ಆದಿಕಾಂಡ 4:25 - ಕನ್ನಡ ಸಮಕಾಲಿಕ ಅನುವಾದ25 ಆದಾಮನು ತಿರುಗಿ ತನ್ನ ಹೆಂಡತಿಯನ್ನು ಕೂಡಲು, ಆಕೆ ಗಂಡು ಮಗುವನ್ನು ಹೆತ್ತು, “ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ, ದೇವರು ನನಗೆ ಬೇರೆ ಸಂತಾನವನ್ನು ನೇಮಿಸಿದನು,” ಎಂದು ಆ ಮಗುವಿಗೆ, ಸೇತ್ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆದಾಮನು ತಿರುಗಿ ತನ್ನ ಹೆಂಡತಿಯನ್ನು ಸಂಗಮಿಸಲು ಆಕೆ ಗಂಡು ಮಗುವನ್ನು ಹೆತ್ತು, “ಕಾಯಿನನು ಕೊಂದು ಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೊಬ್ಬ ಮಗನನ್ನು ಕೊಟ್ಟನು” ಎಂದು, ಆ ಮಗುವಿಗೆ “ಸೇತ್” ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆದಾಮ್ ಮತ್ತು ಅವನ ಹೆಂಡತಿಗೆ ಮತ್ತೊಂದು ಗಂಡುಮಗು ಆಯಿತು. ಅಕೆ, “ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೆ ಸಂತಾನವನ್ನು ಅನುಗ್ರಹಿಸಿದ್ದಾರೆ,” ಎಂದುಕೊಂಡು ಅವನಿಗೆ “ಸೇತ್" ಎಂದು ನಾಮಕರಣ ಮಾಡಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆದಾಮನು ತಿರಿಗಿ ತನ್ನ ಹೆಂಡತಿಯನ್ನು ಕೂಡಲು ಆಕೆ ಗಂಡುಮಗುವನ್ನು ಹೆತ್ತು - ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೆ ಸಂತಾನವನ್ನು ನೇವಿುಸಿದನೆಂದು ಆ ಮಗುವಿಗೆ ಸೇತನೆಂಬ ಹೆಸರಿಟ್ಟಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆದಾಮನು ತಿರಿಗಿ ತನ್ನ ಹೆಂಡತಿಯನ್ನು ಕೂಡಲು, ಆಕೆಗೆ ಮತ್ತೊಬ್ಬ ಮಗ ಹುಟ್ಟಿದನು. ಹವ್ವಳು, “ದೇವರು ನನಗೆ ಮತ್ತೊಬ್ಬ ಮಗನನ್ನು ಕೊಟ್ಟನು. ಕಾಯಿನನು ಕೊಂದ ಹೇಬೆಲನಿಗೆ ಬದಲಾಗಿ ದೇವರು ನನಗೆ ಗಂಡುಮಗುವನ್ನು ಕೊಟ್ಟನು” ಎಂದು ಹೇಳಿ ಆ ಮಗುವಿಗೆ ಸೇತ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿ |