವವನು ದೇಶ ಭ್ರಷ್ಟನೂ ಆಗಿರುವಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇದನ್ನು ನೀನು ವ್ಯವಸಾಯ ಮಾಡಿದರೂ ಇನ್ನು ಮುಂದೆ ಇದು ಫಲಕೊಡುವುದಿಲ್ಲ. ನೆಲೆಯಿಲ್ಲದೆ ನೀನು ಲೋಕದಲ್ಲಿ ಅಲೆಮಾರಿಯಾಗಿರಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀನು ಭೂವಿುಯನ್ನು ವ್ಯವಸಾಯ ಮಾಡಿದರೂ ಇದು ಇನ್ನು ಮುಂದೆ ನಿನಗೆ ಫಲಿಸುವದಿಲ್ಲ. ನೀನು ಭೂಲೋಕದಲ್ಲಿ ಅಲೆಯುವವನೂ ದೇಶಭ್ರಷ್ಟನೂ ಆಗಿರುವಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಕಳೆದ ದಿನಗಳಲ್ಲಿ ನೀನು ಸಸಿಗಳನ್ನು ನೆಟ್ಟಾಗ ಸಸಿಗಳು ಚೆನ್ನಾಗಿ ಬೆಳೆದವು. ಆದರೆ ಈಗ ನೀನು ಸಸಿ ನೆಟ್ಟರೂ ಭೂಮಿ ಫಲಿಸುವುದಿಲ್ಲ. ನಿನಗೆ ಭೂಮಿಯ ಮೇಲೆ ಮನೆ ಇರುವುದಿಲ್ಲ. ನೀನು ಸ್ಥಳದಿಂದ ಸ್ಥಳಕ್ಕೆ ಅಲೆದಾಡುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:12
16 ತಿಳಿವುಗಳ ಹೋಲಿಕೆ  

ನನ್ನ ದೇವರು ಅವರನ್ನು ತಳ್ಳಿಬಿಡುವರು. ಏಕೆಂದರೆ ಅವರು ಆತನಿಗೆ ವಿಧೇಯರಾಗಲಿಲ್ಲ. ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.


“ ‘ನಿಮ್ಮಲ್ಲಿ ಯಾರು ಉಳಿದು ಶತ್ರುಗಳ ದೇಶದಲ್ಲಿ ಇರುವರೋ, ಅವರ ಹೃದಯದಲ್ಲಿ ಭೀತಿಯನ್ನು ಹುಟ್ಟಿಸುವೆನು. ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವುದು. ಖಡ್ಗಕ್ಕೆ ಓಡಿ ಹೋದ ಹಾಗೆ ಓಡಿಹೋಗುವರು.


ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದುಹೋಗುವುದು. ಏಕೆಂದರೆ ನಿಮ್ಮ ಭೂಮಿಯು ತನ್ನ ಬೆಳೆಯನ್ನು ಕೊಡದೆ ಇರುವುದು ಭೂಮಿಯ ಮರಗಳು ತಮ್ಮ ಫಲಗಳನ್ನು ಕೊಡುವುದಿಲ್ಲ.


ಸೃಷ್ಟಿಯು ನಾಶಕ್ಕೆ ಒಳಗಾಯಿತು. ಆದರೆ ಸ್ವಂತ ಇಚ್ಛೆಯಿಂದಲ್ಲ. ಅದನ್ನು ನಿರೀಕ್ಷೆಯಿಂದ ಒಳಪಡಿಸಿದ ದೇವರಿಂದಲೇ ಆಯಿತು. ಆದರೂ ಸೃಷ್ಟಿಗೂ ನಿರೀಕ್ಷೆಯಿದೆ.


ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಲಿ, ತಮ್ಮ ಹಾಳು ಮನೆಯಿಂದ ಹೊರಟು ಹೋಗಲಿ.


ಇಗೋ, ನೀವು ಈ ದಿನ ನನ್ನನ್ನು ಸ್ವದೇಶದಿಂದ ಓಡಿಸುತ್ತಿದ್ದೀರಲ್ಲಾ! ನಿಮ್ಮ ಸಮ್ಮುಖದಿಂದ ನಾನು ಮರೆಯಾಗಿರಬೇಕಾಯಿತು. ಭೂಮಿಯಲ್ಲಿ ಅಲೆಮಾರಿಯಾಗಿರಬೇಕು. ಇದಲ್ಲದೆ ನನ್ನನ್ನು ಕಂಡವರು ಕೊಲ್ಲುವರು,” ಎಂದನು.


ಆಗ ಕಾಯಿನನು ಯೆಹೋವ ದೇವರಿಗೆ, “ನನ್ನ ಶಿಕ್ಷೆಯು ತಾಳಲಾರದಷ್ಟು ದೊಡ್ಡದಾಗಿದೆ.


ನಾನು ನಿಮಗೆ ವಿಮುಖನಾಗಿರುವೆನು. ಆದ್ದರಿಂದ ನೀವು ನಿಮ್ಮ ವೈರಿಗಳಿಂದ ಸೋತುಹೋಗುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗಲೂ ಓಡಿಹೋಗುವಿರಿ.


ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳದೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳನ್ನು ಕೈಗೊಳ್ಳದೇ ಹೋದರೆ, ಈ ಎಲ್ಲಾ ಶಾಪಗಳು ನಿಮ್ಮ ಮೇಲೆ ಬಂದು ನಿಮ್ಮನ್ನು ಹಿಡಿದುಕೊಳ್ಳುವವು:


ಹೊಲವು ಹಾಳಾಗಿದೆ; ಭೂಮಿಯು ಒಣಗಿದೆ, ಧಾನ್ಯವು ನಾಶವಾಗಿದೆ; ಹೊಸ ದ್ರಾಕ್ಷಾರಸವು ಒಣಗಿದೆ; ಎಣ್ಣೆ ತೀರಿಹೋಗಿದೆ.


ದೇವರು ಫಲವುಳ್ಳ ಭೂಮಿಯನ್ನು ಬಂಜರಾಗುವಂತೆ ಮಾಡಿದರು. ಇದಕ್ಕೆಲ್ಲ ಕಾರಣ ಅದರ ನಿವಾಸಿಗಳ ಕೆಟ್ಟತನವೇ ಆಗಿತ್ತು.


ನರಹತ್ಯದ ಅಪರಾಧ ಭಾವನೆಯಿಂದ ಇರುವವನು, ಮರಣದೆಡೆಗೆ ಓಡುತ್ತಿರುವನು, ಅವನನ್ನು ಯಾರೂ ತಡೆಯದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು