Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:20 - ಕನ್ನಡ ಸಮಕಾಲಿಕ ಅನುವಾದ

20 ಆದಾಳು ಯಾಬಾಲನನ್ನು ಹೆತ್ತಳು. ಪಶುಗಳನ್ನು ಸಾಕುತ್ತಾ, ಗುಡಾರಗಳಲ್ಲಿ ವಾಸಿಸುವವರೆಲ್ಲರ ಮೂಲಪುರುಷನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದಾಳು ಯಾಬಾಲನನ್ನು ಹೆತ್ತಳು; ದನಕರುಗಳನ್ನು ಸಾಕುತ್ತಾ ಗುಡಾರಗಳಲ್ಲಿ ವಾಸಿಸುವವರೆಲ್ಲರ ಮೂಲ ಪುರುಷನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆದಾಳು ಯಾಬಾಲನನ್ನು ಹೆತ್ತಳು. ಗುಡಾರಗಳಲ್ಲಿದ್ದು ದನಕರುಗಳನ್ನು ಸಾಕುವವರಿಗೆ ಇವನೇ ಮೂಲಪುರುಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆದಳು ಯಾಬಾಲನನ್ನು ಹೆತ್ತಳು; ದನಕರುಗಳನ್ನು ಸಾಕುವವರಾಗಿದ್ದು ಗುಡಾರಗಳಲ್ಲಿ ವಾಸಿಸುವವರೆಲ್ಲರ ಮೂಲಪುರುಷನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದಳಿಗೆ ಯಾಬಾಲ ಎಂಬ ಮಗನು ಹುಟ್ಟಿದನು. ಗುಡಾರಗಳಲ್ಲಿದ್ದುಕೊಂಡು ಪಶುಗಳನ್ನು ಸಾಕಿಕೊಂಡು ಜೀವನ ಮಾಡುತ್ತಿದ್ದ ಜನರಿಗೆ ಯಾಬಾಲನೇ ಮೂಲಪಿತೃ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:20
10 ತಿಳಿವುಗಳ ಹೋಲಿಕೆ  

ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗಲೂ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರು ಸಹ ಗುಡಾರಗಳಲ್ಲಿ ವಾಸಿಸಿದರು.


ನೀವು ನಿಮ್ಮ ತಂದೆಯಾದ ಪಿಶಾಚನಿಗೆ ಸೇರಿದವರಾಗಿದ್ದೀರಿ. ನಿಮ್ಮ ತಂದೆಯ ಆಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ಸುಳ್ಳಾಡುವಾಗ ತನ್ನ ಸ್ವಭಾವಾನುಸಾರವಾಗಿ ಆಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿನ ತಂದೆಯೂ ಆಗಿದ್ದಾನೆ.


ಆ ಹುಡುಗರು ಬೆಳೆದಾಗ ಏಸಾವನು ಬೇಟೆಯಾಡುವುದರಲ್ಲಿ ಜಾಣನಾಗಿದ್ದು, ಅಡವಿಯ ಮನುಷ್ಯನಾದನು. ಯಾಕೋಬನು ಗುಡಾರಗಳಲ್ಲಿ ವಾಸಮಾಡುವ ಸಾಧು ಮನುಷ್ಯನಾಗಿದ್ದನು.


ಇವನ ತಮ್ಮನ ಹೆಸರು ಯೂಬಾಲನು. ಇವನು ಕಿನ್ನರಿ ಕೊಳಲುಗಳನ್ನು ನುಡಿಸುವವರ ಮೂಲಪುರುಷನು.


ಅನಂತರ ಆಕೆಯು ಅವನ ತಮ್ಮನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿ ಕಾಯುವವನಾದನು ಮತ್ತು ಕಾಯಿನನು ವ್ಯವಸಾಯ ಮಾಡುವವನಾದನು.


ಲೆಮೆಕನು ಇಬ್ಬರು ಸ್ತ್ರೀಯರನ್ನು ಮದುವೆಯಾದನು. ಒಬ್ಬಳ ಹೆಸರು ಆದಾ ಮತ್ತೊಬ್ಬಳ ಹೆಸರು ಚಿಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು