Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:14 - ಕನ್ನಡ ಸಮಕಾಲಿಕ ಅನುವಾದ

14 ಇಗೋ, ನೀವು ಈ ದಿನ ನನ್ನನ್ನು ಸ್ವದೇಶದಿಂದ ಓಡಿಸುತ್ತಿದ್ದೀರಲ್ಲಾ! ನಿಮ್ಮ ಸಮ್ಮುಖದಿಂದ ನಾನು ಮರೆಯಾಗಿರಬೇಕಾಯಿತು. ಭೂಮಿಯಲ್ಲಿ ಅಲೆಮಾರಿಯಾಗಿರಬೇಕು. ಇದಲ್ಲದೆ ನನ್ನನ್ನು ಕಂಡವರು ಕೊಲ್ಲುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಗೋ, ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಈ ನಾಡಿನಿಂದ ನನ್ನನ್ನು ಹೊರದೂಡುತ್ತಿರುವಿರಿ, ತಮ್ಮ ಸಾನ್ನಿಧ್ಯ ನನಗಿನ್ನು ದೊರಕದು; ನೆಲೆ ಇಲ್ಲದ ನಾನು ಲೋಕದಲ್ಲಿ ಅಲೆಮಾರಿಯಾಗಿರಬೇಕು; ಕಂಡಕಂಡವರೆಲ್ಲರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಹೊರಡಿಸುತ್ತೀಯಲ್ಲಾ; ನಿನ್ನ ಸಾನ್ನಿಧ್ಯವು ತಪ್ಪಿತು; ನಾನು ಲೋಕದಲ್ಲಿ ಅಲೆಯುವವನೂ ದೇಶಭ್ರಷ್ಟನೂ ಆಗಬೇಕಾಯಿತು. ಇದಲ್ಲದೆ ನನ್ನನ್ನು ಕಂಡವರು ಕೊಲ್ಲುವರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀನು ನನ್ನನ್ನು ನನ್ನ ದೇಶದಿಂದ ಬಲವಂತವಾಗಿ ಹೊರಡಿಸುತ್ತಿರುವೆ. ನಿನ್ನನ್ನು ನೋಡುವುದಕ್ಕಾಗಲಿ ನಿನ್ನ ಸಮೀಪದಲ್ಲಿ ಇರುವುದಕ್ಕಾಗಲಿ ನನಗೆ ಸಾಧ್ಯವಿರುವುದಿಲ್ಲ! ನನಗೆ ಮನೆಯೂ ಇಲ್ಲ! ನಾನು ಭೂಮಿಯ ಮೇಲೆ ಸ್ಥಳದಿಂದ ಸ್ಥಳಕ್ಕೆ ಬಲವಂತವಾಗಿ ಅಲೆದಾಡಬೇಕಾಗುವುದು. ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:14
27 ತಿಳಿವುಗಳ ಹೋಲಿಕೆ  

ರಕ್ತಪಾತಕ್ಕೆ ಸೇಡು ತೀರಿಸಿಕೊಳ್ಳುವವನು ಕೊಲೆಪಾತಕನನ್ನು ಕೊಲ್ಲಬೇಕು. ಅವನು ಕೊಲೆಪಾತಕನನ್ನು ನೋಡಿದಾಗ, ಅವನನ್ನೂ ಕೊಲ್ಲಬೇಕು.


ಯೆಹೋವ ದೇವರೇ, ನನಗೆ ಬೇಗನೆ ಉತ್ತರಕೊಡಿರಿ; ನನ್ನ ಪ್ರಾಣವು ಕುಂದಿಹೋಗಿದೆ; ನಿಮ್ಮ ಮುಖವನ್ನು ನನಗೆ ಮರೆಮಾಡಬೇಡ; ಇಲ್ಲವಾದರೆ ಸಮಾಧಿಯಲ್ಲಿ ಇಳಿಯುವವರಿಗೆ ಸಮಾನನಾಗಿಬಿಡುತ್ತೇನೆ.


ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟನು ಓಡಿಹೋಗುತ್ತಾನೆ. ಆದರೆ ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.


ಆ ಜನಾಂಗಗಳಲ್ಲಿ ನಿಮಗೆ ವಿಶ್ರಾಂತಿ ದೊರೆಯುವುದಿಲ್ಲ. ಸ್ವಲ್ಪ ಹೊತ್ತು ಅಂಗಾಲಿಡುವುದಕ್ಕೂ ನಿಮಗೆ ಸ್ಥಳಸಿಕ್ಕುವುದಿಲ್ಲ. ಅಲ್ಲಿ ಯೆಹೋವ ದೇವರು ನಿಮಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಂದುವ ಪ್ರಾಣವನ್ನೂ ಕೊಡುವರು.


ಅಂಥವರು ಕರ್ತ ಯೇಸುವಿನ ಸನ್ನಿಧಿಯಿಂದಲೂ ಅವರ ಮಹಿಮೆಯ ಬಲದಿಂದಲೂ ಬಹಿಷ್ಕೃತರಾಗಿ ನಿತ್ಯನಾಶದ ಶಿಕ್ಷೆಯನ್ನು ಅನುಭವಿಸುವರು.


“ಹೀಗೆ ಇವರು ನಿತ್ಯವಾದ ಶಿಕ್ಷೆಗೆ ಒಳಗಾಗುವರು. ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು,” ಎಂದು ಹೇಳುವೆನು.


ಯೆಹೋವ ದೇವರ ಕೋಪದಿಂದ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಇವೆಲ್ಲ ಉಂಟಾದವು. ಹೀಗೆ ಯೆಹೋವ ದೇವರು ಅವರನ್ನು ತಮ್ಮ ಸಮ್ಮುಖದಿಂದ ತಳ್ಳಿಬಿಟ್ಟರು. ಚಿದ್ಕೀಯನು ಬಾಬಿಲೋನಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.


ರಕ್ತಕ್ಕೆ ಸೇಡು ತೀರಿಸುವವನು ಅವನನ್ನು ತನ್ನ ಆಶ್ರಯದ ಪಟ್ಟಣದ ಮೇರೆಯ ಹೊರಗೆ ಕಂಡುಕೊಂಡು ಕೊಲೆಪಾತಕನನ್ನು ಕೊಂದರೆ, ಅವನಿಗೆ ರಕ್ತಾಪರಾಧವಿಲ್ಲ.


ಇಲ್ಲವೆ ಹಗೆತನ ಮಾಡಿ ಅವನು ಸಾಯುವ ಹಾಗೆ ತನ್ನ ಕೈಯಿಂದ ಹೊಡೆದರೆ ಅವನು ಕೊಲೆಪಾತಕನೇ, ಹೊಡೆದವನನ್ನು ನಿಜವಾಗಿ ಸಾಯಿಸಬೇಕು. ರಕ್ತಪಾತಕ್ಕೆ ಸೇಡು ತೀರಿಸುವವನು ಅವನನ್ನು ಸಂಧಿಸುವಾಗಲೇ ಆ ಕೊಲೆಪಾತಕನನ್ನು ಕೊಲ್ಲಬೇಕು.


“ನಾನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಆದ್ದರಿಂದ ಅವರು ಪ್ರಾತಃಕಾಲದ ಮಂಜಿನ ಹಾಗೆಯೂ, ಬೇಗನೆ ಮಾಯವಾಗುವ ಇಬ್ಬನಿಯ ಹಾಗೆಯೂ, ಸುಳಿಗಾಳಿಯು ಕಣದಿಂದ ಬಡಿದುಕೊಂಡು ಹೋಗುವ ಹೊಟ್ಟಿನ ಹಾಗೆಯೂ, ಚಿಮಿಣಿಯಿಂದ ಹೊರಡುವ ಹೊಗೆಯ ಹಾಗೆಯೂ ಇರುವರು.


ಅವರು ಭೂಮಿಯನ್ನು ದೃಷ್ಟಿಸಿದರೂ, ಇಕ್ಕಟ್ಟೆಂಬ ಕತ್ತಲೂ, ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವುದು, ಕಾರ್ಗತ್ತಲೆಗೆ ಅವರನ್ನು ದೂಡಲಾಗುವುದು.


ದುಷ್ಟನು ತನ್ನ ಆಪತ್ಕಾಲದಲ್ಲಿ ಹಾಳಾಗುತ್ತಾನೆ, ಆದರೆ ನೀತಿವಂತನಿಗೆ ಮರಣದಲ್ಲಿಯೂ ಆಶ್ರಯ ಇದೆ.


ಅವನಿಗೆ ದಯೆ ತೋರಿಸುವವನು ಯಾವನೂ ಇಲ್ಲದೆ ಇರಲಿ; ದಿಕ್ಕಿಲ್ಲದ ಅವನ ಮಕ್ಕಳನ್ನು ಯಾವನೂ ಕನಿಕರಿಸದಿರಲಿ.


ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಲಿ, ತಮ್ಮ ಹಾಳು ಮನೆಯಿಂದ ಹೊರಟು ಹೋಗಲಿ.


ಆದ್ದರಿಂದ ಕುಟುಂಬದವರೆಲ್ಲರು ನಿನ್ನ ಸೇವಕಿಯ ವಿರೋಧವಾಗಿ ಎದ್ದು, ‘ತನ್ನ ಸಹೋದರನನ್ನು ಕೊಂದವನನ್ನು ಅವನ ಸಹೋದರನ ಪ್ರಾಣಕ್ಕೋಸ್ಕರ ಅವನನ್ನು ಒಪ್ಪಿಸಿಕೊಡು, ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥವಿಲ್ಲದ ಹಾಗೆ ಮಾಡಿಬಿಡುತ್ತೇವೆ’ ಎನ್ನುತ್ತಾರೆ. ಹೀಗೆಯೇ ಅವರು ನನಗೆ ಉಳಿದಿರುವ ಒಂದು ಕೆಂಡವನ್ನು ಆರಿಸಿ, ಭೂಮಿಯ ಮೇಲೆ ನನ್ನ ಗಂಡನ ಹೆಸರನ್ನೂ, ಸಂತಾನವನ್ನೂ ಅಳಿಸಬೇಕೆಂದಿದ್ದಾರೆ,” ಎಂದಳು.


“ ‘ನಿಮ್ಮಲ್ಲಿ ಯಾರು ಉಳಿದು ಶತ್ರುಗಳ ದೇಶದಲ್ಲಿ ಇರುವರೋ, ಅವರ ಹೃದಯದಲ್ಲಿ ಭೀತಿಯನ್ನು ಹುಟ್ಟಿಸುವೆನು. ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವುದು. ಖಡ್ಗಕ್ಕೆ ಓಡಿ ಹೋದ ಹಾಗೆ ಓಡಿಹೋಗುವರು.


ನಾನು ನಿಮಗೆ ವಿಮುಖನಾಗಿರುವೆನು. ಆದ್ದರಿಂದ ನೀವು ನಿಮ್ಮ ವೈರಿಗಳಿಂದ ಸೋತುಹೋಗುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗಲೂ ಓಡಿಹೋಗುವಿರಿ.


ಹೀಗೆ ಅವರು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷದ ದಾರಿಯನ್ನು ಕಾಯುವುದಕ್ಕೆ ಏದೆನ್ ತೋಟದ ಪೂರ್ವದಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಖಡ್ಗವನ್ನೂ ಇರಿಸಿದರು.


ಆಗ ಕಾಯಿನನು ಯೆಹೋವ ದೇವರಿಗೆ, “ನನ್ನ ಶಿಕ್ಷೆಯು ತಾಳಲಾರದಷ್ಟು ದೊಡ್ಡದಾಗಿದೆ.


ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯವರೆಗೂ ಎಲ್ಲಾ ಜನಾಂಗಗಳಲ್ಲಿ ಚದರಿಸುವರು. ಅಲ್ಲಿ ನೀವೂ ನಿಮ್ಮ ಪಿತೃಗಳು ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಆರಾಧಿಸುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು